ಡೆವಿಲ್ ಸುತ್ತ ಕಟ್ಟೆಚ್ಚರ..! ಈ 7 ಜನರನ್ನು ಬಿಟ್ಟು ಬೇರೆ ಯಾರೂ ದಾಸನನ್ನ ಭೇಟಿಯಾಗುವಂತಿಲ್ಲ..
Darshan Case : ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದಿದ್ದಾರೆ. ಬೆನ್ನುನೋವಿನ ಚಿಕಿತ್ಸೆಗಾಗಿ 6 ವಾರಗಳ ಕಾಲ ನಟನಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.. ಸಧ್ಯ ಆಸ್ಪತ್ರೆಯಲ್ಲಿರುವ ದರ್ಶನ ಅವರನ್ನು ಈ 7 ಜನರು ಮಾತ್ರ ಭೇಟಿಯಾಗಬಹುದು..
Actor Darshan health : ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ ಮೊದಲೆರಡು ದಿನ ಮನೆಯಲ್ಲಿಯೇ ಇದ್ದರು. ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದರು. ಆದರೆ ಈಗ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಜಿಎಸ್ ವೈದ್ಯರು ದರ್ಶನ್‌ಗೆ ಹಲವು ಪರೀಕ್ಷೆಗಳನ್ನು ನಡೆಸಿದ್ದು, ಇದೀಗ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಕೆಲ ನಿರ್ಬಂಧಗಳನ್ನು ಹೇರಲಾಗಿದೆ.
ಈ ವೇಳೆ ದರ್ಶನ್ ಅವರನ್ನು ಭೇಟಿ ಮಾಡಲು ಯಾರಿಗೂ ಅವಕಾಶ ನೀಡಿಲ್ಲ. ಏಳು ಜನರನ್ನು ಬಿಟ್ಟರೆ ಬೇರೆ ಯಾರಿಗೂ ದರ್ಶನ್ ಅವರನ್ನು ಭೇಟಿಯಾಗುವ ಅವಕಾಶ ಇರಲಿಲ್ಲ. ಈ ಬಗ್ಗೆ ದರ್ಶನ್ ಕುಟುಂಬಸ್ಥರು ಆಸ್ಪತ್ರೆಗೆ ವಿವರಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಮಾರ್ಷಲ್ ಆರ್ಟ್ಸ್‌ನಲ್ಲಿ ಚಾಂಪಿಯನ್, ಗ್ಲಾಮರ್ ಶೋನಲ್ಲಿ ಕ್ವೀನ್..! ಅಬ್ಬಬ್ಬಾ.. ಭೂಸ್ವರ್ಗ ಈಕೆ ಬ್ಯೂಟಿ..
ದರ್ಶನ್ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್, ತಾಯಿ ಮೀನಮ್ಮ, ಸಹೋದರ ದಿನಕರ್ ತೂಗುದೀಪ್, ದರ್ಶನ್ ಆಪ್ತ ಧನ್ವೀರ್, ವಕೀಲರನ್ನು ಹೊರತುಪಡಿಸಿ ಯಾರೂ ದರ್ಶನ್ ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎನ್ನುತ್ತಾರೆ. ದರ್ಶನ್ ಅವರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿದ್ದು, ಆಸ್ಪತ್ರೆಗೆ ಹೆಚ್ಚು ಮಂದಿ ಬಂದರೆ ಇತರ ರೋಗಿಗಳಿಗೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ತೊಂದರೆ ಹಾಗೂ ಭದ್ರತೆಯ ಸಮಸ್ಯೆ ಎದುರಾಗುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
ಕುಟುಂಬ ಸಮೇತ ಧನ್ವೀರ್ ಭೇಟಿಗೆ ಮಾತ್ರ ಅವಕಾಶ ನೀಡಲಾಗಿತ್ತು. ದರ್ಶನ್ ಜೈಲಿಗೆ ಹೋದಾಗಿನಿಂದ ಧನ್ವೀರ್ ವಿಜಯಲಕ್ಷ್ಮಿಗೆ ಬೆಂಬಲ ನೀಡುತ್ತಿದ್ದಾರೆ. ವಿಜಯಲಕ್ಷ್ಮಿ ಅವರನ್ನು ಭೇಟಿ ಮಾಡಲು ಧನ್ವೀರ್ ಕೂಡ ಬಳ್ಳಾರಿಗೆ ಬಂದಿದ್ದರು. ಧನ್ವೀರ್ ಅವರನ್ನು ದರ್ಶನ್ ಅವರ ಸಹೋದರ ಎಂದು ಪರಿಗಣಿಸಲಾಗಿರುವುದರಿಂದ ಅವರನ್ನು ಭೇಟಿ ಮಾಡಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ:ದೀಪಾವಳಿ ಹಿನ್ನಲೆ ಹುಟ್ಟೂರಿಗೆ ಶಿವಣ್ಣ ಭೇಟಿ..! ಅಣ್ಣಾವ್ರು ಹುಟ್ಟಿದ ಹಳೇ ಮನೆ.. ಫೊಟೋಸ್ ಇಲ್ಲಿವೆ..
ದರ್ಶನ್ ಅವರಿಗೆ ತೀವ್ರ ಬೆನ್ನು ನೋವು ಮತ್ತು ಎಡಗಾಲಿನ ಸಮಸ್ಯೆ ಇದೆ. ಇದೇ ಕಾರಣಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ ಮಾಡಬೇಕೋ ಅಥವಾ ಫಿಸಿಯೋಥೆರಪಿ ಮಾಡಬೇಕೋ ಎಂಬುದು ನಿರ್ಧಾರವಾಗಲಿದೆ. ವೈಧ್ಯರು ದರ್ಶನ್ ಅವರ ಪರೀಕ್ಷಾ ವರದಿಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಕುಟುಂಬ ಸದಸ್ಯರು ಹಾಗೂ ದರ್ಶನ್ ಜೊತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ