ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಕುರಿತಂತೆ ಡಬ್ಬಲ್ ಗೇಮ್ ಆಡಿರುವ ಆರೋಪಕ್ಕೆ ಗುರಿಯಾಗಿರುವ ಶಾಸಕ ಜಮೀರ್‌ ಆಹ್ಮದ್‌ಖಾನ್ ಇದೀಗ  ಹಿಂದೂಗಳ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈ ಕೋಪವನ್ನು ಜಮೀರ್ ಪುತ್ರನ ವಿರುದ್ಧ ತೀರಿಸಿಕೊಳ್ಳಲು ಹಿಂದೂಪರ ಮುಖಂಡರ ಮುಂದಾಗಿದ್ದಾರೆ. ಕೆಲ ಹಿಂದೂಪರ ಸಂಘಟನೆಗಳು ಜಹೀದ್‌ ಖಾನ್ ನಾಯಕ ನಟರಾಗಿ ನಟಿಸಿರುವ ಚೊಚ್ಚಲ ಚಿತ್ರ ‘ಬನಾರಸ್’ ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Kiccha Sudeep :ಅಭಿನಯ ಚಕ್ರವರ್ತಿಗೆ ʼಪುಣ್ಯಕೋಟಿ ಯೋಜನೆʼಯ ರಾಯಭಾರಿ ಪಟ್ಟ


ಜಮೀರ್ ಆಹ್ಮದ್‌ ಖಾನ್‌ ಪುತ್ರ ಜಹೀದ್‌ ಖಾನ್ ನಟಿಸಿರುವ ‘ಬನಾರಸ್’ ಚಿತ್ರ ಕೆಲವೇ ದಿನಗಳಲ್ಲಿ ತೆರೆ ಕಾಣುತ್ತಿರುವ ಬೆನ್ನಲ್ಲೆ ಕೆಲ ಸಂಘಟನೆಗಳು ಚಿತ್ರ ಬಹಿಷ್ಕರಿಸುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ.


ಇದನ್ನೂ ಓದಿ: ಪವರ್‌ ಸ್ಟಾರ್‌ ಪವನ್‌ ಕಲ್ಯಾಣ್‌ ಹುಟ್ಟು ಹಬ್ಬಕ್ಕೆ ʼಹರಿ ಹರ ವೀರಮಲ್ಲುʼ ಟೀಸರ್‌ ಗಿಫ್ಟ್‌


‘#boycottBanaras ಎಂಬ ಭಿತ್ತಿಪತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕಂಡು ಬಂದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ನಮ್ಮ ವಿರೋಧವಿಲ್ಲ ಎಂದು ಜಮೀರ್ ಹೇಳಿಕೆ ನೀಡಿದ್ದರು. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ್ದ ಹೈಕೋರ್ಟ್ ವಿಭಾಗಿಯ ಪೀಠದ ತೀರ್ಪನ್ನು ಪ್ರಶ್ನಿಸಿ ವಕ್ಫ್ ಬೋರ್ಡ್ ವತಿಯಿಂದ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸಮಿತಿ ಪರ ವಾದ ಮಂಡಿಸಿದ್ದ ಕಪಿಲ್ ಸಿಬಲ್ ರೊಂದಿಗೆ ಕಾಣಿಸಿಕೊಂಡಿದ್ದ ಜಮೀರ್ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ತಡೆ ತರುವಲ್ಲಿ ಯಶಸ್ವಿಯಾಗಿದ್ದರು. ಈ ಇಬ್ಬಗೆ ನೀತಿಗೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿ ಮುಂದಿನ ಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ಗೆ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿವೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.