Dhruva Sarja Children Naming Ceremony: ಅಯೋಧ್ಯೆಯಲ್ಲಿ ಇಂದು ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಳ್ಳುವುದಕ್ಕೆ ಇಡೀ ದೇಶವೇ ಎದುರು ನೋಡುತ್ತಿದ್ದು, ಈಗಾಗಲೇ ಈ ಕಾರ್ಯಕ್ರಮಕ್ಕೆ ಬೇಕಿರೋ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ದೇಶದ ಮೂಲೆಯಲ್ಲಿ ಜನರು ರಾಮನಾಮ ಜಪವನ್ನು ಮಾಡುತ್ತಿದ್ದರೇ, ಇನ್ನೊಂದು ಕಡೆ ಸಿನಿಮಾ ತಾರೆಯರಿಗೆ, ಕ್ರೀಡಾಪಟುಗಳಿಗೆ, ರಾಜಕಾರಣಿಗಳಿಗೆ, ಉದ್ಯಮಿಗಳಿಗೆ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವಂತೆ ಆಹ್ವಾನವನ್ನು ನೀಡಲಾಗಿದೆ. 


COMMERCIAL BREAK
SCROLL TO CONTINUE READING

ಇದೇ ಶುಭ ಸಮಾರಂಭದಂದು ಶ್ರೀರಾಮ,ಆಂಜನೇಯನ ಭಕ್ತ ಕನ್ನಡ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕೂಡ ಉತ್ತಮ ಕೆಲಸಕ್ಕೆ ಕೈ ಹಾಕಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ದಿನದಂದೇ ಧ್ರುವ ಸರ್ಜಾ ತಮ್ಮ ಮಕ್ಕಳಿಗೆ ನಾಮಕರಣ ಮಾಡುವುದಕ್ಕೆ ನಿರ್ಧರಿಸಿದ್ದು, ಈ ನಟನ ಆಪ್ತರ ಪ್ರಕಾರ, ಧ್ರುವ ಸರ್ಜಾ ಹಾಗೂ ಸರ್ಜಾ ಕುಟುಂಬ ಆಂಜನೇಯ ಹಾಗೂ ಶ್ರೀರಾಮನ ಭಕ್ತರಾಗಿರುವುದರಿಂದ ಮಕ್ಕಳಿಗೆ ಇಡುವ ಹೆಸರು ರಾಮಾಯಣಕ್ಕೆ ಹೊಂದಿಕೊಂಡಂತೆ ಇರುತ್ತೆ ಎಂದು ಹೇಳಲಾಗುತ್ತಿದೆ. 


ಇದನ್ನೂ ಓದಿ: Ayodhya Ram Mandir: ರಾಮಮಂದಿರ ನಿರ್ಮಾಣಕ್ಕೆ ಸಿನಿಮಾ ತಾರೆಯರು ನೀಡಿದ ದೇಣಿಗೆ ಎಷ್ಟು ಗೊತ್ತೇ?


ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ಪ್ರೇರಣಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಈ ಹಿಂದೆ ಮಗಳು ಜನಿಸಿದಾಗಲೇ ನಾಮಕರಣ ಯಾವಾಗ ಅಂತ  ಅಭಿಮಾನಿಗಳು ಪ್ರಶ್ನೆ ಮಾಡುತ್ತಲೇ ಇದ್ದರು. ಅದಕ್ಕೆ ಧ್ರುವ ಸರ್ಜಾ ಒಂದು ಸಮಯ ನೋಡಿ ನಾಮಕರಣ ಮಾಡುತ್ತೇವೆ ಅಂತ ಪ್ರತಿಕ್ರಿಯೆ ನೀಡಿದ್ದರು. ಆದರೆ ಮಗಳು ಜನಿಸಿದ ಬಳಿಕ ಪುತ್ರನ ಜನನ ಆಗಿದ್ದರೂ, ಮಗಳಿಗೆ ಹೆಸರಿಟ್ಟಿರದ ಕಾರಣ, ಈ ಪ್ರಶ್ನೆ ಅಭಿಮಾನಿಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಆಗಾಗ ಬರುತ್ತಲೇ ಇತ್ತು. 


ಧ್ರುವ ಮಗಳು 2022ರ ಅಕ್ಟೋಬರ್ 2 ರಂದು ಹುಟ್ಟಿದ್ರೆ, 2023ರ ಸೆಪ್ಟೆಂಬರ್ ತಿಂಗಳಲ್ಲಿ ಮಗು ಜನಿಸಿದ್ದ. ಈಗ ಇಬ್ಬರಿಗೂ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಈ ವಿಶೇಷ ದಿನದಂದೇ ನಾಮಕರಣ ಮಾಡುವುದಕ್ಕೆ ನಿರ್ಧರಿಸಿದ್ದಾರೆ. ಇಂದು ಚಿರು ಸರ್ಜಾ ಸಮಾಧಿ ಇರೋ ನೆಲಗುಳಿಯ ಧ್ರುವ ಸರ್ಜಾ ಫಾರ್ಮ್ ಹೌಸ್‌ನಲ್ಲಿ ಮಕ್ಕಳ ನಾಮಕರಣ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಸರ್ಜಾ ಕುಟುಂಬಸ್ಥರು ಭಾಗವಹಿಸಲಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.