Kuladhalli Keelyaavuhdo: ಹೊಸವರ್ಷದ ಮೊದಲ‌ ದಿನ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಫಸ್ಟ್ ಲುಕ್ ರಿಲೀಸ್‌ ಆಗಿದೆ. ಈ ಚಿತ್ರವನ್ನು ಕೆ ರಾಮ್ ನಾರಾಯಣ್ ನಿರ್ದೇಶಿಸುತ್ತಿದ್ದು, ಯೋಗರಾಜ್‌ ಭಟ್‌ ಅವರು ಈ ಸಿನಿಮಾದ ಕಥೆ ಹೆಣೆದಿದ್ದಾರೆ. ಸಂತೋಷ್‌ ಕುಮಾರ್‌ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಡೆನೂರು ಮನು ಈ ಚಿತ್ರಕೆ ನಾಯಕರಾಗಿ ನಟಿಸಿದ್ದಾರೆ, ಇನ್ನೂ ಈ ಚಿತ್ರಕ್ಕೆ ನಾಯಕಿಯಾಗಿ ಮೌನ ಗುಡ್ಡೆಮನೆ ನಟಿಸುತ್ತಿದ್ದಾರೆ. 


COMMERCIAL BREAK
SCROLL TO CONTINUE READING

ಆಕ್ಷನ್ ಪ್ರಿನ್ಸ್  ಧ್ರುವ ಸರ್ಜಾ ಈ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಫಸ್ಟ್ ಲುಕ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರತ್ತಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.


ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಇತ್ತೀಚೆಗಷ್ಟೇ ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ ಸಂಗೀತ ಸಂಯೋಜಿಸಿರುವ ಈ ಚಿತ್ರದ ಆಡಿಯೋ ರೈಟ್ಸ್ ಕೂಡ ಮನೋಮೂರ್ತಿ ಮ್ಯೂಸಿಕಲ್ ಕಂಪನಿಗೆ ಬಾರಿ ಮೊತ್ತಕ್ಕೆ ಮಾರಾಟವಾಗಿದೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ , ರಾಮ್ ನಾರಾಯಣ್ ಹಾಡುಗಳನ್ನು ಬರೆದಿದ್ದಾರೆ.  ಉತ್ತಮ ಕಂಟೆಂಟ್ ವುಳ್ಳ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್