Dwarakish Death: ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ರಜನಿಕಾಂತ್ ತೀವ್ರ ಸಂತಾಪ
Dwarakish Death: ದ್ವಾರಕೀಶ್ ಅವರು ಏಪ್ರಿಲ್ 17 ರಂದು ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು. ಆಗಸ್ಟ್ 19, 1942 ರಂದು ಜನಿಸಿದ ಅವರು , ಕನ್ನಡ ಚಲನಚಿತ್ರಕ್ಕೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು. ಉದ್ಯಮ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಹೆಸರುವಾಸಿಯಾಗಿದ್ದರು.
ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ಖ್ಯಾತ ನಟ ರಜನಿಕಾಂತ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ- ತಮ್ಮ ಹೇಳಿಕೆ ಬಗ್ಗೆ ವಿಷಾದ : ರಾಜ್ಯದ ಮಹಿಳೆಯರ ಕ್ಷಮೆ ಕೋರಿದ ಹೆಚ್.ಡಿ ಕುಮಾರಸ್ವಾಮಿ
ಈ ಕುರಿತಾಗಿ ತಮ್ಮ ಎಕ್ಷ್ ಖಾತೆಯಲ್ಲಿ ಬರೆದುಕೊಂಡಿರುವ ಅವರು "ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೇಶ್ ಅವರ ನಿಧನ ನನಗೆ ಅತೀವ ನೋವನ್ನು ತಂದಿದೆ..ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ ದೊಡ್ಡ ನಿರ್ಮಾಪಕ, ನಿರ್ದೇಶಕನಾಗಿ ಬೆಳೆದರು.. ಅವರ ಜೊತೆಗೆ ನನ್ನ ಸಾಕಷ್ಟು ಸವಿ ನೆನಪುಗಳಿವೆ..ನನ್ನ ಭಾವಪೂರ್ವ ಸಂತಾಪಗಳು" ಎಂದು ಅವರು ಕಂಬನಿ ಮಿಡಿದಿದ್ದಾರೆ.
"ಬಡವರಿಗೆ ಮನೆ ಕಟ್ಟಿಕೊಡಲು ವಿಫಲವಾದ ಬಿಜೆಪಿಯ ವಿ.ಸೋಮಣ್ಣ ಲೋಕಸಭೆಯಲ್ಲಿ ಏನು ಮಾಡುತ್ತಾರೆ"
ದ್ವಾರಕೀಶ್ ಅವರು ಏಪ್ರಿಲ್ 17 ರಂದು ಬೆಂಗಳೂರಿನ ನಿವಾಸದಲ್ಲಿ ಹೃದಯಾಘಾತದಿಂದ 81 ನೇ ವಯಸ್ಸಿನಲ್ಲಿ ನಿಧನರಾದರು. ಆಗಸ್ಟ್ 19, 1942 ರಂದು ಜನಿಸಿದ ಅವರು , ಕನ್ನಡ ಚಲನಚಿತ್ರಕ್ಕೆ ನೀಡಿದ ಕೊಡುಗೆಗಳಿಗೆ ಹೆಸರುವಾಸಿಯಾಗಿದ್ದರು. ಉದ್ಯಮ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಹೆಸರುವಾಸಿಯಾಗಿದ್ದರು.
50 ಕ್ಕೂ ಹೆಚ್ಚು ಚಲನಚಿತ್ರಗಳನ್ನು ನಿರ್ಮಿಸಿದ ಅವರ ನಿರ್ಮಾಣ ಕಂಪನಿ ಮೂಲಕ ಅಳಿಸಲಾಗದ ಛಾಪು ಮೂಡಿಸಿದರು. ಅವರ ನಿಧನಕ್ಕೆ ಚಿತ್ರರಂಗ ಮತ್ತು ಅಭಿಮಾನಿಗಳು ಸಂತಾಪ ಸೂಚಿಸಿದ್ದು, ಅಂತಿಮ ವಿಧಿವಿಧಾನಕ್ಕೂ ಮುನ್ನ ಅವರ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.