`ಗರಡಿ` ಟೈಟಲ್ ಟ್ರ್ಯಾಕ್ ರಿಲೀಸ್ : ಅಭಿಮಾನಿಗಳು ಫಿದಾ
Garadi : ಬಹುನಿರೀಕ್ಷಿತ ಯೋಗರಾಜ್ ಭಟ್ ನಿರ್ದೇಶನದ ʼಗರಡಿ` ಚಿತ್ರ ಇದೇ ನವೆಂಬರ್ 10 ರಂದು ಬಿಡುಗಡೆಗೆ ಸಿದ್ಧವಾಗಿದ್ದು, ನಿನ್ನೆಯಷ್ಟೇ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದೆ.
Garadi Title Track : ಕೌರವ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ʼಗರಡಿ' ಸಿನಿಮಾವನ್ನು ವನಜಾ ಬಿ.ಸಿ ಪಾಟೀಲ್ ನಿರ್ಮಿಸುತ್ತಿದ್ದು, ಯೋಗರಾಜ್ ಭಟ್ ನಿರ್ದೇಶಿಸಿದ್ದಾರೆ. ಬಹುನಿರೀಕ್ಷಿತ ಈ ಸಿನಿಮಾ ನಿನ್ನೆ (ಸೆ.26) ರಂದು ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಿದ್ದು, 'ಸರೆಗಮ ಕನ್ನಡ' ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಗಿಳಿಸಿದ್ದಾರೆ. ಯೋಗರಾಜ್ ಭಟ್ ಅವರು ಬರೆದಿರುವ 'ಲೋಕಾನೆ ಗರಡಿ.. ಬಾಳೇ ಅಖಾಡ" ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ಗಾಯಕರು ಸಹ ಈ ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ನಡೆದ ಈ ಹಾಡಿನ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು.
ಇದನ್ನು ಓದಿ - ರಜನಿಕಾಂತ್ ನಟಿ ಅಮಲಾ ಪೌಲ್ ಮನೆಗೆ ನುಗ್ಗಿ ಧಮ್ಕಿ ಹಾಕಿದ್ದು ನಿಜವೇ!?
"ಗರಡಿ" ಎಂದರೆ ಒಂದು ಊರನ್ನು ಕಾಯುವ ಪೊಲೀಸ್ ಠಾಣೆ ಇದ್ದ ಹಾಗೆ ಎಂದು ಮಾತು ಆರಂಭಿಸಿದ ನಿರ್ದೇಶಕ ಯೋಗರಾಜ್ ಭಟ್, ಹಿಂದೆ ಒಂದು ಊರಿನ ರಕ್ಷಣೆಗೆ "ಗರಡಿ" ಬಹು ಮುಖ್ಯವಾಗಿತ್ತು. ಊರಿನವರು ಸಹ ಗರಡಿ ಮನೆಯ ಕುಸ್ತಿಪಟುಗಳನ್ನು ತಮ್ಮ ಮನೆಯವರಂತೆಯೇ ನೋಡಿಕೊಳ್ಳುತ್ತಿದ್ದರು. ಅಂತಹ "ಗರಡಿ" ಸುತ್ತ ನಮ್ಮ ಚಿತ್ರದ ಕಥೆ ಸಾಗುತ್ತದೆ. ಗರಡಿ ಮನೆಯ ಯಜಮಾನನಾಗಿ ಬಿ.ಸಿ.ಪಾಟೀಲ್ ಅಭಿನಯಿಸಿದ್ದಾರೆ. ಅವರ ಶಿಷ್ಯನಾಗಿ ಸೂರ್ಯ ಅಭಿನಯಿಸಿದ್ದಾರೆ. ಇದು ಒಂದು ರೀತಿ ದ್ರೋಣಾಚಾರ್ಯ ಹಾಗೂ ಏಕಲವ್ಯನ ಕಥೆ ಎನ್ನಬಹುದು. ಈಗಷ್ಟೇ ಬಿಡುಗಡೆಯಾಗಿರುವ ಈ ಹಾಡನ್ನು ಹರಿಕೃಷ್ಣ ಅದ್ಭುತವಾಗಿ ಸಂಯೋಜಿಸಿ ಹಾಡಿದ್ದಾರೆ. ಚಿತ್ರ ನವೆಂಬರ್ 10ರಂದು ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಹಾರೈಸಿ ಎಂದರು.
ಈ ಚಿತ್ರದಲ್ಲೂ ನನ್ನ ಹೆಸರು ಸೂರ್ಯ ಅಂತ. ಎಲ್ಲರೂ "ಗರಡಿ ಸೂರಿ" ಅಂತ ಕರೆಯುತ್ತಿರುತ್ತಾರೆ. ಈ ಚಿತ್ರದಲ್ಲಿ ನನಗೆ ಅವಕಾಶ ಸಿಗಲು ದರ್ಶನ್ ಅವರು ಕಾರಣ. ಅವರು ಸಹ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಇಂದು ಬಿಡುಗಡೆಯಾಗಿರುವ ಟೈಟಲ್ ಸಾಂಗ್ ನಲ್ಲಿ ನಾನು ಸಖತ್ ಡ್ಯಾನ್ಸ್ ಮಾಡಿದ್ದೇನೆ. ಯೋಗರಾಜ್ ಭಟ್ ಅವರ ಸಾಹಿತ್ಯ ಹಾಗೂ ಹರಿಕೃಷ್ಣ ಅವರ ಸಂಗೀತದಲ್ಲಿ ಹಾಡು ಅದ್ಭುತವಾಗಿ ಮೂಡಿಬಂದಿದೆ ಎನ್ನುತ್ತಾರೆ ನಾಯಕ ಸೂರ್ಯ. ನಾಯಕಿ ಸೋನಾಲ್ ಮಾಂತೆರೊ, ಚಿತ್ರದಲ್ಲಿ ನಟಿಸಿರುವ ಸುಜಯ್, ಧರ್ಮಣ್ಣ, ರಾಘು, ಛಾಯಾಗ್ರಾಹಕ ನಿರಂಜನ್ ಬಾಬು, ನೃತ್ಯ ನಿರ್ದೇಶಕ ಧನಂಜಯ ಚಿತ್ರದ ಕುರಿತು ಮಾತನಾಡಿದರು. ನಿರ್ಮಾಪಕಿ ವನಜಾ ಪಾಟೀಲ್ ಎಲ್ಲರಿಗೂ ಧನ್ಯವಾದ ತಿಳಿಸಿದರು. ಕಾರ್ಯಕಾರಿ ನಿರ್ಮಾಪಕಿ ಸೃಷ್ಟಿ ಪಾಟೀಲ್ "ಗರಡಿ" ಚಿತ್ರ ಸಾಗಿ ಬಂದ ಬಗ್ಗೆ ವಿವರಣೆ ನೀಡಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.