ಪೋರ್ನೋಗ್ರಫಿ ಪ್ರಕರಣ: ಶಿಲ್ಪಾ ಶೆಟ್ಟಿ ಮನೆ ಮೇಲೆ ಇಡಿ ದಾಳಿ..!
ED Raids In Raj Kundra House: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ನಿರ್ಮಾಪಕ ರಾಜ್ ಕುಂದ್ರಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ED Raids In Raj Kundra House: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ನಿರ್ಮಾಪಕ ರಾಜ್ ಕುಂದ್ರಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾಂತಾಕ್ರೂಜ್‌ನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಮನೆಯ ಮೇಲೆ ಈ ದಾಳಿ ನಡೆಸಲಾಗಿದೆ.
ಇಡಿ ಅಧಿಕಾರಿಗಳು ನವೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಶಿಲ್ಪಾ ಶೆಟ್ಟಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪೋರ್ನೋಗ್ರಫಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ರಾಜ್ ಕುಂದ್ರಾ ಮೇಲೆ ಮಾತ್ರವಲ್ಲದೆ ಪೋರ್ನೋಗ್ರಫಿ ಪ್ರಕರಣಕ್ಕೆ ಸಂಬಂಧಿಸಿದ ಜನರ ಮೇಲೂ ಇಡಿ ದಾಳಿ ನಡೆಸಲಾಗಿದೆ. ಇದಕ್ಕೂ ಮುನ್ನ ಶಿಲ್ಪಾ ಶೆಟ್ಟಿ ಪತಿಯನ್ನು ಪೋರ್ನೋಗ್ರಫಿ ಪ್ರಕರಣದಡಿಯಲ್ಲಿ ಬಂಧಿಸಲಾಗಿತ್ತು.
ಇದನ್ನೂ ಓದಿ : ತೆಲುಗಿನಲ್ಲಿ ಕನ್ನಡದ ನಟಿಯರಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು… ನಾಯಕಿ ಪಾತ್ರಕ್ಕೂ ಕನ್ನಡತಿಯರೇ, ಐಟಂ ಸಾಂಗಿಗೂ ಕನ್ನಡತಿಯರೇ…
2021 ರಲ್ಲಿ ರಾಜ್ ಕುಂದ್ರಾ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಯಿತು. ಈ ಕಾರಣದಿಂದಾಗಿ ಅವರನ್ನು ಬಂಧಿಸಲಾಯಿತು. ರಾಜ್ ಕುಂದ್ರಾ 2 ತಿಂಗಳ ಕಾಲ ಜೈಲಿನಲ್ಲಿದ್ದರು.
ಅಂತಿಮವಾಗಿ ಸೆಪ್ಟೆಂಬರ್ 2021 ರಿಂದ ಜಾಮೀನಿನ ಮೇಲೆ ಹೊರಗಿದ್ದಾರೆ. ರಾಜ್ ಕುಂದ್ರಾ ಅವರ ಮನೆಯೊಂದಿಗೆ ಕಚೇರಿ ಮತ್ತು ಅವರ ಸಹಚರ ಮನೆಯ ದಾಳಿಯ ಮೇಲೂ ಶೋಧ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ : ನಟಿ ದೀಪಿಕಾ ದಾಸ್ ಪತಿ ಯಾರು? ಇವರು ಮಾಡುವ ಕೆಲಸ, ಹೆಸರು, ಹಿನ್ನೆಲೆಯ ಸಂಪೂರ್ಣ ಪರಿಚಯ ಇಲ್ಲಿದೆ..
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.