ಮಾರ್ಚ್ 22 ರಂದು ಬಿಡುಗಡೆಯಾಗಲಿದೆ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ  "ದಿಲ್ ಖುಷ್" 

Written by - YASHODHA POOJARI | Edited by - Manjunath N | Last Updated : Mar 13, 2024, 04:11 PM IST
  • ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ
  • ಪ್ರದ್ಯೋತನ್ ಹಿನ್ನೆಲೆ ಸಂಗೀತ ನೀಡಿದ್ದಾರೆ
  • ಅಶೋಕ್ ಅವರ ಸಾಹಸ ನಿರ್ದೇಶನವಿರುವ "ದಿಲ್ ಖುಷ್" ಚಿತ್ರದ ನಾಯಕನಾಗಿ ರಂಜಿತ್ ನಟಿಸಿದ್ದಾರೆ.
ಮಾರ್ಚ್ 22 ರಂದು ಬಿಡುಗಡೆಯಾಗಲಿದೆ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ  "ದಿಲ್ ಖುಷ್"  title=

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಹಾಗೂ ಪ್ರಮೋದ್ ಜಯ ನಿರ್ದೇಶನದ "ದಿಲ್ ಖುಷ್" ಚಿತ್ರ ಇದೇ ಮಾರ್ಚ್ 22 ರಂದು ತೆರೆಗೆ ಬರಲಿದೆ. 

ಇದನ್ನೂ ಓದಿ: ಸಚಿವ ಮಹಾದೇವಪ್ಪ ಮಾತಿಗೆ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ!!

ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ "ದಿಲ್ ಖುಷ್" ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ.ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ.ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕರೆ ಬರೆದಿದ್ದಾರೆ. 

ಇದನ್ನೂ ಓದಿ: Janhvi Kapoor : ನಟಿ ಜಾಹ್ನವಿ ಕಪೂರ್‌ʼಗೆ ಕಾಡ್ತಿದೆ ಈ ಅನಾರೋಗ್ಯ !

ಐದು ಹಾಡುಗಳಿರುವ ಈ ಚಿತ್ರಕ್ಕೆ ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ.ಪ್ರದ್ಯೋತನ್ ಹಿನ್ನೆಲೆ ಸಂಗೀತ ನೀಡಿದ್ದಾರೆ.ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿರುವ "ದಿಲ್ ಖುಷ್" ಚಿತ್ರದ ನಾಯಕನಾಗಿ ರಂಜಿತ್ ನಟಿಸಿದ್ದಾರೆ. ಸ್ಪಂದನ ಸೋಮಣ್ಣ ಈ ಚಿತ್ರದ ನಾಯಕಿ. ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News