ದೀಕ್ಷಿತ್ ಶೆಟ್ಟಿ ಅಭಿನಯದ 'ಬ್ಯಾಂಕ್ of ಭಾಗ್ಯಲಕ್ಷ್ಮಿ' ಸಿನಿಮಾದ ಮೊದಲ ಹಾಡು ಬಿಡುಗಡೆ: ಶಿವನ ಹಾಡು ರಿಲೀಸ್‌ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ

Bank of Bhagyalakshmi Movie: "ಪ್ರೇಮ ಪೂಜ್ಯಂ", "ಕೌಸಲ್ಯ ಸುಪ್ರಜಾ ರಾಮ" ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ.

Written by - Bhavishya Shetty | Last Updated : Apr 18, 2025, 02:24 PM IST
    • ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ʼಬ್ಯಾಂಕ್ of ಭಾಗ್ಯಲಕ್ಷ್ಮಿ' ಚಿತ್ರ
    • ಚಿತ್ರದ ಮೊದಲ ಹಾಡು MRT ಮ್ಯೂಸಿಕ್(ಲಹರಿ) ಮೂಲಕ ಬಿಡುಗಡೆ
    • ಬೃಂದಾ ಆಚಾರ್ಯ ಈ ಚಿತ್ರದ ನಾಯಕಿಯಾಗಿ ಅಭಿನಯ
ದೀಕ್ಷಿತ್ ಶೆಟ್ಟಿ ಅಭಿನಯದ 'ಬ್ಯಾಂಕ್ of ಭಾಗ್ಯಲಕ್ಷ್ಮಿ' ಸಿನಿಮಾದ ಮೊದಲ ಹಾಡು ಬಿಡುಗಡೆ: ಶಿವನ ಹಾಡು ರಿಲೀಸ್‌ ಮಾಡಿ ಚಿತ್ರದ ಪ್ರಚಾರಕ್ಕೆ ಚಾಲನೆ
Bank of Bhagyalakshmi Movie

Bank of Bhagyalakshmi Movie: ರಂಗಿ ತರಂಗ’, ‘ಅವನೇ ಶ್ರೀಮನ್ನಾರಾಯಣ’ ದಂತಹ ಯಶಸ್ವಿ ಚಿತ್ರಗಳ ನಿರ್ಮಾಪಕ ಹೆಚ್.ಕೆ ಪ್ರಕಾಶ್  ನಿರ್ಮಾಣದ, "ದಿಯಾ", "ಬ್ಲಿಂಕ್" ಸೇರಿದಂತೆ ಯಶಸ್ವಿ ಸಿನಿಮಾಗಳ ಮೂಲಕ ಜನಪ್ರಿಯರಾಗಿರುವ ದೀಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿರುವ ಹಾಗೂ ಅಭಿಷೇಕ್ ಎಂ ನಿರ್ದೇಶನದ 'ಬ್ಯಾಂಕ್ of ಭಾಗ್ಯಲಕ್ಷ್ಮಿ' ಚಿತ್ರದ ಮೊದಲ ಹಾಡು MRT ಮ್ಯೂಸಿಕ್(ಲಹರಿ) ಮೂಲಕ ಬಿಡುಗಡೆಯಾಗಿದೆ.

Add Zee News as a Preferred Source

ಇದನ್ನೂ ಓದಿ:  ಮೆಹೆಂದಿಗೆ ಈ ಹಣ್ಣಿನ ರಸ ಬೆರೆಸಿ ಹಚ್ಚಿದರೆ ನಿಮಿಷಗಳಲ್ಲಿ ಕಪ್ಪು ಬಣ್ಣಕ್ಕೆ ತಿರುಗುವುದು ಬಿಳಿ ಕೂದಲು, ಅದು ಕೂಡಾ ನೈಸರ್ಗಿಕವಾಗಿ

"ಪ್ರೇಮ ಪೂಜ್ಯಂ", "ಕೌಸಲ್ಯ ಸುಪ್ರಜಾ ರಾಮ" ಖ್ಯಾತಿಯ ಬೃಂದಾ ಆಚಾರ್ಯ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ.  ನಾಗಾರ್ಜುನ ಶರ್ಮ ಅವರು ಬರೆದಿರುವ "ಹರ ಓಂ" ಎಂಬ ಶಿವನ ಕುರಿತಾದ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಗಳಲ್ಲಿ ಈ ಚಿತ್ರ ಮೂಡಿಬರುತ್ತಿದ್ದು, ಹಾಡು ಸಹ ಎರಡೂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ. ಕನ್ನಡದಲ್ಲಿ ಶಿಲ್ಪ ಹಾಗೂ ತೆಲುಗಿನಲ್ಲಿ ಖ್ಯಾತ ಗಾಯಕಿ ಮಂಗ್ಲಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಉಷಾ ಭಂಡಾರಿ ಹಾಗೂ ದರ್ಶನ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಲಹರಿ ವೇಲು ಅವರು ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಸಿಂಪಲ್ ಸುನಿ ಅವರ ಜೊತೆಗೆ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ನನಗೆ ಇದು ಮೊದಲ ನಿರ್ದೇಶನದ ಚಿತ್ರ‌. ನಾನು, ರಕ್ಷಿತ್ ಶೆಟ್ಟಿ ಹಾಗೂ ಸಚಿನ್ ಅವರು ಸೇರಿ ಪಿನಾಕ ಎಂಬ ವಿ.ಎಫ್.ಎಕ್ಸ್ ಸ್ಟುಡಿಯೋ ಸಹ ನಡೆಸುತ್ತಿದ್ದೇವೆ. ನಿರ್ಮಾಪಕ ಪ್ರಕಾಶ್ ಅವರು "ಅವನ್ನೇ ಶ್ರೀಮನ್ನಾರಾಯಣ" ಚಿತ್ರದ ಸಮಯದಿಂದಲೂ ಪರಿಚಯ. ಈ ಚಿತ್ರದ ಕಥೆ ಕೇಳಿದ ಅವರು ನಿರ್ಮಾಣಕ್ಕೆ ಮುಂದಾದರು. "ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ" ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಈಗಾಗಲೇ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಇಂದು "ಹರ ಓಂ" ಎಂಬ ಚಿತ್ರದ ಮೊದಲ  ಹಾಡನ್ನು ಬಿಡುಗಡೆ ಮಾಡಿದ್ದೇವೆ‌. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಹಾಡು ಬಿಡುಗಡೆಯಾಗಿದೆ. ಚಿತ್ರದ ಪ್ರೀ ಕ್ಲೈಮ್ಯಾಕ್ಸ್ ನಲ್ಲಿ ಈ ಹಾಡು ಬರುತ್ತದೆ. ಚಿತ್ರದ ಕಥೆಗೆ ಹಾಗೂ ಈ ಹಾಡಿಗೂ ಸಂಬಂಧವಿದೆ. ಈ ವರ್ಷದ ಮಧ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ ಎಂದರು ನಿರ್ದೇಶಕ ಅಭಿಷೇಕ್.

"ರಂಗಿತರಂಗ" ಚಿತ್ರದಿಂದ ನಿರ್ಮಾಪಕನಾದೆ. ಇದು ನನ್ನ ನಿರ್ಮಾಣದ ಆರನೇ ಚಿತ್ರ. "ರಂಗಿತರಂಗ" ಚಿತ್ರದ ಹಾಡುಗಳು ಲಹರಿ ಸಂಸ್ಥೆಯಿಂದ ಬಿಡುಗಡೆಯಾಗಿತ್ತು. ಈ ಚಿತ್ರದ ಹಾಡುಗಳು ಸಹ ಲಹರಿ ಸಂಸ್ಥೆಯಿಂದಲೇ ಬಿಡುಗಡೆಯಾಗಿದೆ. ವೇಲು ಅವರು ಒಂದೊಳ್ಳೆ ಮೊತ್ತ‌ ಸಹ ನೀಡಿದ್ದಾರೆ. ನಿರ್ದೇಶಕ ಅಭಿಷೇಕ್ ಉತ್ತಮ ಕಥೆ ಮಾಡಿಕೊಂಡಿದ್ದಾರೆ. ನಮ್ಮ "ರಂಗಿತರಂಗ" ಚಿತ್ರ ಹತ್ತು ವರ್ಷಗಳ ಹಿಂದೆ ಜುಲೈ ತಿಂಗಳಲ್ಲಿ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ಸಹ‌ ಜುಲೈನಲ್ಲೇ ಬಿಡುಗಡೆ ಮಾಡುತ್ತೇವೆ ಎಂದರು ನಿರ್ಮಾಪಕ ಪ್ರಕಾಶ್.

ಕಳೆದ ವರ್ಷ ಇದೇ ಸಮಯಕ್ಕೆ ನನ್ನ "ಬ್ಲಿಂಕ್" ಚಿತ್ರ ಬಿಡುಗಡೆಯಾಗಿತ್ತು. ಒಂದು ವರ್ಷದ ನಂತರ ನಿಮ್ಮನೆಲ್ಲಾ ಭೇಟಿ ಮಾಡುತ್ತಿದ್ದೇನೆ. ಇನ್ನೂ, ಇಂದು ಬಿಡುಗಡೆಯಾಗಿರುವ ಈ ಚಿತ್ರದ ಹಾಡು ತುಂಬಾ ಚೆನ್ನಾಗಿದೆ.  ವಿಶೇಷವೆಂದರೆ ಈ ಹಾಡಿನಲ್ಲಿ ನನ್ನ ಗುರುಗಳು ಹಾಗೂ ನಾನು ಪಾಠ ಹೇಳಿ ಕೊಟ್ಟಿರುವ ಹುಡುಗರು ಅಭಿನಯಿಸಿದ್ದಾರೆ ಎಂದು ನಾಯಕ ದೀಕ್ಷಿತ್ ಶೆಟ್ಟಿ ತಿಳಿಸಿದರು.

ನನ್ನ ದಿನಚರಿ ಆರಂಭವಾಗುವುದೆ ಶಿವನಾಮ ಸ್ಮರಣೆಯಿಂದ. ನಮ್ಮ ಚಿತ್ರದ ಈ ಹಾಡನ್ನು ಕೇಳಿದ ಮೇಲಂತೂ ಎಷ್ಟು ಸಲ ಗುನುಗಿದ್ದೇನೊ ಲೆಕ್ಕವಿಲ್ಲ. ಅಷ್ಟು  ಅದ್ಭುತವಾಗಿದೆ "ಹರ ಓಂ" ಹಾಡು ಎಂದರು ನಾಯಕಿ ಬೃಂದಾ ಆಚಾರ್ಯ.

ಇದನ್ನೂ ಓದಿ:  ಮೊಟ್ಟೆಗೆ ಈ ಹಣ್ಣಿನ ತಿರುಳು ಬೆರೆಸಿ ತಲೆಗೆ ಹಚ್ಚಿ.. 2 ನಿಮಿಷದಲ್ಲಿ ಬಿಳಿ ಕೂದಲು ಕಪ್ಪಾಗುವುದು! ತಲೆಹೊಟ್ಟು ತೊಲಗಿ ಬೇರಿನಿಂದಲೇ ಗಟ್ಟಿಯಾಗಿ ಉದ್ದ ಬೆಳೆಯುವುದು!

ಹಾಡು ಬರೆದಿರುವ ನಾಗಾರ್ಜುನ ಶರ್ಮ, ಛಾಯಾಗ್ರಾಹಕ ಅಭಿಷೇಕ್  ಕಾಸರಗೋಡು, ನಾಯಕನ ಸ್ನೇಹಿತರಾಗಿ ನಟಿಸಿರುವ ಶ್ರೀವತ್ಸ, ಶ್ರೇಯಸ್ ಶರ್ಮ, ಅಶ್ವಿನ್, ವಿನುತ್ ಹಾಗೂ ನೃತ್ಯ ಸಂಯೋಜನೆ ಮಾಡಿರುವ ಉಷಾ ಭಂಡಾರಿ ಮತ್ತು ದರ್ಶನ್ ಮುಂತಾದವರು "ಹರ ಓಂ" ಹಾಡಿನ ಕುರಿತು ಮಾತನಾಡಿದರು. ಉಷಾ ಭಂಡಾರಿ ಅವರು ಈ ಹಾಡಿನಲ್ಲಿ ಅಭಿನಯ ಕೂಡ ಮಾಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News