Director M S Sathyu Got Award: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೇ ಫೆಬ್ರವರಿ 29 ರಿಂದ ಪ್ರಾರಂಭವಾಗಿದ್ದು ಮಾರ್ಚ್ 7 ರಂದು ಮುಕ್ತಾಯವಾಗಲಿದೆ. 2023-24ನೇ ಸಾಲಿನ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.
ಇದೇ ಮಾರ್ಚ್ 7 ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕೊನೆಯ ದಿನದಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಈ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ವಿಚಾರದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಪೋಸ್ಟ್ ಶೇರ್ ಮಾಡುವುದರ ಮೂಲಕ ಖುಷಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: Kamal Movie: 100 ಕೋಟಿಯ ಥಗ್ ಲೈಫ್ ಚಿತ್ರದಿಂದ ಹೊರ ನಡೆದ ದುಲ್ಕರ್!
ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ "15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ"ದ "ಜೀವಮಾನ ಸಾಧನೆ ಪ್ರಶಸ್ತಿ"ಗೆ ಆಯ್ಕೆ ಮಾಡಲಾಗಿದೆ.
ಅವರ ನಿರ್ದೇಶನದ ಹಿಂದಿ… pic.twitter.com/8IgqovDOYG
— Siddaramaiah (@siddaramaiah) March 5, 2024
ಸಿಎಂ ಸಿದ್ದರಾಮಯ್ಯ ಟ್ವಿಟರ್‌ನ ಪೋಸ್ಟ್‌ನಲ್ಲಿ "ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ ಎಸ್ ಸತ್ಯು) ಅವರು ಕಲಾಜಗತ್ತಿಗೆ ಸಲ್ಲಿಸಿರುವ ಅನನ್ಯ ಸೇವೆಯನ್ನು ಗುರುತಿಸಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆʼ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ." ಎಂದು ಬರೆದಿದ್ದಾರೆ.
ಇನ್ನು ಸಾಧನಗಳ ಬಗ್ಗೆ ಮಾತನಾಡುತ್ತಾ "ಅವರ ನಿರ್ದೇಶನದ ಹಿಂದಿ ಚಿತ್ರ ‘ಗರಂ ಹವಾ’ ಹಲವಾರು ರಾಷ್ಟ್ರೀಯ - ಅಂತಾರಾಷ್ಟ್ರೀಯ ಪ್ರಶಸ್ತಿ ಗಳಿಸಿದ್ದರೆ, ಕನ್ನಡದ 'ಬರ' ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಪಡೆದಿತ್ತು.ಕಲಾ ನಿರ್ದೇಶಕರಾಗಿ ಅವರು ನಿರ್ದೇಶಿಸಿದ ಮೊದಲ ಚಲನಚಿತ್ರವಾದ ಹಕೀಕತ್ 'ಫಿಲ್ಮ್ ಫೇರ್ ಪ್ರಶಸ್ತಿ'ಯನ್ನು ಪಡೆದಿತ್ತು. ದಾರಾಶೀಕೋ ನಾಟಕವು ಆಧುನಿಕ ಉತ್ಕೃಷ್ಟ ನಾಟಕವೆಂದು ಗುರುತಿಸಲ್ಪಟ್ಟಿದ್ದು ಅವರ ಇನ್ನೊಂದು ಸಾಧನೆಯಾಗಿದೆ" ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Aamir Khan : ಹೊಸ ಅವತಾರದಲ್ಲಿ ಅಮಿರ್ ಖಾನ್.. ಅಭಿಮಾನಿಗಳಲ್ಲಿ ಹೆಚ್ಚಾಯ್ತು ಕುತೂಹಲ!
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅನಿಸಿಗಳ ಬಗ್ಗೆ ವಿವರಿಸುತ್ತಾ "ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’’ ಎಂದು ಶುಭಾಶಯಗಳನ್ನು ಹೇಳುವುದರ ಜೊತೆಗೆ ತಮಗಾದ ಸಂತಸವನ್ನು ಕೂಡ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.