"ಗುಲ್ಟು" ಚಿತ್ರದ ಮೂಲಕ ಜನಪ್ರಿಯರಾಗಿ, "ಹೊಂದಿಸಿ ಬರೆಯಿರಿ", "ಹೊಯ್ಸಳ" ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.


COMMERCIAL BREAK
SCROLL TO CONTINUE READING

 ಪ್ರಸ್ತುತ ನವೀನ್ ಶಂಕರ್  "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.


ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. "ಕ್ಷೇತ್ರಪತಿ" ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ‌.


ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. 


ಈ ಹಿಂದೆ "ಹೊಂದಿಸಿ ಬರೆಯಿರಿ" ಚಿತ್ರದಲ್ಲಿ ನಾಯಕ - ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ,  ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ "ಕ್ಷೇತ್ರಪತಿ" ಚಿತ್ರದಲ್ಲೂ ನಾಯಕ - ನಾಯಕಿಯಾಗಿ ನಟಿಸಿದ್ದಾರೆ.  ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.