Sandalwood : ಈಗಾಗಲೇ ತೋತಾಪುರಿ 2 ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ತೋತಾಪುರಿ 1 ರಲ್ಲಿ ಜಾತಿ-ಧರ್ಮ ಹಾಗೂ ಮಡಿವಂತಿಕೆ ಬಗ್ಗೆ ಕಾಮಿಡಿ ಮೂಲಕ ಹೇಳಲಾಗಿತ್ತು. ಇದೀಗ ತೋತಾಪುರಿ 2 ಚಿತ್ರ ರಿಲೀಸ್​ಗೆ ರೆಡಿಯಾಗಿದ್ದು ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಚಿತ್ರತಂಡ ಇನ್ನೂ ಏನಾದ್ರೂ ವಿಭಿನ್ನವಾಗಿ ಸಿನಿಮಾ ಕೊಡಬೇಕು ಅಂತ ಕೆಲ ದೃಶ್ಯಗಳನ್ನು ರೀ ಶೂಟ್​ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಡಾಲಿ ಧನಂಜಯ್ ವಿಭಿನ್ನ ಪಾತ್ರದ ಮೂಲಕ ಸಿನಿ ಪ್ರೇಮಿಗಳ ಮನಗೆಲ್ಲಲು ರೆಡಿಯಾಗಿದ್ದಾರೆ. ತೋತಾಪುರಿ ಮೊದಲ ಭಾಗದಲ್ಲಿ ಅವರ ಪಾತ್ರದ ಪರಿಚಯವಾಗಿತ್ತು. ಆದರೆ ಈ ಭಾಗದಲ್ಲಿ ಅವರು ಎಷ್ಟು ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ, ಗೆಟಪ್, ಡೈಲಾಗ್ ಸೇರಿದಂತೆ ಯಾವುದೇ ವಿಷಯದ ಕುರಿತು ಚಿತ್ರತಂಡ ಹೆಚ್ಚಿನ ಮಾಹಿತಿ ಹೊರ ಹಾಕಿರಲಿಲ್ಲ. 


ಇದನ್ನೂ ಓದಿ-ಅನಿರುದ್ಧ್ ಅಭಿನಯದ 'chef ಚಿದಂಬರ' ಚಿತ್ರಕ್ಕೆ ಭಾರತಿ ವಿಷ್ಣುವರ್ಧನ್, ಉಪೇಂದ್ರ ಚಾಲನೆ


ಇದೀಗ ಸಿನಿಮಾದ ಎರಡನೇ ಭಾಗ ಬಿಡುಗಡೆ ಹಂತಕ್ಕೆ ಬಂದಿದೆ. ಸೋ ಈಗ ಫ್ಯಾನ್ಸ್ ಕೇಳ್ತಾ ಇರೋ ಪ್ರಶ್ನೆ ಏನಪ್ಪಾ ಅಂದ್ರೆ ಯಾವಾಗ ತೋತಾಪುರಿ 2 ತಿನ್ನೋದು ಅಂತ.ಇನ್ನೇನು ಕೆಲವೇ ದಿನಗಳಲ್ಲಿ ರಿಲೀಸ್ ಡೇಟ್ ಅನೌನ್ಸ್ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.


ಡಾಲಿ' ಜೋಡಿಯಾಗಿ ಸುಮನ್ ರಂಗನಾಥ್ ನಟಿಸಿದ್ದಾರೆ. ಹಾಗೆಯೇ ಈ ಚಿತ್ರದಲ್ಲಿ ಜಗ್ಗೇಶ್, ಅದಿತಿ ಪ್ರಭುದೇವ, ದತ್ತಣ್ಣ, ವೀಣಾ ಸುಂದರ್, ಹೇಮಾದತ್ ಸೇರಿದಂತೆ ಬೃಹತ್ ತಾರಾಗಣವೇ ಇದೆ. ವಿಜಯಪ್ರಸಾದ್ ನಿರ್ದೇಶನವಿರುವ ಈ ಚಿತ್ರವನ್ನು ಕೆ.ಎ.ಸುರೇಶ್ ನಿರ್ಮಿಸಿದ್ದಾರೆ.


ಇದನ್ನೂ ಓದಿ-1 ನಿಮಿಷಕ್ಕೆ ಒಂದು ಕೋಟಿ ಚಾರ್ಜ್, ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.