K Shivaram health : ಹೃದಯಾಘಾತದಿಂದ ಮಾಜಿ ಐಎಎಸ್ ಅಧಿಕಾರಿ, ಹಿರಿಯ ನಟ ಕೆ ಶಿವರಾಮ್ ಅವರು ಬೆಂಗಳೂರಿನ ಎಚ್​ಸಿಜಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರಿಗೆ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


COMMERCIAL BREAK
SCROLL TO CONTINUE READING

ಕಳೆದ 20 ದಿನಗಳಿಂದ ಶಿವರಾಮ್‌ ಅವರ ಆರೋಗ್ಯದಲ್ಲಿ ಏರಪೇರಾಗಿತ್ತು. ಇದೀಗ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. 71 ವರ್ಷದ ಶಿವರಾಮ್ ಅವರು ಸಧ್ಯ ಬೆಂಗಳೂರಿನ ಎಚ್‌ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ, ಅವರ ಮೆದುಳು ನಿಷ್ಕ್ರಿಯವಾಗಿದೆ ಎಂದು ಹೇಳಲಾಗಿದೆ.


ಇದನ್ನೂ ಓದಿ:'ವಿದ್ಯಾಪತಿ'ಗೆ ಜೋಡಿಯಾದ ಉಪಾಧ್ಯಕ್ಷ ಸುಂದರಿ..ನಾಗಭೂಷಣ್ ಚಿತ್ರಕ್ಕೆ ಮಲೈಕಾ ವಸುಪಾಲ್ ನಾಯಕಿ


1993 ರಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ʼಬಾ ನಲ್ಲೆ ಮಧು ಚಂದ್ರಕೆʼ ಚಿತ್ರದಲ್ಲಿ ನಟಿಸುವ ಮೂಲಕ ಶಿವರಾಮ್‌ ಅವರು ಚಂದನವಕ್ಕೆ ಕಾಲಿಟ್ಟರು. ವಸಂತ ಕಾವ್ಯ, ಸಾಂಗ್ಲಿಯಾನ 3, ಓ ಪ್ರೇಮ ದೇವತೆ ಸೇರಿದಂತೆ ಇನ್ನೂ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. 2007 ರ ಬಳಿಕ ಶಿವರಾಮ್ ಅವರು ಯಾವುದೇ ಸಿನಿಮಾಗಳಲ್ಲಿ ನಟಿಸಿರಲಿಲ್ಲ.


ಇನ್ನು ಕೆ ಶಿವರಾಮ್ ಅವರು ಐಎಎಸ್ ಅಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದ ಮೊದಲಿಗರು ಎಂಬ ಖ್ಯಾತಿ ಹೊಂದಿದ್ದಾರೆ. ನಿವೃತ್ತಿ ಬಳಿಕ 2013 ರಲ್ಲಿ ಜೆಡಿಎಸ್ ಪಕ್ಷ ಸೇರಿದ್ದ ಅವರು, ಬಳಿಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು, ತದನಂತರ 2016ರಲ್ಲಿ ಬಿಜೆಪಿ ಪಕ್ಷ ಸೇರಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ