Dr Vishnuvardhan 75th birthday : ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು 'ಯಜಮಾನರ ಅಮೃತ ಮಹೋತ್ಸವ'ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದಂತಹ ಎಸ್. ನಾರಾಯಣ್ ಅವರು ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರು ಜೊತೆಯಾಗಿದ್ದಾರೆ.

Yajamanara Amrita Mahotsav : ಈ ವಿಷಯವಾಗಿ ಇಂದು (22-06-2025) ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಈ ಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಶ್ರೀ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಮತ್ತೊಬ್ಬ ನಿರ್ಮಾಪಕರಾದ ರಮೇಶ್ ಯಾದವ್, ಎಸ್ ನಾರಾಯಣ್, ರಾಜೇಂದ್ರಸಿಂಗ್ ಬಾಬು ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ಅನಿವಾರ್ಯ ಕಾರಣಗಳಿಂದ ಅನುಪಸ್ಥಿತರಾಗಿದ್ದು ಈ ಘನಕಾರ್ಯಕ್ಕೆ ಸಂದೇಶವನ್ನು ಕಳುಹಿಸಿಕೊಟ್ಟು ಶುಭ ಹಾರೈಸಿದ್ದಾರೆ. ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವು ಈ ಹೊತ್ತಿನ ಅಗತ್ಯವಾಗಿದ್ದು, ಎಲ್ಲ ನಟರಿಗೂ ಅಂಥದ್ದೊಂದು ಗೌರವ ಸಂದಿದ್ದರೂ, ವಿಷ್ಣುವರ್ಧನ್ ಅವರಿಗೆ ಅಂಥಹ ಗೌರವ ಸಿಕ್ಕಿಲ್ಲವಾದ್ದರಿಂದ, ಕನ್ನಡ ಚಲನಚಿತ್ರರಂಗದಲ್ಲಿ ಇಂಥದ್ದೊಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಿಸುವ ತುರ್ತು ಇರುವುದರಿಂದ ಸಮಸ್ತ ಕಲಾವಿದರ ಸಂಘ ಮತ್ತು ಕಲಾವಿದರು ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಹಾಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ನರಸಿಂಹಲು ಅವರು ಕೂಡ ಇದೇ ಮಾತುಗಳನ್ನು ಹೇಳಿ, ವಾಣಿಜ್ಯ ಮಂಡಳಿಯು ಈ ಕಾರ್ಯಕ್ರಮಕ್ಕೆ ಕೇವಲ ಸಹಕಾರವನ್ನಲ್ಲದೆ ಸಹಭಾಗಿತ್ವವನ್ನು ವಹಿಸಿಕೊಳ್ಳಲಿದೆ ಎಂದು ಭರವಸೆ ನೀಡಿದರು. ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ಅವರು ಕೂಡ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದರು.
ರಾಜೇಂದ್ರಸಿಂಗ್ ಬಾಬು ಅವರು ಮಾತನಾಡಿ, ಈ ಅಮೃತ ಮಹೋತ್ಸವಕ್ಕೆ ಭಾರತೀಯ ಚಿತ್ರರಂಗದ ವಿಷ್ಣುವರ್ಧನ್ ಅವರ ಆಪ್ತರನ್ನೆಲ್ಲ ಆಹ್ವಾನಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಜೊತೆಗೆ ಹಿಂದಿ, ತಮಿಳು, ಮಲಯಾಳಂ, ತೆಲುಗು ಚಿತ್ರರಂಗದ ಖ್ಯಾತ ನಟರನ್ನು ಈ ಅಮೃತ ಮಹೋತ್ಸವಕ್ಕೆ ಹಾಜರಾಗುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.
ನಂತರ ಮಾತನಾಡಿದ ಎಸ್. ನಾರಾಯಣ್ ಅವರು, ಡಾ. ವಿಷ್ಣುವರ್ಧನ್ ಅವರ ಅಮೃತ ಮಹೋತ್ಸವವನ್ನು ಅರಮನೆ ಮೈದಾನದಲ್ಲಿ ಎರಡು ದಿನಗಳ ಕಾಲ ಆಯೋಜಿಸಿ, ಇದಕ್ಕೆ ಕನ್ನಡದ ಸಮಸ್ತ ಚಿತ್ರರಂಗ ಭಾಗವಹಾಸಲಿದೆ ಎಂಬ ಭರವಸೆಯ ಜೊತೆಗೆ, ಈಗಾಗಲೇ ಅಮರನಟ ಎಂಬ ಕಾರ್ಯಕ್ರಮವನ್ನು ಡಾ. ರಾಜ್ ಕುಮಾರ್ ಅವರ ಹೆಸರಲ್ಲಿ , ಅಂಬಿ ಸಂಭ್ರಮ ಎನ್ನುವ ಕಾರ್ಯಕ್ರಮವನ್ನು ಡಾ. ಅಂಬರೀಷ್ ಅವರ ಹೆಸರಲ್ಲಿ ಆಯೋಜಿಸಿದ ಅನುಭವ ತನಗಿರುವುದರಿಂದ, ಕನ್ನಡ ಚಿತ್ರರಂಗದ ತ್ರಿಮೂರ್ತಿಗಳಲ್ಲೊಬ್ಬರದ ಡಾ. ವಿಷ್ಣುವರ್ಧನ್ ಅವರ ಕಾರ್ಯಕ್ರಮದಲ್ಲೂ ಭಾಗಿಯಾಗುವ ಭಾಗ್ಯ ನನಗೆ ದಕ್ಕಿರುವುದು ತಮ್ಮ ಪುಣ್ಯ ಎಂಬ ಸಂತೋಷವನ್ನು ಹೊರಹಾಕಿದರು.
ಕೊನೆಯಲ್ಲಿ ಮಾತನಾಡಿದ ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷರಾದ ಶ್ರೀ ವೀರಕಪುತ್ರ ಶ್ರೀನಿವಾಸ್ ಅವರು, ಈ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷ ಜನ ಸೇರುವ ನಿರೀಕ್ಷೆ ಇದ್ದು, ಕನ್ನಡ ಚಿತ್ರರಂಗದ ಮಟ್ಟಿಗೆ ಇದು ಬೂಸ್ಟರ್ ಡೋಸ್ ಕಾರ್ಯಕ್ರಮವಾಗಿ ಕೆಲಸ ಮಾಡಲಿದೆ ಮತ್ತು ಡಾ. ವಿಷ್ಣುವರ್ಧನ್ ಅವರಿಗೆ ಆದ ಅನೇಕ ನೋವುಗಳಿಗೆ ಉತ್ತರವಾಗಿ ಈ ಕಾರ್ಯಕ್ರಮ ಆಯೋಜನೆಗೊಳ್ಳಲಿದೆ ಎಂದು, ಮತ್ತು ಇಡೀ ರಾಜ್ಯಾದ್ಯಂತ ದಸರಾ ರೀತಿಯಲ್ಲಿ ಈ ಉತ್ಸವವನ್ನು ಆಯೋಜಿಸಬೇಕೆಂದು ಕರೆ ನೀಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ