ಬೆಂಗಳೂರು: ಚಂದನವನದ ಖ್ಯಾತ ಹಿರಿಯ ನಟಿ ಜಯಂತಿ ಉಸಿರಾಟದ ಸಮಸ್ಯೆಯಿಂದ ಅಸ್ವಸ್ಥಗೊಂಡಿದ್ದು, ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.


COMMERCIAL BREAK
SCROLL TO CONTINUE READING

ಹಲವು ವರ್ಷಗಳಿಂದ ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವ ನಟಿ ಜಯಂತಿಗೆ ಇಂದು ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟಿ ಜಯಂತಿ ಅವರನ್ನು ತಕ್ಷಣ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ  ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿ ಅವರ ಬಗ್ಗೆ ನಾಳೆ ಬೆಳಿಗ್ಗೆವರೆಗೂ ಏನನ್ನು ಹೇಳಲಾಗುವುದಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.


ಈ ಬಗ್ಗೆ ಜಯಂತಿ ಅವರ ಕುಟುಂಬದಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ.