ನಟ ದುನಿಯಾ ವಿಜಿ (Duniya Vijay) ಅವರಿಗೆ ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಜ.20 ರಂದು (ನಾಳೆ) ದುನಿಯಾ ವಿಜಯ್ ಗೆ ಹುಟ್ಟುಹಬ್ಬದ ಸಂಭ್ರಮ.  ಕಳೆದ ವರ್ಷ ಕೋವಿಡ್ ಕಾರಣದಿಂದಾಗಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಸಾಧ್ಯವಾಗಿರಲಿಲ್ಲ. 


COMMERCIAL BREAK
SCROLL TO CONTINUE READING

ಈ ಬಾರಿಯಾದರೂ ವಿಜಯ್ ಜನ್ಮದಿನ (Duniya Vijay Birthday) ಆಚರಿಸುವ ಉತ್ಸಾಹದಲ್ಲಿದ್ದ ಫ್ಯಾನ್ಸ್ ಗೆ ದುನಿಯಾ ವಿಜಯ್ ಸಂದೇಶವೊಂದನ್ನು ನೀಡಿದ್ದಾರೆ.  ಈ ಸಲವೂ ಅವರು ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. 


ಇದನ್ನೂ ಓದಿ: ಅನಿರೀಕ್ಷಿತವಾಗಿ ವಿಚ್ಛೇದನ ಪಡೆದ ದಕ್ಷಿಣಭಾರತದ ಖ್ಯಾತ ನಟ-ನಟಿಯರು


ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ (Facebook Post) ಹಾಕಿಕೊಂಡಿರುವ ನಟ ದುನಿಯಾ ವಿಜಯ್, "ಅಭಿಮಾನಿಗಳಿಗೆ ನಮಸ್ಕಾರ. ಇಡಿ ಜಗತ್ತು ಸಂಕಷ್ಟದಲ್ಲಿರುವ ಸಮಯವಿದು. ಇಂತಹ ಸಮಯದಲ್ಲಿ ನನಗೊಂದು ಅಭೂತಪೂರ್ವ ಗೆಲುವನ್ನು ನೀವೆಲ್ಲರೂ ಕೊಟ್ಟಿದ್ದೀರಿ" ಎಂದಿದ್ದಾರೆ.


"ನನ್ನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕು ಎಂಬ ಆಸೆ ನಿಮಗೆ ಇದೆ ಎಂಬುದು ನನಗೆ ಗೊತ್ತು. ನಾನು ಸಹ ನಿಮ್ಮನ್ನೆಲ್ಲಾ ನನ್ನ ಹುಟ್ಟು ಹಬ್ಬದ ದಿನ ಭೇಟಿಯಾಗಬೇಕು ಎಂದುಕೊಂಡಿದ್ದೆ. ಕಳೆದ ನಾಲ್ಕು ದಶಕಗಳಿಂದ ನನ್ನನ್ನು ಸಾಕಿ ಸಲಹಿದ ನನ್ನಮ್ಮ, ಅಪ್ಪ ಈ ವರ್ಷ ವಿಧಿಯಾಟಕ್ಕೆ ಬಲಿಯಾದರು. ಹಾಗೂ ಆತ್ಮೀಯರಾದ ಪುನೀತ್ ರಾಜ್ ಕುಮಾರ್ ಸಹ ನಮ್ಮನ್ನೆಲ್ಲಾ ಬಿಟ್ಟು ಹೋದರು. ಈ ನೋವುಗಳನ್ನು ಇಟ್ಟುಕೊಂಡು ನಾನು ಹುಟ್ಟು ಹಬ್ಬವನ್ನು ಹೇಗೆ ಸಂಭ್ರಮಿಸಲಿ" ಎಂದಿದ್ದಾರೆ. 


 


 


"ಜತೆಗೆ ಕೋವಿಡ್ (Covid) ಪ್ರಕರಣಗಳು ಸಹ ಹೆಚ್ಚಾಗುತ್ತಿವೆ. ನಿಮ್ಮೆಲ್ಲರ ಆರೋಗ್ಯದ ದೃಷ್ಟಿಯಿಂದ ಮತ್ತು ನನಗೆ ಅಪ್ಪ, ಅಮ್ಮ, ಅಪ್ಪುಅವರನ್ನು ಕಳೆದುಕೊಂಡ ನೋವು ಕಾಡುತ್ತಿರುವುದರಿಂದ ಈ ವರ್ಷ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ" ಎಂದು ತಿಳಿಸಿದ್ದಾರೆ.  


"ಹುಟ್ಟು ಹಬ್ಬದ ದಿನ ನಾನು ಮನೆಯಲ್ಲಿ ಇರುವುದಿಲ್ಲ ಹಾಗಾಗಿ ಯಾರೂ ಮನೆಯ ಬಳಿ ಬರಬೇಡಿ. ನೀವಿದ್ದ ಕಡೆಯಿಂದಲೇ ನನಗೆ ಹಾರೈಸಿ. ಅಪ್ಪ-ಅಮ್ಮನನ್ನು ಕಳೆದುಕೊಂಡ ನನಗೆ ನನ್ನ ಅಭಿಮಾನಿಗಳೆ ಅಪ್ಪ ಅಮ್ಮ ಎಲ್ಲವೂ. ಹಾಗಾಗಿ‌‌ ನಿಮ್ಮ ಹಾರೈಕೆ ಆಶೀರ್ವಾದ ಎರಡು ನನ್ನ ಮೇಲಿರಲಿ" ಎಂದು ಹೇಳಿದ್ದಾರೆ. 


ಇದನ್ನೂ ಓದಿ: WATCH:ಹಿಂದಿ ಹಾಡಿಗೆ ಸಖತ್ ಸ್ಟೆಪ್ ಹಾಕಿದ ನಟಿ ರಾಧಿಕಾ ಕುಮಾರಸ್ವಾಮಿ, ಅಭಿಮಾನಿಗಳ ದಿಲ್ ಖುಷ್ 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.