"ರಾಣ" ಚಿತ್ರದ "ಗಲ್ಲಿ ಬಾಯ್" ಹಾಡು ಬಿಡುಗಡೆ ಮಾಡಿದ ಪ್ರೇಮ್

ರಾಣ"  ಚಿತ್ರದ "ಗಲ್ಲಿ ಬಾಯ್" ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದ್ದಾರೆ. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ.

Written by - Ranjitha R K | Last Updated : Sep 21, 2022, 02:56 PM IST
  • ರಾಣ ಚಿತ್ರದ ಹಾಡು ಬಿಡುಗಡೆ
  • ಹಾಡು ಬಿಡುಗಡೆ ಮಾಡಿದ ಪ್ರೇಮ್
  • ಹಾಡಿಗೆ ಚಂದನ್ ಶೆಟ್ಟಿ ಸಂಗೀತ
"ರಾಣ" ಚಿತ್ರದ "ಗಲ್ಲಿ ಬಾಯ್" ಹಾಡು ಬಿಡುಗಡೆ ಮಾಡಿದ ಪ್ರೇಮ್   title=
rana film song released

ಬೆಂಗಳೂರು : ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್ ನಾಯಕನಾಗಿ ನಟಿಸಿರುವ, ನಂದಕಿಶೋರ್ ನಿರ್ದೇಶನದ "ರಾಣ"  ಚಿತ್ರದ "ಗಲ್ಲಿ ಬಾಯ್" ಹಾಡನ್ನು ಜೋಗಿ ಪ್ರೇಮ್ ಬಿಡುಗಡೆ ಮಾಡಿದ್ದಾರೆ. ಚಂದನ್ ಶೆಟ್ಟಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಹಾಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ. 

ಶ್ರೇಯಸ್ ಹಾಗೂ ರೀಷ್ಮಾ ನಾಣಯ್ಯ ಇಬ್ಬರೂ ಹಾಡಿನಲ್ಲಿ ಚೆನ್ನಾಗಿ ನೃತ್ಯ ಮಾಡಿದ್ದಾರೆ. ಅನಿರುದ್ಧ್ ಶಾಸ್ತ್ರಿ ಹಾಗೂ ಅದಿತಿ ಸಾಗರ್ ಗಾಯನ ಸುಮಧುರವಾಗಿದೆ. ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಜೋಗಿ ಪ್ರೇಮ್ ಹಾರೈಸಿದ್ದಾರೆ. 
 
ಇದನ್ನೂ ಓದಿ : ಶಿವಾಜಿ ನಗರದಲ್ಲಿ ಮಿಲಿಟರಿ ಹೋಟೆಲ್ ಊಟ ಸವಿದು ವಾವ್ ಎಂದ ನಟ ಆಶಿಶ್ ವಿದ್ಯಾರ್ಥಿ

ಚಂದನ್ ಶೆಟ್ಟಿ  ಎಲ್ಲರ ಮನಸಿಗೆ ಹತ್ತಿರವಾಗುವಂತಹ ಸಾಹಿತ್ಯ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನೀಡಿದ್ದಾರೆ. ನೃತ್ಯ ನಿರ್ದೇಶಕ ಇಮ್ರಾನ್ ಮಾಸ್ಟರ್ ಹಾಗೂ ಛಾಯಾಗ್ರಾಹಕ ಶೇಖರ್ ಚಂದ್ರ ಅವರ ಕಾರ್ಯವೈಖರಿ ಚೆನ್ನಾಗಿದೆ ಎಂದು  ನಾಯಕ ಶ್ರೇಯಸ್ ತಿಳಿಸಿದ್ದಾರೆ. ನಾನು ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು ಅಭಿನಯಿಸಿದ್ದೇನೆ. ನವೆಂಬರ್11 ರಂದು ಚಿತ್ರ ತೆರೆಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ. 

ಕೆ.ಮಂಜು ಸಹಕಾರದಿಂದ ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಇಡೀ ತಂಡಕ್ಕೆ ನನ್ನ ಧನ್ಯವಾದ ಎಂದಿದ್ದದಾರೆ ನಿರ್ಮಾಪಕ ಗುಜ್ಜಲ್ ಪುರುಷೋತ್ತಮ್. ನಂದಕಿಶೋರ್ ನಿರ್ದೇಶನದಲ್ಲಿ ಚಿತ್ರ ಚೆನ್ನಾಗಿ ಬಂದಿದೆ. ಹಾಡುಗಳು ಸುಂದರವಾಗಿದೆ. ಇದೇ ಮೊದಲ ಬಾರಿಗೆ ನಾನು ಹಿನ್ನೆಲೆ ಸಂಗೀತ ಕೂಡ ನೀಡಿದ್ದೇನೆ ಎಂದು ಸಂಗೀತದ ಬಗ್ಗೆ ಚಂದನ್ ಶೆಟ್ಟಿ ಮಾಹಿತಿ ನೀಡಿದರು.

ಇದನ್ನೂ ಓದಿ : ಧ್ರುವ ಸರ್ಜಾ ಸಿನಿಮಾದಲ್ಲಿ ನಟಿಸಲಿದ್ದಾರೆ ಶಿಲ್ಪಾ ಶೆಟ್ಟಿ, ಸಂಜಯ್ ದತ್

ಕೋಟೆ ಪ್ರಭಾಕರ್, ಅಶೋಕ್ , ರಘು ಹಾಗೂ ಗಾಯಕ ಅನಿರುದ್ಧ್ ಶಾಸ್ತ್ರಿ ಕೆ.ಮಂಜು, ನಂದ ಕಿಶೋರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News