ವಿಜಯ ರಾಘವೇಂದ್ರ 'ಮಹಾನ್' ಸಿನಿಮಾದಲ್ಲಿ ನಟ ಮಿತ್ರ... ಪ್ರಮುಖ ಪಾತ್ರದಲ್ಲಿ ಅಭಿನಯ

ನಾನು "ರಾಗ" ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೇನೆ. "ರಾಗ" ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ "ಮಹಾನ್" ಚಿತ್ರದಲ್ಲೂ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ. 

Written by - Bhavishya Shetty | Last Updated : Jul 1, 2025, 09:17 PM IST
    • ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್
    • ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ "ಮಹಾನ್" ಚಿತ್ರ
    • ಚಿತ್ರದ ಪ್ರಮುಖ ಪಾತ್ರದಲ್ಲಿ ಹೆಸರಾಂತ ನಟ ಮಿತ್ರ ಅಭಿನಯ
ವಿಜಯ ರಾಘವೇಂದ್ರ 'ಮಹಾನ್' ಸಿನಿಮಾದಲ್ಲಿ ನಟ ಮಿತ್ರ... ಪ್ರಮುಖ ಪಾತ್ರದಲ್ಲಿ ಅಭಿನಯ

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ "ಮಹಾನ್" ಚಿತ್ರದ ಪ್ರಮುಖ ಪಾತ್ರದಲ್ಲಿ ಹೆಸರಾಂತ ನಟ ಮಿತ್ರ ಅಭಿನಯಿಸುತ್ತಿದ್ದಾರೆ. "ಮಹಾನ್" ಚಿತ್ರದ ಪಾತ್ರದ ಕುರಿತು ಮಿತ್ರ ತಮ್ಮ ಮಾತುಗಳ ಮೂಲಕ ತಿಳಿಸಿದ್ದಾರೆ.

Add Zee News as a Preferred Source

ಇದನ್ನೂ ಓದಿ:  ಧಿಡೀರ್‌ ಹೈಬಿಪಿಗೆ ಕಾರಣವಾಗುವ ದಿನನಿತ್ಯದ ಆಹಾರಗಳಿವು! ತಕ್ಷಣವೇ ತಿನ್ನುವುದನ್ನ ನಿಲ್ಲಿಸಿ..

ನಾನು "ರಾಗ" ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಅವರೊಟ್ಟಿಗೆ ಕೆಲಸ ಮಾಡುತ್ತಿದ್ದೇನೆ. "ರಾಗ" ಚಿತ್ರದ ನನ್ನ ಪಾತ್ರಕ್ಕೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ "ಮಹಾನ್" ಚಿತ್ರದಲ್ಲೂ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ. ನಿರ್ದೇಶಕರು ಈ ಚಿತ್ರದ ಕಥೆ ಹೇಳಿದ ತಕ್ಷಣ ಇಷ್ಟವಾಗಿ ನಟಿಸಲು ಒಪ್ಪಿಕೊಂಡೆ. 

ನಿರ್ಮಾಪಕ ಪ್ರಕಾಶ್ ಬುದ್ದೂರು ಅವರು ಇಂತಹ ಉತ್ತಮ ಕಥಾಹಂದರ ಹೊಂದಿರುವ ಚಿತ್ರವನ್ನು ನಿರ್ಮಾಣ ಮಾಡುತ್ತಿರುವುದು ಹಾಗೂ ನಟ ವಿಜಯ ರಾಘವೇಂದ್ರ ಬಹಳ ಅದ್ಭುತವಾದ ನಟ.  ಅವರೊಂದಿಗೆ ನಟಿಸುತ್ತಿರುವಿದು ಬಹಳ ಖುಷಿಯಾಗಿದೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಹೊಂದಿರುವ ಚಿತ್ರವನ್ನು ಪಿ.ಸಿ.ಶೇಖರ್ ನಿರ್ದೇಶಿಸುತ್ತಿದ್ದು, ಈ ಚಿತ್ರದಲ್ಲಿ ವಿಜಯ ರಾಘವೇಂದ್ರ ಅವರಿಗೆ ಹೇಳಿ ಮಾಡಿಸಿದ ಪಾತ್ರವಿದೆ. ನನ್ನ ಪಾತ್ರ ಕೂಡ ನಾಯಕನ ಪಾತ್ರದ ಜೊತೆಗೆ ಸಾಗುತ್ತದೆ. ನಮ್ಮಿಬ್ಬರ ಕಾಂಬಿನೇಶನ್ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎನ್ನುತ್ತಾರೆ ನಟ ಮಿತ್ರ.

ನನ್ನ ಹಾಗೂ ಮಿತ್ರ ಅವರ ಕಾಂಬಿನೇಶನ್ ನಲ್ಲಿ ಬಂದ "ರಾಗ" ಚಿತ್ರ ಇಂದು ಕೂಡ ಜನಪ್ರಿಯ. ಆನಂತರ ನನ್ನ ನಿರ್ದೇಶನದ ಚಿತ್ರಗಳಲ್ಲಿ ಮಿತ್ರ ಅವರು ನಟಿಸಿಲ್ಲ. ಏಕೆಂದರೆ, ಮಿತ್ರ ಅವರು ಸಣ್ಣ ಪುಟ್ಟ ಪಾತ್ರದಲ್ಲಿ ನನ್ನ ನಿರ್ದೇಶನದ ಚಿತ್ರದಲ್ಲಿ ಅಭಿನಯಿಸುವುದು ನನಗೆ ಇಷ್ಟವಿಲ್ಲ. "ರಾಗ" ಚಿತ್ರದ ಅಭಿನಯಕ್ಕಾಗಿ ಮಿತ್ರ ಅವರಿಗೆ ರಾಜ್ಯ ಪ್ರಶಸ್ತಿ ಬಂದಿತ್ತು. ಆ ಚಿತ್ರದಲ್ಲಿ ಅಂತಹ ಅದ್ಭುತ ನಟನೆ ನೀಡಿದ್ದ ಮಿತ್ರ ಅವರಿಗೆ "ಮಹಾನ್" ಚಿತ್ರದಲ್ಲೂ ಎಲ್ಲರ ನೆನಪಿನಲ್ಲುಳಿಯುವಂತ ಪಾತ್ರ ಇರುತ್ತದೆ. ಚಿತ್ರಕಥೆ ಬರೆಯುವಾಗ ಈ ಪಾತ್ರಕ್ಕೆ ಮಿತ್ರ ಅವರೆ ಸೂಕ್ತ ಎನಿಸಿತು. ಅವರಿಗೆ ಸರಿಯಾದ ಪಾತ್ರವಿದು. ಇಡೀ ಚಿತ್ರ ಪೂರ್ತಿ ನಾಯಕನ ಪಾತ್ರದ ಜೊತೆಗೆ ಸಾಗುವ ಪಾತ್ರ ಅವರದು. ಕುರುಕ್ಷೇತ್ರದಲ್ಲಿ ಅರ್ಜುನನ ಜೊತೆಗೆ ಶ್ರೀಕೃಷ್ಣ ಸದಾ ಇರುತ್ತಾನೆ. ಆ  ಸ್ಪೂರ್ತಿಯಿಂದ ಈ ಎರಡು ಪಾತ್ರಗಳನ್ನು ಹೆಣೆಯಲಾಗಿದೆ.  "ಮಹಾನ್" ಚಿತ್ರದ ಮಿತ್ರ ಅವರ ಪಾತ್ರ ಕೂಡ ಎಲ್ಲರ ಮನಸ್ಸಿಗೂ ಇಷ್ಟವಾಗುತ್ತದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ. 

ಇದನ್ನೂ ಓದಿ:  ಆಸ್ತಿಯಲ್ಲಿ ಪಾಲಲ್ಲ.. ಕಂಪನಿಯ ವ್ಯವಹಾರಗಳನ್ನು ನಿಭಾಯಿಸಲು ಮುಖೇಶ್‌ ಅಂಬಾನಿ ತಮ್ಮ ಪುತ್ರ ಅನಂತ್‌ ಅಂಬಾನಿಗೆ ಪ್ರತಿ ತಿಂಗಳು ಕೊಡುವ ಸಂಬಳ ಎಷ್ಟು ಗೊತ್ತಾ..?

 ತಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ ಮಿತ್ರ ಅವರಂತಹ ಅನುಭವಿ ನಟರು ಅಭಿನಯಿಸುತ್ತಿರುವುದಕ್ಕೆ ನಿರ್ಮಾಪಕ ‌ ಪ್ರಕಾಶ್ ಬುದ್ದೂರು ಸಂತಸ ವ್ಯಕ್ತಪಡಿಸಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News