ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ

Written by - YASHODHA POOJARI | Edited by - Manjunath N | Last Updated : Jun 15, 2023, 09:47 PM IST
  • ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ
  • "ಕ್ಷೇತ್ರಪತಿ" ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ
  • ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ
ನವೀನ್ ಶಂಕರ್ ಅಭಿನಯದ "ಕ್ಷೇತ್ರಪತಿ" ಚಿತ್ರದ ಟೀಸರ್ ಗೆ ಅಭಿಮಾನಿಗಳು ಫಿದಾ  title=

"ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.

 ಪ್ರಸ್ತುತ ನವೀನ್ ಶಂಕರ್  "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. "ಕ್ಷೇತ್ರಪತಿ" ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌.

ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. 

ಈ ಹಿಂದೆ "ಹೊಂದಿಸಿ ಬರೆಯಿರಿ" ಚಿತ್ರದಲ್ಲಿ ನಾಯಕ - ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ,  ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕ - ನಾಯಕಿಯಾಗಿ ನಟಿಸಿದ್ದಾರೆ.  ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News