Anchor Rashmi Gautam : ಸ್ಟಾರ್ ಆ್ಯಂಕರ್ ರಶ್ಮಿ ಗೌತಮ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಚೇತರಿಸಿಕೊಂಡಿರುವ ನಿರೂಪಕಿ ತಮಗಾದ ನೋವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದಾರೆ.
ಟಿವಿ ಕಾರ್ಯಕ್ರಮಗಳು ಮತ್ತು ಸಿನಿಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿರುವ ರಶ್ಮಿ, ಕಳೆದ ಕೆಲವು ದಿನಗಳಿಂದ ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗುತ್ತಿದ್ದರು. ಇತ್ತೀಚಿಗೆ ನಿರೂಪಕಿ ಭುಜದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಮತ್ತೊಮ್ಮೆ ಅನಾರೋಗ್ಯಕ್ಕೆ ಒಳಗಾಗಿದ್ದು, ದಿಢೀರ್ ಆಸ್ಪತೆಯಿಂದ ಫೋಟೋ ಹಂಚಿಕೊಂಡು ಶಾಕ್ ನೀಡಿದ್ದಾರೆ.
ಇದನ್ನೂ ಓದಿ:ಒಂದೇ ಒಂದು ಸಾಂಗ್‌ನಿಂದ ಬಾಲಿವುಡ್ ಬೆಚ್ಚಿಬೀಳುವಂತೆ ಮಾಡಿದ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸಹೋದರಿ..! ವಿಡಿಯೋ ವೈರಲ್
ಪೋಸ್ಟ್ ಮೂಲಕ ತಮ್ಮ ಆರೋಗ್ಯ ಸ್ಥಿತಿಯನ್ನು ವಿವರಿಸಿರುವ ರಶ್ಮಿ, ನನ್ನ ಆರೋಗ್ಯ ಚೆನ್ನಾಗಿಲ್ಲ.. ನಿರಂತರವಾಗಿ ರಕ್ತಸ್ರಾವವಾಗುತ್ತಿದ್ದು, ಆ ನೋವನ್ನು ಸಹಿಸಲಾಗಲಿಲ್ಲ. ಆದರೂ ಮಾರ್ಚ್ 29 ರವರೆಗೆ ತಡೆದುಕೊಂಡಿದ್ದೆ.. ನಂತರ ನನ್ನ ಆರೋಗ್ಯದಲ್ಲಿ ಏರುಪೇರಾಯಿತು, ಸಮಸ್ಯೆಗಳು ಉಲ್ಬಣಗೊಂಡವು.. ಕೊನೆಗೆ, ಹಿಮೋಗ್ಲೋಬಿನ್ ಮಟ್ಟ 9 ಕ್ಕೆ ಇಳಿಯಿತು.
ಏಪ್ರಿಲ್ 18 ರಂದು ಶಸ್ತ್ರಚಿಕಿತ್ಸೆಗೆ ಒಳಗಾದೆ, ಈಗ ನಾನು ಸುರಕ್ಷಿತವಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜೊತೆಗಿದ್ದು ನೋಡಿಕೊಂಡ, ನನ್ನ ಕುಟುಂಬ, ಸ್ನೇಹಿತರು ಮತ್ತು ವೈದ್ಯರಿಗೆ ವಿಶೇಷ ಧನ್ಯವಾದಗಳು. ಕೆಲವೊಂದಿಷ್ಟು ದಿನ ವಿಶ್ರಾಂತಿ ಪಡೆಯಬೇಕಾಗಿದ್ದು, ಚೇತರಿಸಿಕೊಂಡು ನಿಮ್ಮ ಮುಂದೆ ಬರುತ್ತೇನೆ.. ಎಂದು ರಶ್ಮಿ ಗೌತಮ್ ಬರೆದಿದ್ದಾರೆ.
ಇದನ್ನೂ ಓದಿ:"ಸ್ಪಾರ್ಕ್" ಪೋಸ್ಟರ್ ವಿವಾದಕ್ಕೆ ತೆರೆ : ರಮೇಶ್ ಇಂದಿರಾ ಬಳಿ ಕ್ಷಮೆ ಕೇಳಿದ ನಿರ್ದೇಶಕ
ರಶ್ಮಿ ಜಬರ್ದಸ್ತ್ ಕಾರ್ಯಕ್ರಮದ ಮೂಲಕ ಮುನ್ನೆಲೆಗೆ ಬಂದರು. ಸದ್ಯ ನಿರೂಪಕಿ ಹಂಚಿಕೊಂಡ ಪೋಸ್ಟ್ ವೈರಲ್ ಆಗಿದ್ದು, ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ನಟಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿರುವ ಫ್ಯಾನ್ಸ್ ಏನಾಯಿತು..? ಅಂತ ಕಾಮೆಂಟ್‌ಗಳ ಸುರಿಮಳೆಯೇ ಸುರಿಯುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









