ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ(Money Laundering Case)ದಲ್ಲಿ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಕಳೆದ 5 ಗಂಟೆಗಳ ಕಾಲ ದೆಹಲಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಚುನಾವಣಾ ಆಯೋಗವನ್ನು ಒಳಗೊಂಡ ಲಂಚದ ಪ್ರಕರಣದಲ್ಲಿ ಆರೋಪಿಯಾಗಿರುವ ಸುಕೇಶ್ ಚಂದ್ರಶೇಖರ್ ಎಂಬಾತ ನಡೆಸಿರುವ ಬಹುಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಇ.ಡಿಯ ಮೂಲಗಳು ತಿಳಸಿವೆ.
ನಟಿ ಜಾಕ್ವೆಲಿನ್(Jacqueline Fernandez) ಆರೋಪಿಯಲ್ಲ, ಆದರೆ ಸುಕೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣದಲ್ಲಿ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಆಗಸ್ಟ್ 24 ರಂದು ಸುಕೇಶ್ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನ ಸಮುದ್ರ ತಟದಲ್ಲಿರುವ ಐಷಾರಾಮಿ ಬಂಗಲೆ, 82.5 ಲಕ್ಷ ರೂ. ನಗದು ಮತ್ತು ಒಂದು ಡಜನ್ ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಇ.ಡಿ ಹೇಳಿತ್ತು.
Enforcement Directorate (ED) is questioning Bollywood actress Jacqueline Fernandez in Delhi for the last five hours, in a money laundering case.
(File photo) pic.twitter.com/ftUj2CkNcN
— ANI (@ANI) August 30, 2021
ಇದನ್ನೂ ಓದಿ: ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾದಲ್ಲಿ ಪೃಥ್ವಿ ಅಂಬರ್- ಮಾನ್ವಿತಾ ಜೋಡಿ
ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಸುಮಾರು 200 ಕೋಟಿ ರೂ.ಗಳ ಸುಲಿಗೆ ಆರೋಪದ ಮೇಲೆ ಸುಕೇಶ್ ಚಂದ್ರಶೇಖರ್(Sukesh Chandrashekar) ಮತ್ತು ಇತರರ ವಿರುದ್ಧ ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು ಎಫ್‌ಐಆರ್ ದಾಖಲಿಸಿತ್ತು. ಇದರ ಆಧಾರದ ಮೇಲೆಯೇ ಇ.ಡಿ ಸುಕೇಶ್ ವಿರುದ್ಧ ಕ್ರಮ ಕೈಗೊಂಡಿತ್ತು. ಕಳೆದ ವಾರದ ದಾಳಿಯ ನಂತರ ಇ.ಡಿ ತನ್ನ ಹೇಳಿಕೆಯಲ್ಲಿ, ‘ಸುಕೇಶ್ ಚಂದ್ರಶೇಖರ್ ಈ ವಂಚನೆಯ ಸೂತ್ರಧಾರ. ಆತ 17ನೇ ವಯಸ್ಸಿನಿಂದಲೇ ಅಪರಾಧ ಚಟುವಟಿಕೆಗಳ ಭಾಗವಾಗಿದ್ದಾನೆ. ಆತನ ವಿರುದ್ಧ ಅನೇಕ ಎಫ್‌ಐಆರ್(FIR)ಗಳು ದಾಖಲಾಗಿದ್ದು, ಪ್ರಸ್ತುತ ಆತ ರೋಹಿಣಿ ಜೈಲಿನಲ್ಲಿದ್ದಾನೆ ಎಂದು ತಿಳಿಸಿತ್ತು.
ಇದನ್ನೂ ಓದಿ: Drugs Case: ಬಾಲಿವುಡ್ ನಟ ಅರ್ಮಾನ್ ಕೊಹ್ಲಿ ಬಂಧನ
ಸದ್ಯ ನಟಿ ಜಾಕ್ವೆಲಿನ್ ಅವರನ್ನು ಜಾರಿ ನಿರ್ದೇಶನಾಲಯ(Enforcement Directorate)ದ ಅಧಿಕಾರಿಗಳು 5 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಜಾಕ್ವೆಲಿನ್ ಸದ್ಯ ಬಾಲಿವುಡ್ ಬ್ಯುಸಿ ನಟಿಯಾಗಿದ್ದಾರೆ. ಅವರ ಕೈಯಲ್ಲಿಗ ಅನೇಕ ಸಿನಿಮಾ ಪ್ರೊಜೆಕ್ಟ್ ಗಳಿವೆ. ‘ರಾಮ ಸೇತು’, ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’, ಸಲ್ಮಾನ್ ಖಾನ್ ನಟನೆಯ ‘ಕಿಕ್ 2’, ಸೈಫ್ ಅಲಿ ಖಾನ್ ನಟನೆಯ ‘ಭೂತ್ ಪೊಲೀಸ್’ ಮತ್ತು ರಣವೀರ್ ಸಿಂಗ್ ಅವರ ‘ಸರ್ಕಸ್’ ಚಿತ್ರದಲ್ಲಿ ಜಾಕ್ವೆಲಿನ್ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಕಿಚ್ಚ ಸುದೀಪ್ ಅಭಿನಯದ ಬಿಗ್ ಬಜೆಟ್ ಸಿನಿಮಾ ‘ವಿಕ್ರಾಂತ್ ರೋಣ’ದಲ್ಲಿಯೂ ಜಾಕ್ವೆಲಿನ್ ಐಟಂ ಹಾಡಿಗೆ ಹೆಜ್ಜೆ ಹಾಕಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ