ಬೆಂಗಳೂರು: ಸಮಾಜದಲ್ಲಿನ ಸಮಾನತೆಗಾಗಿ ಕಾಂಗ್ರೆಸ್(Congress) ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ಎರಡನ್ನೂ ಸೋಲಿಸಬೇಕು ಎಂದು ನಟ ಚೇತನ್ ಅಹಿಂಸಾ(Chetan Kumar Ahimsa) ಹೇಳಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಕಾಂಗ್ರೆಸ್ ಕೂಡ ಬ್ರಾಹ್ಮಣ್ಯವನ್ನು ಸಲುಹುವ ಸಂಸ್ಥೆ’ ಅಂತಾ ಕುಟುಕಿದ್ದಾರೆ.    


COMMERCIAL BREAK
SCROLL TO CONTINUE READING

‘ಕಾಂಗ್ರೆಸ್ ಪಕ್ಷದ ಸದಸ್ಯರಾದ ಕೆ.ಬಿ.ಹೆಡ್ಗೆವಾರ್ ಅವರು 1925ರಲ್ಲಿ ಆರ್‌ಎಸ್‌ಎಸ್(RSS) ಸ್ಥಾಪಿಸಿದರು. ಕಾಂಗ್ರೆಸ್ ನ ಮತ್ತೊಬ್ಬ ಸದಸ್ಯರಾದ ಬಾಲ ಗಂಗಾಧರ ತಿಲಕ್ ಅವರು ಹೆಡ್ಗೆವಾರ್ ಅವರನ್ನು ಪ್ರಭಾವಿಸಿದ್ದರು. ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್(ಸಂಘ ಪರಿವಾರ) ಯಾವತ್ತಿನಿಂದಲೂ ಒಂದಕ್ಕೊಂದು ಬೆಸೆದುಕೊಂಡೇ ಇದೆ’ ಅಂತಾ ಹೇಳಿದ್ದಾರೆ.  



ಇದನ್ನೂ ಓದಿ: ಬಸವರಾಜ್ ಬೊಮ್ಮಾಯಿ ರಾಜ್ಯಕ್ಕೆ ‘ಅತಿಥಿ ಸಿಎಂ’ನಂತಾಗಿದ್ದಾರೆ: ಕಾಂಗ್ರೆಸ್ ಟೀಕೆ


‘ಬ್ರಾಹ್ಮಣ್ಯ(Brahmanya)ವನ್ನು ಉಳಿಸಿಕೊಳ್ಳುವುದರಿಂದ ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್, ಎರಡಕ್ಕೂ ಲಾಭವಾಗುತ್ತದೆ.  ಹೀಗಾಗಿ ಸಮಾಜದಲ್ಲಿನ ಸಮಾನತೆಗಾಗಿ ಕಾಂಗ್ರೆಸ್ ಮತ್ತು ಆರ್‌ಎಸ್‌ಎಸ್ ಎರಡನ್ನೂ ಸೋಲಿಸಬೇಕು’ ಎಂದು ನಟ ಚೇತನ್ ಟ್ವೀಟ್ ಮಾಡಿದ್ದಾರೆ. ನಟನೆಯ ಜೊತೆಗೆ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿರುವ ಚೇತನ್, ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಅನೇಕ ವಿಷಯಗಳ ಬಗ್ಗೆ ಅವರು ಚರ್ಚೆ ಮಾಡುತ್ತಿರುತ್ತಾರೆ.


ಈ ಹಿಂದೆ ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah)ನವರು ಜಾತಿವಾದಿ ಎಂದಿದ್ದರು. ಸಿದ್ದರಾಮಯ್ಯ ಕರ್ನಾಟಕ ಮತ್ತು ಕಾಂಗ್ರೆಸ್‌ನ ಪ್ರಬಲ ನಾಯಕ. ಆದರೆ ಅವರು ಬ್ರಾಹ್ಮಣ್ಯವನ್ನು ಆಳವಾಗಿ ಬೇರೂರಿಸಿಕೊಂಡಿರುವ ಜಾತಿವಾದಿ ನಾಯಕ’ ಅಂತಾ ಚೇತನ್ ಹೇಳಿದ್ದರು.   



ಇದನ್ನೂ ಓದಿ: Ganesh Chaturthi 2021: ಗಣೇಶ ಚತುರ್ಥಿ ಪ್ರಯುಕ್ತ 1000 ಹೆಚ್ಚುವರಿ KSRTC ಬಸ್ ಸೇವೆ


‘ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯ(Siddaramaiah)ನವರ ಸೇವೆ ಅವರು ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರ ಬಹು ಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತನಾಡುತ್ತಾರೆ’ ಎಂದು ಟೀಕಿಸಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.