ಬೆಂಗಳೂರು: "ಮೊಗ್ಗಿನ ಮನಸ್ಸು", "ಕೃಷ್ಣನ್ ಲವ್ ಸ್ಟೋರಿ"ಯಂತಹ ಅದ್ಭುತ ಲವ್ ಸ್ಟೋರಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಚಿತ್ರ "ಲವ್ 360". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಸಾಕಷ್ಟು ಮೆಚ್ಚುಗೆ ಪಡೆದಿದೆ. 


COMMERCIAL BREAK
SCROLL TO CONTINUE READING

ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೋಷ್ಠಿ ಆಯೋಜಿಸಿತ್ತು. ಬಹಳ ದಿನಗಳ ನಂತರ ನಿಮ್ಮನ್ನೆಲ್ಲಾ ನೋಡುತ್ತಿರುವುದು ಖುಷಿಯಾಗಿದೆ. ಮೂರು ವರ್ಷಗಳ ನಂತರ "ತಾಯಿಗೆ ತಕ್ಕ ಮಗ" ಚಿತ್ರದ ನಂತರ ನಾನು ನಿರ್ದೇಶಿಸಿರುವ ಚಿತ್ರವಿದು. ಲಾಕ್‌ಡೌನ್ ಸಮಯದಲ್ಲಿ ಸಿದ್ಧವಾದ ಕಥೆಯಿದು. ನಾನು ಉಪೇಂದ್ರ ಅವರ ಚಿತ್ರ ನಿರ್ದೇಶಿಸಬೇಕಿತ್ತು.‌ ಅದು ದೊಡ್ಡಮಟ್ಟದ ಚಿತ್ರ. ಚಿತ್ರೀಕರಣಕ್ಕೆ ಕೊರೊನಾ ನಿಯಮಾವಳಿಗಳು ಸಹಕಾರಿಯಾಗುವಂತೆ ಕಾಣಲಿಲ್ಲ. ಹಾಗಾಗಿ ಆ ಚಿತ್ರ ಮುಂದೂಡಿ, ಈ ಚಿತ್ರ ಆರಂಭ ಮಾಡಿದೆ. ಅದರಲ್ಲೂ ಹೊಸಬರೊಂದಿಗೆ ನಾನು ಕೆಲಸ ಮಾಡಿ ಸುಮಾರು ವರ್ಷಗಳೇ ಆಗಿತ್ತು. ಈ ಚಿತ್ರದ ಮೂಲಕ ಪ್ರವೀಣ್ ಎಂಬ ನೂತನ ಪ್ರತಿಭೆಯನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿದ್ದೇನೆ ಎಂದರು. 


ಇನ್ನು ಪ್ರವೀಣ್ ಸೇರಿದಂತೆ ಅವರ ಕುಟುಂಬದರೆಲ್ಲಾ ವೈದ್ಯರು. ಹೊಸಪೇಟೆ ಬಳಿಯ ಮಾರಮ್ಮನಹಳ್ಳಿಯಲ್ಲಿ ಇವರ ಆಸ್ಪತ್ರೆ ಇದೆ. ಸಾವಿರಾರು ಜನಕ್ಕೆ ಉಚಿತ ಚಿಕಿತ್ಸೆ ನೀಡಿ‌ ಪ್ರವೀಣ್ ತಂದೆ ಆ ಊರಿನ ಸುತ್ತ ಹೆಸರುವಾಸಿಯಾಗಿದ್ದರು. ಎಂಬಿಬಿಎಸ್ ಓದಿರುವ ಪ್ರವೀಣ್‌ಗೆ ನಟನೆಯಲ್ಲಿ ಆಸಕ್ತಿ. ಈ ಕುರಿತು ಅವರ ತಾಯಿ ನನ್ನ ಬಳಿ ಹೇಳಿದರು. ನಿರ್ಮಾಣವನ್ನೂ ಮಾಡುವುದಾಗಿ ಹೇಳಿದ್ದರು. ಆದರೆ ಅವರ ಬಳಿ ಈ ಚಿತ್ರಕ್ಕೆ ಬೇಕಾದಷ್ಟು ಹಣವಿಲ್ಲದ ಕಾರಣ ನಮ್ಮ ಶಶಾಂಕ್ ಸಿನಿಮಾಸ್ ಸಂಸ್ಥೆ ಸಹ ನಿರ್ಮಾಣಕ್ಕೆ ಕೈ ಜೋಡಿಸಿತ್ತು. ಪ್ರವೀಣ್‌ಗೆ ನಟನೆಗೆ ಬೇಕಾದ ಎಲ್ಲಾ ತಯಾರಿ ನೀಡಿ, ಚಿತ್ರ ಆರಂಭಿಸಲಾಯಿತು. ರಚನಾ ಇಂದರ್ ಈ ಚಿತ್ರದ ನಾಯಕಿ. ಗೋಪಾಲ್ ದೇಶಪಾಂಡೆ, ಡ್ಯಾನಿ ಕುಟ್ಟಪ್ಪ ಸೇರಿದಂತೆ ಅನೇಕ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಅಭಿಷೇಕ್ ಕಲ್ಲತ್ತಿ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಸಿದ್ ಶ್ರೀರಾಮ್ ಹಾಗೂ ಸಂಚಿತ್ ಹೆಗಡೆ ಹಾಡಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ‌. ಸದ್ಯದಲ್ಲೇ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಲಿದ್ದು, ಸೆನ್ಸಾರ್ ಮಂಡಳಿ ವೀಕ್ಷಿಸಿದ ನಂತರ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕ ಶಶಾಂಕ್ ತಿಳಿಸಿದರು.


ಇದನ್ನೂ ಓದಿ- ‘KGF-2’ ಕಣ್ತುಂಬಿಕೊಂಡಿದ್ದು ಎಷ್ಟು ಜನ..? ಕನ್ನಡ ಸಿನಿಮಾದ ಮತ್ತೊಂದು ಸಾಧನೆ!


ಆಕ್ಟರ್ ಆದ್ರು ಡಾಕ್ಟರ್ ಪ್ರವೀಣ್..!
ಚಿತ್ರದ ನಾಯಕ ನಟ ಪ್ರವೀಣ್‌ ಮಾತನಾಡಿ, ನಾನು ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದಾಗಿನಿಂದಲೂ ನಟನೆಯಲ್ಲಿ ಆಸಕ್ತಿ ಇತ್ತು. ತಿಂಗಳಲ್ಲಿ ಮೂರು ದಿನ ಆದರ್ಶ ಫಿಲಂ ಇನ್‌ಸ್ಟಿಟ್ಯೂಟ್‌ಗೆ ಬಂದು ಅಭಿನಯ ಕಲಿಯುತ್ತಿದ್ದೆ. ಅಪ್ಪನಿಗೆ ವಿಷಯ ತಿಳಿದು ಬಯ್ಯುತ್ತಿದ್ದರು. ಈಗ ಅಪ್ಪ ಇಲ್ಲ. ಅಮ್ಮನ ಮುಂದೆ ನನ್ನ ಆಸೆ ಹೇಳಿಕೊಂಡೆ. ಅಮ್ಮ ನನ್ನ‌ ಆಸೆಗೆ ಆಸರೆಯಾದರು. ನಂತರ ಶಶಾಂಕ್ ಸರ್ ಪರಿಚಯವಾಯಿತು. ಶಶಾಂಕ್ ಅವರು ಸಾಕಷ್ಟು ವರ್ಕ್ ಶಾಪ್ ನಡೆಸಿ ನನಗೆ ಅಭಿನಯ ಕಲಿಸಿದರು. ಸಾಕಷ್ಟು ತಯಾರಿ ಮಾಡಿಕೊಂಡು ಚಿತ್ರರಂಗಕ್ಕೆ ಬಂದಿದ್ದೀನಿ. ಈ ಚಿತ್ರದಲ್ಲಿ ಬೋಟ್ ಮೆಕಾನಿಕ್ ಪಾತ್ರ ಮಾಡಿದ್ದೀನಿ. ಡಾಕ್ಟರ್ ಆಗಬೇಕಿತ್ತು. ಈಗ ಆಕ್ಟರ್ ಆಗಿದ್ದೀನಿ ಎಂದರು.


ನಾನು "ಲವ್ ಮಾಕ್ಟೇಲ್" ಚಿತ್ರದಲ್ಲಿ ಅಭಿನಯಿಸಿದ್ದೆ. ಆದರೆ ಪೂರ್ಣಪ್ರಮಾಣದ ನಾಯಕಿಯಾಗಿ ಅಭಿನಯಿಸಿರುವ ಮೊದಲ ಚಿತ್ರವಿದು. ಈ ಚಿತ್ರದ ಆಡಿಷನ್ ಇದ್ದಾಗ ಅಮ್ಮ ಜಡೆ ಹಾಕಿ, ಜುಮಕಿ ಹಾಕಿಸಿಕೊಂಡು ಕರೆದುಕೊಂಡು ಹೋಗಿದ್ದರು. ನಾನು ಬೇಡ ಅಂದೆ. ಅಮ್ಮ ಇರಲಿ ಅಂದರು. ಶಶಾಂಕ್ ಅವರಿಗೆ ನಾನು ಹೋಗಿದ್ದ ರೀತಿ ಇಷ್ಟವಾಯಿತಂತೆ. ನಂತರ ನಾನು ಸೆಲೆಕ್ಟ್ ಆದೆ. ನಂತರ ನಿರ್ದೇಶಕರು ವರ್ಕ್ ಶಾಪ್ ಮೂಲಕ ಅಭಿನಯ ಹೇಳಿಕೊಟ್ಟರು. ಪಾತ್ರ ತುಂಬಾ ಚೆನ್ನಾಗಿದೆ ಅಂದರುನಟಿ ರಚನಾ ಇಂದರ್.


ಇದನ್ನೂ ಓದಿ- ಬಾಕ್ಸ್‌ ಆಫೀಸ್‌ ‌'ಬಲಭೀಮ'ನ ಎಂಟ್ರಿಗೆ ಕ್ಷಣಗಣನೆ..! 160 ಭಾಷೆಗಳಲ್ಲಿ ರಿಲೀಸ್ ಆಗಲಿದೆ 'ಅವತಾರ್‌-2


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.