ನಿರ್ದೇಶಕ ಬ್ರಹ್ಮಗೆ ಒಲಿದ ಬೆಂಗಳೂರು ಸಂಸ್ಥೆಯ ದಾದಾಸಾಹೇಬ್ ಫಾಲ್ಕೆ ಅಚೀವ್ ಮೆಂಟ್ ಪ್ರಶಸ್ತಿ
ನಿರ್ದೇಶಕ ಬ್ರಹ್ಮ ಅವರಿಗೆ ಬೆಂಗಳೂರು ಮೂಲದ ಸಂಸ್ಥೆ ಯೊಂದು ನೀಡುವ ದಾದಾಸಾಹೇಬ್ ಫಾಲ್ಕೆ ಅಚೀವ್ ಮೆಂಟ್ 2024 ಪ್ರಶಸ್ತಿ ಲಭಿಸಿದೆ.
ನಿರ್ದೇಶಕ ಬ್ರಹ್ಮ ಅವರಿಗೆ ಬೆಂಗಳೂರಿನ ಸಂಸ್ಥೆಯೊಂದು ಭಾರತೀಯ ಚಿತ್ರರಂಗದ ಮೇರು ನಿರ್ದೇಶಕ ದಾದಾ ಸಾಹೇಬ್ ಫಾಲ್ಕೆ ಅವರ ಹೆಸರಿನಲ್ಲಿ ಇದೇ ಪ್ರಥಮ ಬಾರಿಗೆ ಸ್ಥಾಪಿಸಿರುವ ಪ್ರಶಸ್ತಿಯನ್ನು ನೀಡಲಾಗಿದೆ. ನಿರ್ದೇಶಕ ಬ್ರಹ್ಮ ಅವರಿಗೆ ಬೆಂಗಳೂರು ಮೂಲದ ಸಂಸ್ಥೆ ಯೊಂದು ನೀಡುವ ದಾದಾಸಾಹೇಬ್ ಫಾಲ್ಕೆ ಅಚೀವ್ ಮೆಂಟ್ 2024 ಪ್ರಶಸ್ತಿ ಲಭಿಸಿದೆ.
ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ಮೋಷನ್ ಕ್ಯಾಪ್ಚರ್ ತಂತ್ರಜ್ಞಾನ ಬಳಸಿ ಚಿತ್ರೀಕರಣ ಮಾಡಿರುವ ಸಿನಿಮಾ 'ಸಾರಿ' (ಕರ್ಮ ರಿಟರ್ನ್ಸ್). ಬ್ರಹ್ಮ ಈ ಚಿತ್ರದ ನಿರ್ದೇಶಕ. ರಾಗಿಣಿ ದ್ವಿವೇದಿ ಹಾಗೂ ಅಫ್ಜಲ್ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.
ಇದನ್ನೂ ಓದಿ: ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ್ರಾ ನಟಿ ಶ್ರೀದೇವಿ ಪುತ್ರಿ!? ಜಾನ್ವಿ ಕಪೂರ್ ಸೆನ್ಸೇಷನಲ್ ವಿಡಿಯೋ ವೈರಲ್!!
ನಿರ್ದೇಶಕರಿಗೆ ಪ್ರಶಸ್ತಿ ಬಂದಿರುವುದಕ್ಕೆ ಚಿತ್ರತಂಡ ಸಂತಸ ವ್ಯಕ್ತಪಡಿಸಿ, ಅವರನ್ನು ಅಭಿನಂದಿಸಿದೆ. ಈ ಹಿಂದೆ 2014 ರಲ್ಲಿ ತೆರೆಕಂಡ ಸೌಂದರ್ಯ ರಜನಿಕಾಂತ್ ನಿರ್ದೇಶನದ, ರಜನಿಕಾಂತ್ ಹಾಗೂ ದೀಪಿಕಾ ಪಡುಕೋಣೆ ನಟಿಸಿದ್ದ "ಕೊಚಾಡಿಯನ್" ಭಾರತದ ಮೊದಲ ಮೋಷನ್ ಕ್ಯಾಪ್ಚರ್ ಚಿತ್ರವಾಗಿತ್ತು.
ಕನ್ನಡದಲ್ಲಿ "ಸಾರಿ" (ಕರ್ಮ ರಿಟರ್ನ್) ಈ ವಿಶೇಷ ತಂತ್ರಜ್ಞಾನ ಬಳಸಿಕೊಂಡು ಮಾಡಿರುವ ಮೊದಲ ಚಿತ್ರವಾಗಿದೆ. "ಸಾರಿ" ಚಿತ್ರ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿ ತೆರೆಗೆ ಬರಲು ಸಿದ್ದವಾಗಿದೆ.
ಇದನ್ನೂ ಓದಿ: ನಟಿ ಐಶ್ವರ್ಯ ರೈ ಈ 2 ಅಭ್ಯಾಸಗಳಿಂದ ಬೇಸತ್ತ ಶ್ವೇತಾ, ಜಯಾ ಬಚ್ಚನ್ ಹೇಳಿದ್ದೇನು ಗೊತ್ತಾ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.