Naanu Mattu Gunda 2 : 'ನಾನು ಮತ್ತು ಗುಂಡ' ಚಿತ್ರದ ಸೀಕ್ವೇಲ್ ಆಗಿ ತೆರೆಗೆ ಬರುತ್ತಿರುವ ನಾನು ಮತ್ತು ಗುಂಡ -‌2 ನಲ್ಲಿ ನಾಯಕ ರಾಕೇಶ್ ಅಡಿಗ ಜೊತೆ ಡಾಗ್ ಸಿಂಬ ಕೂಡ ಪ್ರಮುಖ‌ ಪಾತ್ರದಲ್ಲಿ ಕಾಣಿಸಿಕೊಂಡಿದೆ. ರಘುಹಾಸನ್ ಆಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರ ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ.


COMMERCIAL BREAK
SCROLL TO CONTINUE READING

ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು ಡಬ್ಬಿಂಗ್ ಕೆಲಸ ಈಗಷ್ಟೇ ಶುರುವಾಗಿದೆ. ಇಡೀ ಸಿನಿಮಾದಲ್ಲಿ ಎಲ್ಲಾ ರೀತಿಯ ಎಮೋಷನ್ಸ್ ಇದ್ದು, ವಿಶೇಷವಾಗಿ ಡಾಗ್ ಸಿಂಬಾ ರೆಕಾರ್ಡಿಂಗ್ ಸ್ಟುಡೊಯೋಗೆ ಬಂದು ತನ್ನ ಪಾತ್ರಕ್ಕೆ ತಾನೇ ಡಬ್ ಮಾಡುತ್ತಿದೆ. ಇಡೀ ಚಿತ್ರದಲ್ಲಿ ಸಿಂಬಾನ ಒರಿಜಿನಲ್ ಸೌಂಡ್ ಇರುತ್ತದೆ. ಡಬ್ಬಿಂಗ್ ಅಂದ್ರೆ, ಸಿಂಬಾ ಮಾತಾಡೋದಿಲ್ಲ. ಎಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಅದರ ಬೊಗಳೋ ಸೌಂಡ್ ರೆಕಾರ್ಡ್ ಮಾಡಲಾಗುತ್ತಿದೆ.


ಇದನ್ನೂ ಓದಿ: 60ರ ಹರೆಯದ ನಟಿಯಿಂದ ಪುಷ್ಪಾ 2 ಸಿನಿಮಾದಲ್ಲಿ ಐಟಂ ಸಾಂಗ್..!? ಅದನ್ಯಾರು ನೋಡ್ತಾರೆ ಗುರು..


ಸಿಂಬಾನ  ಒರಿಜಿನಲ್ ಸೌಂಡ್‌ ಅನ್ನು ನಾವು ರೆಕಾರ್ಡ್ ಮಾಡುತ್ತಿದ್ದೇವೆ. ಎಮೋಷನಲ್ ಸೀನ್‌ಗಳಲ್ಲೂ ಸಿಂಬಾ ಡಬ್ಬಿಂಗ್ ಮಾಡುತ್ತಿದೆ. ಪ್ರತಿ ಜಾತಿಯ ನಾಯಿಯದೂ  ಒಂದೊಂದು ರೀತಿ ಸೌಂಡ್ ಇರುತ್ತದೆ. ಹಾಗಾಗಿಯೇ ನಾವು ನಮ್ಮ ಗುಂಡನ ಪಾತ್ರ ಮಾಡಿರೋ ಸಿಂಬಾನಿಂದಲೇ ಡಬ್ಬಿಂಗ್ ಮಾಡಿಸುತ್ತಿದ್ದೇವೆ.


ಡಾಗ್ ಕೈಲಿ ಡಬ್ಬಿಂಗ್ ಮಾಡಿಸುತ್ತಿರುವುದು ನಾವೇ ಮೊದಲೆನ್ನಬಹುದು. ಹಿಂದಿನ ಪಾರ್ಟ್ ಒನ್ ಚಿತ್ರದಲ್ಲೂ ಡಾಗ್‌ನಿಂದಲೇ ಡಬ್ಬಿಂಗ್ ಮಾಡಿಸಿದ್ದೇವೆ. ಆದರೆ, ಅದು ಕೆಲವೇ ಕೆಲವು ದೃಶ್ಯಗಳಲ್ಲಿ ಮಾತ್ರ ಆಗಿತ್ತು. ಪಾರ್ಟ್-2ನ  ಇಡೀ ಸಿನಿಮಾದಲ್ಲಿ ಡಾಗ್ ಸಿಂಬಾನೇ ಡಬ್ ಮಾಡುತ್ತಿದೆ.


ಇದನ್ನೂ ಓದಿ: ಅಣ್ಣಾವ್ರ ʼಗಂಧದಗುಡಿʼ ಸ್ಮರಿಸಿ ʼಪುಷ್ಪಾʼ ಸಿನಿಮಾ ವಿರುದ್ಧ ಗುಡುಗಿದ್ರಾ ಪವನ್‌ ಕಲ್ಯಾಣ್‌..!? ಡಿಸಿಎಂ ಹೇಳಿಕೆ ವೈರಲ್‌ 


ಇಂಡಿಯಾದಲ್ಲಿ ಇಲ್ಲಿವರೆಗೂ ಯಾರೂ ಈ ಪ್ರಯತ್ನ ಮಾಡಿಲ್ಲ ಎಂದು ನಿರ್ದೇಶಕ ಹಾಗೂ ನಿರ್ಮಾಪಕರೂ ಆದ ರಘು ಹಾಸನ್ ಹೇಳಿದ್ದಾರೆ. ಡಬ್ಬಿಂಗ್ ಕೆಲಸ ಆದ್ಮೇಲೆ ಚಿತ್ರದ DI ಮತ್ತು RR ಕೆಲಸ ಶುರು ಮಾಡಲಾಗುತ್ತದೆ. 


ಪೊಯೆಮ್ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾಗುತ್ತಿರುವ ನಾನು ಮತ್ತು ಗುಂಡ-2 ಚಿತ್ರಕ್ಕೆ ಆರ್.ಪಿ.ಪಟ್ನಾಯಕ್ ಅವರ ಸಂಗೀತ, ರುತ್ವಿಕ್ ಮುರಳೀಧರ್ ಅವರ ಹಿನ್ನೆಲೆ ಸಂಗೀತ, ತನ್ವಿಕ್ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಅವರ ಸಂಕಲನ, ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ರಾಘು ಅವರ ನೃತ್ಯನಿರ್ದೇಶನವಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.