Choreographer Chaitanya: ಖ್ಯಾತ ಡ್ಯಾನ್ಸ್  ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆ!

Choreographer Chaitanya Death: ತೆಲುಗು ಸೇರಿದಂತೆ ಬೇರೆ ಭಾಷೆಗಳಲ್ಲಿ ಡ್ಯಾನ್ಸ್ ಕೋರಿಯೊಗ್ರಾಫರ್ ಕೆಲಸ ಮಾಡುತ್ತಿದ್ದ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಸಾವಿಗೂ ಮುನ್ನ ಸಾಮಾಜಿಕ ಮಾಧ್ಯಮವೊಂದರಲ್ಲಿ ತನ್ನ ಅಳಲು ತೋಡಿಕೊಂಡಿದ್ದಾರೆ.

Written by - Zee Kannada News Desk | Last Updated : May 1, 2023, 12:02 PM IST
  • ಡ್ಯಾನ್ಸ್ ಕೋರಿಯೊಗ್ರಾಫರ್ ಕೆಲಸ ಮಾಡುತ್ತಿದ್ದ ಚೈತನ್ಯ ಆತ್ಮಹತ್ಯೆ
  • ತೆಲುಗು ಸೇರಿದಂತೆ ಬೇರೆ ಭಾಷೆಗಳಲ್ಲಿ ಕೋರಿಯೊಗ್ರಾಫರ್ ಆಗಿದ್ದ ಚೈತನ್ಯ
  • ನೃತ್ಯ ನಿರ್ದೇಶಕ ಚೈತನ್ಯ ಅವರು ಏಪ್ರಿಲ್ 30 ರಂದು ನೇಣಿಗೆ ಶರಣು
Choreographer Chaitanya: ಖ್ಯಾತ ಡ್ಯಾನ್ಸ್  ಕೋರಿಯೊಗ್ರಾಫರ್ ಚೈತನ್ಯ ಆತ್ಮಹತ್ಯೆ! title=

ಆಂಧ್ರಪ್ರದೇಶ: ತೆಲುಗು ಸೇರಿದಂತೆ ಬೇರೆ ಭಾಷೆಗಳಲ್ಲಿ ಡ್ಯಾನ್ಸ್ ಕೋರಿಯೊಗ್ರಾಫರ್ ಕೆಲಸ ಮಾಡುತ್ತಿದ್ದ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಸಾವಿಗೂ ಮುನ್ನ ಸಾಮಾಜಿಕ ಮಾಧ್ಯಮವೊಂದರಲ್ಲಿ ತನ್ನ ಅಳಲು ತೋಡಿಕೊಂಡಿದ್ದಾರೆ.

ನೃತ್ಯ ನಿರ್ದೇಶಕ ಚೈತನ್ಯ ಅವರು ಏಪ್ರಿಲ್ 30 ರಂದು ಭಾನುವಾರ  ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮ್ಮ ಜೀವನಕ್ಕಾಗಿ ಒಂದಿಷ್ಟು ಸಾಲವನ್ನು ಮಾಡಿಕೊಂಡಿದ್ದರು ಈ ಕೆಲವು ದಿನಗಳಿಂದ ಸಾಲಬಾಧೆಯಿಂದ ಕೊರಗಿ ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:  Ajith Kumar: ಜಗಮಲ್ಲ ನಾಯಕ ಅಜಿತ್ ಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗುಡ್‌ ನ್ಯೂಸ್!

ಸದ್ಯ ಚೈತನ್ಯ ಅವರು ತೆಲುಗಿನ ಜನಪ್ರಿಯ ನೃತ್ಯ ಕಾರ್ಯಕ್ರಮ ಧೀ ಶೋನಲ್ಲಿಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಕೋರಿಯೊಗ್ರಾಫರ್ ಸಾವಿಗೂ ಮುನ್ನ ಸಾಮಾಜಿಕ ಮಾಧ್ಯಮವೊಂದರಲ್ಲಿ ತನ್ನ ಅಳಲು ತೋಡಿಕೊಂಡಿದ್ದರೆಂದು ಇಂಡಿಯಾ ಟುಡೇ ವರದಿ ಮಾಡಿದೆ. 

ವರದಿ ಪ್ರಕಾರ, ಚೈತನ್ಯ ಸಾಮಾಜಿಕ ಮಾಧ್ಯಮವೊಂದರಲ್ಲಿ, ನನ್ನ ತಾಯಿ,ತಂದೆ ಮತ್ತು ಸಹೋದರಿ ನನ್ನನ್ನು ಯಾವುದೇ ಸಮಸ್ಯೆಗಳನ್ನು ಎದುರಿಸಲು ಬಿಡದೆ ಚೆನ್ನಾಗಿ ನೋಡಿಕೊಂಡರು. ನನ್ನ ಎಲ್ಲಾ ಗೆಳೆಯರಿಗೂ  ಕ್ಷಮೆಯಾಚಿಸುತ್ತೇನೆ.

ಇದನ್ನೂ ಓದಿ: Karnataka Assembly Election: ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಮುಂದಾದ ಸ್ಯಾಂಡಲ್‌ವುಡ್ ಸ್ಟಾರ್ಸ್, ಯಾರ್ಯಾರು ಗೊತ್ತಾ?

ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ ಹೀಗಾಗಿ ಎಲ್ಲರಿಗೂ ಕ್ಷಮೆಯಾಚಿಸುತ್ತೇನೆ. ಹಣದ ವಿಷಯದಲ್ಲಿ ನಾನು ನನ್ನ ಒಳ್ಳೆಯತನವನ್ನು ಕಳೆದುಕೊಂಡೆ. ಕೇವಲ ಸಾಲ ತೆಗೆದುಕೊಳ್ಳುವುದಲ್ಲ, ಅದನ್ನು ಮರುಪಾವತಿ ಮಾಡುವ ಸಾಮರ್ಥ್ಯ ಹೊಂದಿರಬೇಕು.

ಆದರೆ ನಾನು ಅದನ್ನು ಮಾಡಲು ಸಾಧ್ಯವಾಗಲಿಲ್ಲ. ಪ್ರಸ್ತುತ, ನಾನು ನೆಲ್ಲೂರಿನಲ್ಲಿ ಇದ್ದೇನೆ ಮತ್ತು ಇದು ನನ್ನ ಕೊನೆಯ ದಿನವಾಗಿದೆ. ನನ್ನ ಸಾಲಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಾನು ಸಹಿಸಲಾರೆ" ಎಂದು ಡ್ಯಾನ್ಸ್  ಕೋರಿಯೊಗ್ರಾಫರ್ ಚೈತನ್ಯ ತಮ್ಮ ಕೊನೆಯ ವೀಡಿಯೊದಲ್ಲಿ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News