ಬಾಂಡ್ ರವಿ` ಸಾಥ್ ಕೊಟ್ಟ ಪೊಗರು ಪೋರ-ಯಂಗ್ ಟೈಗರ್... ಪ್ರಮೋದ್ ಬೆನ್ನು ತಟ್ಟಿದ ಧ್ರುವ-ವಿನೋದ್
ಬಾಂಡ್ ರವಿ ಸಿನಿಮಾಗೆ ವಿನೋದ್ ಪ್ರಭಾಕರ್ ಕ್ಲ್ಯಾಪ್ ಮಾಡಿದ್ರೆ, ಧ್ರುವ ಸರ್ಜಾ ಕ್ಯಾಮರಾಗೆ ಚಾಲನೆ ನೀಡಿದರು.
ಬೆಂಗಳೂರು : ಸ್ಯಾಂಡಲ್‌ವುಡ್‌ನ ಪ್ರತಿಭಾನ್ವಿತ ನಾಯಕ ನಟ ಪ್ರಮೋದ್ ನಾಯಕನಾಗಿ ನಟಿಸುತ್ತಿರುವ ಬಾಂಡ್ ರವಿ ಸಿನಿಮಾಗೆ ಪೊಗರು ಪೋರ ಧ್ರುವ ಹಾಗೂ ಯಂಗ್ ಟೈಗರ್ ವಿನೋದ್ ಪ್ರಭಾಕರ್ ಸಾಥ್ ಕೊಟ್ಟಿದ್ದಾರೆ. ಸಿನಿಮಾದ ಮುಹೂರ್ತ ಸಮಾರಂಭಕ್ಕೆ ಆಗಮಿಸಿದ ಧ್ರುವ-ವಿನೋದ್, ಪ್ರಮೋದ್ ಬೆನ್ನು ತಟ್ಟಿ ಇಡೀ ಸಿನಿಮಾ ಟೀಂಗೆ ಶುಭಾಶಯ ತಿಳಿಸಿದ್ದಾರೆ.
ವಿನೋದ್ ಕ್ಲ್ಯಾಪ್-ಕ್ಯಾಮರಾಗೆ ಧ್ರುವ ಚಾಲನೆ :
ಬಾಂಡ್ ರವಿ ಸಿನಿಮಾಗೆ ವಿನೋದ್ ಪ್ರಭಾಕರ್ ಕ್ಲ್ಯಾಪ್ ಮಾಡಿದ್ರೆ, ಧ್ರುವ ಸರ್ಜಾ ( Dhruva Sarja) ಕ್ಯಾಮರಾಗೆ ಚಾಲನೆ ನೀಡಿದರು. ಬಳಿಕ ಮಾತಿಗಿಳಿದ ವಿನೋದ್, ಧ್ರುವ ನನ್ನ ತಮ್ಮ. ನನ್ನ ಕಡೆಯಿಂದ ಕ್ಲ್ಯಾಪ್ ಮಾಡಿಸಿದ್ದಕ್ಕೆ ಧನ್ಯವಾದ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.
ಇದನ್ನೂ ಓದಿ : ಇಳಯರಾಜ ಸಂಗೀತ ನಿರ್ದೇಶನದ "ಪ್ರೀತ್ಸು" ಚಿತ್ರದ ಹಾಡುಗಳ ಬಿಡುಗಡೆ
ಬಳಿಕ ಧ್ರುವ ಸರ್ಜಾ, ವಿನೋದ್ ಪ್ರಭಾಕರ್ ನಮ್ಮಣ್ಣ ಎನ್ನುತ್ತಾ, ಸಿನಿಮಾದ ಟೈಟಲ್ ಕೇಳಿದ್ರೆ ಫೀಲ್ಡ್ ಸಿನಿಮಾ ಅನಿಸುತ್ತದೆ. ಇದು ಪ್ರಾಮಿಸಿಂಗ್ ಸಿನಿಮಾ. ಪ್ರತಿಯೊಬ್ಬರಿಗೂ ಪ್ರೋತ್ಸಾಹ ಮಾಡಬೇಕು ಅಂತಾ ನೆಗೆಟಿವ್ ಕಮೆಂಟ್ ಮಾಡುವವರಿಗೆ ವಾರ್ನಿಂಗ್ ಕೊಟ್ರು.
ಪ್ರಮೋದ್ ಮತ್ತು ನಾನು, ಅಪ್ಪು ಸರ್ ಅಭಿಮಾನಿಯಾಗಿ ಬಾಂಡ್ ರವಿ ಸಿನಿಮಾದಲ್ಲಿ ನಟಿಸ್ತಿದ್ದೇವೆ. ಅಣ್ಣಾ ಬಾಂಡ್ ಸಿನಿಮಾದಲ್ಲಿ ಅಪ್ಪು ಸರ್ ಮಿಂಚಿದ್ದ ಬಾಂಡ್ ರವಿ ಪಾತ್ರದ ರೀತಿ ಇರುತ್ತದೆ. ಹೀಗಾಗಿ ಅಪ್ಪು ಸರ್ ಮ್ಯಾನರಿಸಂ, ಆಕ್ಟಿಂಗ್ ಖದರ್ ನೋಡಿ ಕಲಿಯುತ್ತಿದ್ದೇನೆ. ಒಳ್ಳೆ ಪ್ರೊಡಕ್ಷನ್ ಹೌಸ್, ಒಳ್ಳೆ ಫ್ಯಾಷನ್ ಪ್ರೊಡ್ಯೂಸರ್ ಎಂದರು.
ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ಸಿನಿಮಾದಲ್ಲಿ ನಟಿಸ್ತಿದ್ದಾರೆ. ಕಳೆದ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಯುಗಾದಿ ಹಬ್ಬಕ್ಕೆ ಫಸ್ಟ್ ಲುಕ್ ರಿಲೀಸ್ ಮಾಡಲಾಗಿತ್ತು. ಅಂದಹಾಗೆ ಬಾಂಡ್ ರವಿ ಕಮರ್ಷಿಯಲ್ ಎಮೋಷನಲ್ ಥ್ರಿಲ್ಲರ್ ಜಾನರ್ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮ್ಸ್ ಬ್ಯಾನರ್‌ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದಾರೆ. ಈ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಾಣ ಮಾಡಿದ್ದರು.
ಇದನ್ನೂ ಓದಿ : 'ಕೆಜಿಎಫ್-2' ಹಾಡಿಗೆ ಫ್ಯಾನ್ಸ್ ಫಿದಾ..! ಎಷ್ಟಾಯ್ತು ಗೊತ್ತಾ ವೀವ್ಸ್..?
ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆ.ಎಸ್.ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನಿಲ್ & ದೇವರಾಜ್ ಸಂಭಾಷಣೆ, ಮನೋಮೂರ್ತಿ ಸಂಗೀತ ಸಿನಿಮಾಕ್ಕಿದೆ. ಜಯಂತ್ ಕಾಯ್ಕಿಣಿ, ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ. ಇಂದಿನಿಂದ ಶೂಟಿಂಗ್ ನಡೆಯುತ್ತಿದ್ದು, ಬೆಂಗಳೂರು, ಶಿವಮೊಗ್ಗ, ಕೊಡಚಾದ್ರಿ ಸುತ್ತಮುತ್ತ ಐವತ್ತು ದಿನಗಳ ಕಾಲ ಶೂಟಿಂಗ್ ಮಾಡಲು ಚಿತ್ರತಂಡ ಪ್ಲ್ಯಾನ್ ಹಾಕಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.