Director M S Sathyu Got Award: 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೇ ಫೆಬ್ರವರಿ 29 ರಿಂದ ಪ್ರಾರಂಭವಾಗಿದ್ದು ಮಾರ್ಚ್ 7 ರಂದು ಮುಕ್ತಾಯವಾಗಲಿದೆ. 2023-24ನೇ ಸಾಲಿನ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಾರಿ ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ನಿರ್ದೇಶಕ ಎಂ ಎಸ್‌ ಸತ್ಯು ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ.


COMMERCIAL BREAK
SCROLL TO CONTINUE READING

ಇದೇ ಮಾರ್ಚ್‌ 7 ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕೊನೆಯ ದಿನದಂದು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ ಈ ಹಿರಿಯ ನಿರ್ದೇಶಕ ಎಂ ಎಸ್ ಸತ್ಯು ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ವಿಚಾರದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್‌ನಲ್ಲಿ ಪೋಸ್ಟ್‌ ಶೇರ್‌ ಮಾಡುವುದರ ಮೂಲಕ ಖುಷಿ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: Kamal Movie: 100 ಕೋಟಿಯ ಥಗ್ ಲೈಫ್ ಚಿತ್ರದಿಂದ ಹೊರ ನಡೆದ ದುಲ್ಕರ್!


Aamir Khan : ಹೊಸ ಅವತಾರದಲ್ಲಿ ಅಮಿರ್‌ ಖಾನ್.. ಅಭಿಮಾನಿಗಳಲ್ಲಿ ಹೆಚ್ಚಾಯ್ತು ಕುತೂಹಲ!


ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅನಿಸಿಗಳ ಬಗ್ಗೆ ವಿವರಿಸುತ್ತಾ "ಹೀಗೆ ನಮ್ಮೂರಿನಲ್ಲಿ ಹುಟ್ಟಿದ ಮೇರು ಸಾಧಕ, ಹಿರಿಯ ರಂಗಕರ್ಮಿಯೊಬ್ಬರು ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತ್ಯಂತ ಖುಷಿಯ ವಿಚಾರ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು’’ ಎಂದು ಶುಭಾಶಯಗಳನ್ನು ಹೇಳುವುದರ ಜೊತೆಗೆ ತಮಗಾದ ಸಂತಸವನ್ನು ಕೂಡ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.