ನಟ ಮಹೇಶ್‌ ಬಾಬುಗೆ ಇಡಿ ನೋಟಿಸ್‌.. ಈ ಜಾಹೀರಾತು ತಂದಿತೇ ಆಪತ್ತು!

ED Notice to Mahehsh Babu: ಸ್ಟಾರ್ ಹೀರೋ ಮಹೇಶ್ ಬಾಬು ಅವರಿಗೆ ಇಡಿ ಶಾಕ್ ನೀಡಿದೆ. ಅಕ್ರಮ ನಗದು ವಹಿವಾಟು ಆರೋಪದ ಮೇಲೆ ಮಹೇಶ್‌ ಬಾಬುಗೆ ನೋಟಿಸ್ ಜಾರಿ ಮಾಡಿದೆ.

Written by - Chetana Devarmani | Last Updated : Apr 22, 2025, 11:38 AM IST
  • ನಟ ಮಹೇಶ್‌ ಬಾಬುಗೆ ಇಡಿ ನೋಟಿಸ್‌
  • ಸ್ಟಾರ್ ಹೀರೋ ಮಹೇಶ್ ಬಾಬುಗೆ ಬಿಗ್‌ ಶಾಕ್‌
  • ಅಕ್ರಮ ನಗದು ವಹಿವಾಟು ಆರೋಪ
ನಟ ಮಹೇಶ್‌ ಬಾಬುಗೆ ಇಡಿ ನೋಟಿಸ್‌.. ಈ ಜಾಹೀರಾತು ತಂದಿತೇ ಆಪತ್ತು!

Mahehsh Babu: ತೆಲುಗು ಚಿತ್ರರಂಗದ ಟಾಪ್ ನಟ, ಸೂಪರ್ ಸ್ಟಾರ್ ಮಹೇಶ್ ಬಾಬು ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ. ಸುರಾನ ಗ್ರೂಪ್ ಮತ್ತು ಸಾಯಿ ಸೂರ್ಯ ಡೆವಲಪರ್ಸ್ ಪ್ರಕರಣದಲ್ಲಿ ಅಕ್ರಮ ನಗದು ವಹಿವಾಟು ಹಿನ್ನೆಲೆಯಲ್ಲಿ ಇಡಿ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. 

Add Zee News as a Preferred Source

ಇದಲ್ಲದೆ ಏಪ್ರಿಲ್‌ 27 ರಂದು ಮಹೇಶ್ ಬಾಬು ವಿಚಾರಣೆಗೆ ಹಾಜರಾಗಬೇಕು ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ. ಜಾಹೀರಾತು ಪ್ರಚಾರದ ಭಾಗವಾಗಿ ಮಹೇಶ್ ಬಾಬು 3.4 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇದಕ್ಕೆ ಸಂಬಂಧಿಸಿದ ಯಾವುದೇ ವಹಿವಾಟುಗಳು ನಡೆದಂತೆ ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮಹೇಶ್ ಬಾಬು ಅವರನ್ನು ಇಡಿ ಕಚೇರಿಗೆ ಕರೆಸಿ ವಿಚಾರಣೆ ನಡೆಸಲಾಗುವುದು.

ಮಹೇಶ್ ಬಾಬುಗೆ ನೀಡಲಾದ ಸಂಭಾವನೆಯ ಹಣ ಅಕ್ರಮ ವರ್ಗಾವಣೆಯಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಮಹೇಶ್ ಬಾಬು ಮತ್ತು ತಂಡ ಇದಕ್ಕೆ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ. 

ಇದನ್ನೂ ಓದಿ: ತನ್ನದೇ ಸಿನಿಮಾ ನೋಡಿ ಮುಜುಗರಕ್ಕೊಳಗಾದ ನಟಿ ಸಮಂತಾ ಹೇಳಿದ್ದೇನು ಗೊತ್ತಾ...!

ತೆಲುಗಿನಲ್ಲಿ ಜಾಹೀರಾತುಗಳಲ್ಲಿ ನಟಿಸಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಮಹೇಶ್ ಬಾಬು ಮುಂಚೂಣಿಯಲ್ಲಿದ್ದಾರೆ. ಮಹೇಶ್ 20 ಕ್ಕೂ ಹೆಚ್ಚು ಬ್ರಾಂಡ್ ಗಳಜಾಹೀರಾತು ಹೊಂದಿದ್ದಾರೆ. ಮಹೇಶ್ ಬಾಬು ಸಿನಿಮಾಗಳಲ್ಲಿ ನಟಿಸುವುದಕ್ಕಿಂತ ಜಾಹೀರಾತುಗಳಿಂದ ಹೆಚ್ಚು ಸಂಪಾದಿಸುತ್ತಾರೆ. 

ಇಲ್ಲಿಯವರೆಗೆ ಮಹೇಶ್ ಬಾಬು ಭಾಗಿಯಾಗಿರುವ ಯಾವುದೇ ಜಾಹೀರಾತಿನಲ್ಲಿಯೂಸ ತೆರಿಗೆ ವಂಚನೆ ನಡೆದಿಲ್ಲ ಎನ್ನಲಾಗುತ್ತಿದೆ. ಮಹೇಶ್ ಬಾಬು ಅವರೇ ಇಡಿ ಅಧಿಕಾರಿಗಳ ಮುಂದೆ ಹಾಜರಾಗುತ್ತಾರೋ ಅಥವಾ ಅವರ ಪರವಾಗಿ ಯಾರಾದರೂ ವಕೀಲರನ್ನು ಕಳುಹಿಸುತ್ತಾರೋ ಎಂಬುದನ್ನು ಕಾದು ನೋಡಬೇಕಾಗಿದೆ.

ಮಹೇಶ್ ಬಾಬು ಸದ್ಯ ರಾಜಮೌಳಿ ನಿರ್ದೇಶನದ ಪ್ಯಾನ್ ವರ್ಲ್ಡ್ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಪ್ರಿಯಾಂಕಾ ಚೋಪ್ರಾ ಮತ್ತು ಪೃಥ್ವಿರಾಜ್ ಸುಕುಮಾರನ್ ಇತರ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ವರದಿಗಳಿವೆ. ಮುಂದಿನ ವರ್ಷ ಜುಲೈನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲು ಯೋಜಿಸಲಾಗಿದೆ.

ಇದನ್ನೂ ಓದಿ: ವಿಡಿಯೋ ಮೂಲಕ ಮದುವೆ ರಹಸ್ಯ ಬಿಚ್ಚಿಟ್ಟ ನಟಿ ರಮ್ಯಾ! ಶಾಕಿಂಗ್‌ ವಿಚಾರ ಕೇಳಿ ಫ್ಯಾನ್ಸ್‌ ಶಾಕ್..‌

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News