ವಿಯೆಟ್ನಾಂನಲ್ಲಿ ಗೋಲ್ಡನ್ ಸ್ಟಾರ್..! ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಶೂಟಂಗ್‌ ಮುಕ್ತಾಯ

Golden Star Ganesh : ನಟ ಗಣೇಶ್‌ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಚಿತ್ರ ತೆರೆಗೆ ಬರಲು ಸಿದ್ದವಾಗಲಿದೆ. ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಚಿತ್ರಕ್ಕಿದೆ. ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Krishna N K | Last Updated : Mar 18, 2024, 08:42 PM IST
  • ʼಕೃಷ್ಣಂ ಪ್ರಣಯ ಸಖಿʼ ಚಿತ್ರ ತೆರೆಗೆ ಬರಲು ಸಿದ್ದ
  • ಗೋಲ್ಡನ್ ಸ್ಟಾರ್ ಗಣೇಶ್‌ ನಟನೆಯ ಸಿನಿಮಾ
  • ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ.
ವಿಯೆಟ್ನಾಂನಲ್ಲಿ ಗೋಲ್ಡನ್ ಸ್ಟಾರ್..! ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಶೂಟಂಗ್‌ ಮುಕ್ತಾಯ title=
actor Ganesh

Krishnam Pranaya Sakhi movie : ಕನ್ನಡದ ಹಲವು ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಚಿತ್ರೀಕರಣ ವಿಯೆಟ್ನಾಂ ನಲ್ಲಿ ಮುಕ್ತಾಯವಾಗಿದೆ. ಅಲ್ಲಿ ಚಿತ್ರದ ಎರಡು ಹಾಡುಗಳು ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ನಡೆದಿದೆ.  ಇದರೊಂದಿಗೆ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. 

ಗಣೇಶ್, ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಪ್ರಸ್ತುತ ರೀರೆಕಾರ್ಡಿಂಗ್ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲು ಸಿದ್ದವಾಗಲಿದೆ. ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ "ಕೃಷ್ಣಂ ಪ್ರಣಯ ಸಖಿ" ಚಿತ್ರಕ್ಕಿದೆ.

ಇದನ್ನೂ ಓದಿ: ವಿಮಾನದ ಟಾಯ್ಲೆಟ್​ ರೂಮ್‌ನಲ್ಲಿ ನಟ ಸಿದ್ದಾರ್ಥ್ ಮಲ್ಹೋತ್ರಾ ಮೇಲೆ ಹಲ್ಲೆ..! ವಿಡಿಯೋ ವೈರಲ್

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. 

"ಕೃಷ್ಣಂ ಪ್ರಣಯ ಸಖಿ" ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News