Fire Fly Teaser : 'ಫೈರ್‌ ಫ್ಲೈ' ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ನಿರ್ಮಾಣದ ಮೊದಲ ಸಿನಿಮಾ. ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಈ ಚಿತ್ರದ ಮೊದಲ ಝಲಕ್ ರಿಲೀಸ್ ಆಗಿದೆ. ವಿಕ್ಕಿಯಾಗಿ ನಾಯಕ ವಂಶಿಯನ್ನು ಫೈರ್ ಫ್ಲೈ ಬಳಗ ಸಿನಿಮಾಪ್ರೇಮಿಗಳಿಗೆ ಪರಿಚಯಿಸಿದೆ. 


COMMERCIAL BREAK
SCROLL TO CONTINUE READING

ವಿವೇಕಾನಂದ ಎಂದು ಪರಿಚಯಿಸಿಕೊಳ್ಳುವ ನಾಯಕ ತಾನೊಬ್ಬ ಅವಾರ್ಡ್ ವಿನ್ನಿಂಗ್ ಮ್ಯಾಥ್ಸ್ ಟೀಚರ್ ಎಂದು ಹೇಳಿಕೊಳ್ಳುತ್ತಾನೆ. ವಿಕ್ಕಿ ಪ್ರಪಂಚದಲ್ಲಿ ಬೆಳಿಗ್ಗೆ 7, ಮಧ್ಯಾಹ್ನ 1 ಮತ್ತು ರಾತ್ರಿ 8 ಗಂಟೆಗೆ ಏನ್ ನಡೆಯುತ್ತದೆ.  ವಿಕ್ಕಿ ವಿಚಿತ್ರ ವರ್ತನೆಯನ್ನು ಸಖತ್ ಫನ್ನಿಂಯಾಗಿ ಕಟ್ಟಿಕೊಡಲಾಗಿದೆ.  2 ನಿಮಿಷ 49 ಸೆಕೆಂಡ್ ಇರುವ ಫೈರ್ ಫ್ಲೈ ಟೀಸರ್ ಕುತೂಹಲದಿಂದ ಕೂಡಿದ್ದು, ವಿಕ್ಕಿ ಯಾರು ಅನ್ನೋದನ್ನು ಹೇಳಿರುವ ಚಿತ್ರತಂಡ ಅಸಲಿಗೆ ಯಾಕೆ ವಿಚಿತ್ರವಾಗಿ ವರ್ತನೆ ಮಾಡ್ತಾನೆ ಅನ್ನೋದರ ಗುಟ್ಟುಬಿಟ್ಟು ಕೊಟ್ಟಿಲ್ಲ. 


ಇದನ್ನೂ ಓದಿ: ದೀಪಿಕಾ ಅಂತೆ ಕಣ್ಣು.. ರಣವೀರ್‌ನಂತೆ ತುಟಿ... ಇಷ್ಟು ಮುದ್ದಾಗಿದ್ದಾಳಾ ದೀಪಿಕಾ ಪಟುಕೋಣೆಯ ಮಗಳು! AI ಫೋಟೋ ವೈರಲ್‌


ವಂಶಿ ನಾಯಕನಾಗಿ ನಿರ್ದೇಶಕನಾಗಿ ಮಿಂಚಿದ್ದು, ತಾಂತ್ರಿಕವಾಗಿ ಟೀಸರ್ ಶ್ರೀಮಂತಿಕೆಯಿಂದ ಕೂಡಿದೆ. ಚಿತ್ರದ ಫ್ರೇಮ್, ಕಲರಿಂಗ್, ಕಂಟೆಂಟ್, ಕ್ವಾಲಿಟಿಯಲ್ಲಿ ಕಾಂಪ್ರಮೈಸ್ ಆಗದೆ ಒಳ್ಳೆ ಔಟ್ ಫುಟ್ ನೀಡಲಾಗಿದೆ. ಚರಣ್ ರಾಜ್ ಸಂಗೀತ, ಅಭಿಲಾಷ್  ಕಳತ್ತಿ ಕ್ಯಾಮೆರಾವರ್ಕ್ ರಘು ನಿಡುವಳ್ಳಿ ಸಂಭಾಷಣೆ, ಸುರೇಶ್ ಆರುಮುಗಂ ಸಂಕಲನ ಫೈರ್ ಫ್ಲೈ ಟೀಸರ್ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. 


ಫೈರ್ ಫ್ಲೈ ನಾಯಕನಾಗಿ ಅಭಿನಯಿಸಿರುವ ವಂಶಿಗೆ ಜೋಡಿಯಾಗಿ ರಚನಾ ಇಂದರ್, ಉಳಿದಂತೆ ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ ಶೆಟ್ಟಿ, ಮೂಗು ಸುರೇಶ್, ಚಿತ್ಕಲಾ ಬಿರಾದಾರ್, ಸಿಹಿ ಕಹಿ ಚಂದ್ರು ತಾರಾಬಳಗದಲ್ಲಿದ್ದಾರೆ.ಈ ಸಿನಿಮಾವನ್ನು ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ನಿರ್ಮಾಣ ಮಾಡುತ್ತಿದೆ. ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡಲು ಮುಂದಾಗಿದೆ. 


ಫೈರ್ ಫ್ಲೈ ಮೂಲಕವೇ ನಿರ್ದೇಶಕ ವಂಶಿ ಪೂರ್ಣ ಪ್ರಮಾಣದ ನಾಯಕರಾಗುತ್ತಿದ್ದಾರೆ. ಇವರ ಮೊದಲ ಪ್ರಯತ್ನದ ಬಗ್ಗೆ ಟಾಕ್ ಇದ್ದೇ ಇದೆ. ಚಿತ್ರದ ಮೊದಲ ಝಲಕ್ ನಲ್ಲಿ ಫನ್-ಎಮೋಷನ್, ಎಂಟರ್ ಟೈನ್ಮೆಂಟ್ ಎಲ್ಲವೂ ಇದೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಈ ವರ್ಷಾಂತ್ಯಕ್ಕೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.


ಇದನ್ನೂ ಓದಿ: ತಾಯಿಯಾದ ನಟಿ ದೀಪಿಕಾ ಪಡುಕೋಣೆ.. ಫೋಟೋ ಕಂಡು ಫ್ಯಾನ್ಸ್‌ ದಿಲ್‌ ಖುಷ್‌ !


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.