ಕಿಚ್ಚ ಬಂದಿಲ್ಲ ಅಂತಾ ರೊಚ್ಚಿಗೆದ್ದ ಫ್ಯಾನ್ಸ್: ಸುದೀಪ್ ಕಾರ್ಯಕ್ರಮದ ಚೇರ್ ಗಳೆಲ್ಲವೂ ಪೀಸ್ ಪೀಸ್!!
ದಾವಣಗೆರೆ ಜಿಲ್ಲೆ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಇಂದು ಸಂಜೆ 5.30ಕ್ಕೆ ನಟ ಸುದೀಪ್ ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಸುದೀಪ್ ಆಗಮನ ಹಿನ್ನಲೆ ಅಭಿಮಾನಿಗಳು ಮತ್ತು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಹಾಜರಾಗಲಿಲ್ಲ.
ದಾವಣೆಗೆರೆ: ಇಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವೊಂದಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಆಗಮಿಸಬೇಕಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಗೈರಾಗಿದ್ದು, ಈ ವಿಚಾರ ತಿಳಿದ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: Kudiyee Ni Teri : ʼಸೆಲ್ಫಿʼ ಹಾಡಿನಲ್ಲಿ 25ರ ಹರೆಯದ ನಟಿ ಜೊತೆ ಕಿಲಾಡಿ ಅಕ್ಕಿ ರೊಮ್ಯಾನ್ಸ್..!
ದಾವಣಗೆರೆ ಜಿಲ್ಲೆ ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಇಂದು ಸಂಜೆ 5.30ಕ್ಕೆ ನಟ ಸುದೀಪ್ ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಸುದೀಪ್ ಆಗಮನ ಹಿನ್ನಲೆ ಅಭಿಮಾನಿಗಳು ಮತ್ತು ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಆದರೆ ಕಾರಣಾಂತರಗಳಿಂದ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಹಾಜರಾಗಲಿಲ್ಲ.
ಇನ್ನು ತಮ್ಮ ನೆಚ್ಚಿನ ನಟನ ಆಗಮನಕ್ಕೆಂದು ಕಾದುಕುಳಿತಿದ್ದ ಅಭಿಮಾನಿಗಳಿಗೆ, ಸುದೀಪ್ ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂಬ ವಿಷಯ ತಿಳಿದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಹಾಕಿದ್ದ ಆಸನಗಳನ್ನು ತೂರಾಡಿ ಆಕ್ರೋಶ ಹೊರಹಾಕಿದ್ದಾರೆ. ಈ ಸಂದರ್ಭದಲ್ಲಿ ಗಲಾಟೆ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದು, ಕೊನೆಗೆ ಲಘು ಲಾಠಿ ಚಾರ್ಜ್ ಮಾಡಿದ್ದಾರೆ.
ಇದನ್ನೂ ಓದಿ: Prabhas Health : ಪ್ರಭಾಸ್ ಆರೋಗ್ಯದಲ್ಲಿ ಏರುಪೇರು.. ಎಲ್ಲಾ ಸಿನಿಮಾ ಶೂಟಿಂಗ್ ಕ್ಯಾನ್ಸಲ್ ಮಾಡಿದ ಡಾರ್ಲಿಂಗ್..!
“ಸಂಜೆವರೆಗೂ ಸುದೀಪ್ ಬರ್ತಾರೆ ಎಂದು ಜಾತ್ರಾ ಸಮಿತಿಯವರು ಹೇಳುತ್ತಾ ಬಂದಿದ್ದಾರೆ. ಕಳೆದ ಕಾರ್ಯಕ್ರಮದಲ್ಲಿ ಸಿಎಂ ಕೂಡ ಸುದೀಪ್ ಬರುತ್ತಾರೆ. ನಾನು ಬಾ ಅಂತ ಪೋನ್ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇಂದು ಬಂದಿಲ್ಲ” ಎನ್ನುತ್ತಾ ಅಭಿಮಾನಿಗಳು ಬೇಸರ ಹೊರಹಾಕಿದ್ದಾರೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.