Dr Shivarajkumar Birthday: ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜಕುಮಾರ್ ಇಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸದೊಂದು ಚಿತ್ರವನ್ನು ಅವರು ಒಪ್ಪಿಕೊಂಡಿದ್ದು, ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಈ ಚಿತ್ರದಲ್ಲಿನ ಅವರ ಪಾತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಈ ಹಿಂದೆ ತಮಿಳಿನಲ್ಲಿ ವಿಕ್ರಮ್ ಪ್ರಭು ಅಭಿನಯದ ‘ಪಾಯುಮ್ ಒಳಿ ನೀ ಎನಕ್ಕು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸುಧೀರ್ ಚಂದ್ರ ಫಿಲಂ ಕಂಪನಿ ಮೂಲಕ ಸುಧೀರ್ ಚಂದ್ರ ಪದಿರಿ ನಿರ್ಮಿಸುತ್ತಿದ್ದಾರೆ. ಇದು ಅವರು ಕನ್ನಡದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರವಾಗಿದೆ. 


ಇದನ್ನೂ ಓದಿ- Shivarajkumar Birthday: ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್ ಗೆ ಹುಟ್ಟುಹಬ್ಬದ ಸಂಭ್ರಮ


‘ವಿಕ್ರಮ್ ವೇದ’ ಮತ್ತು ‘ಕೈದಿ’ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಸ್ಯಾಮ್ ಸಿ.ಎಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದೊಂದು ಆಕ್ಷನ್ ಚಿತ್ರವಾಗಿದ್ದು, ದಕ್ಷಿಣ ಭಾರತದ ಜನಪ್ರಿಯ ನಟ-ನಟಿಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. 


ಇದನ್ನೂ ಓದಿ- ಯುವ ನಟನೊಂದಿಗೆ ನಟ ಧನುಷ್‌ ಮಾಜಿ ಪತ್ನಿ ಐಶ್ವರ್ಯ ರಜಿನಿಕಾಂತ್‌ ಮದುವೆ..!


ಇನ್ನು ಈ ಚಿತ್ರವು ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸದ್ಯದಲ್ಲೇ ಈ ಚಿತ್ರದ ಹೆಚ್ಚಿನ ವಿವರಗಳು ಹೊರಬೀಳಲಿವೆ ಎಂದು ನಿರೀಕ್ಷಿಸಲಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.