ತೆರೆ ಮೇಲೆ ಅಬ್ಬರಿಸೋಕೆ "ಗರುಡ" ರೆಡಿ: ಹಾಡಿಗೆ ಗಣ್ಯರ ಮೆಚ್ಚುಗೆ..!

 ನೃತ್ಯ ನಿರ್ದೇಶಕನಾಗಿ‌ ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶನ ಮಾಡುವ ಆಸೆಯಿತ್ತು. ಇದಕ್ಕೆ ಅವಕಾಶ ಮಾಡಿಕೊಟ್ಟ ಸಿದ್ದಾರ್ಥ್ ಮಹೇಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ಚಿತ್ರತಂಡಕ್ಕೆ ನಿರ್ದೇಶಕ ಧನ ಕುಮಾರ್ ಧನ್ಯವಾದ ಹೇಳಿದರು.

Written by - YASHODHA POOJARI | Edited by - Bhavishya Shetty | Last Updated : May 18, 2022, 03:08 PM IST
  • ಸಿದ್ದಾರ್ಥ್ ಮಹೇಶ್ ಅಭಿನಯದ "ಗರುಡ" ಚಿತ್ರ
  • ಸಿನಿಮಾ ತಂಡಕ್ಕೆ ಶುಭಕೋರಿದ ಗಣ್ಯರು
  • ಧನ್ಯವಾದ ತಿಳಿಸಿದ ನಿರ್ದೇಶಕ ಧನಕುಮಾರ್
ತೆರೆ ಮೇಲೆ ಅಬ್ಬರಿಸೋಕೆ "ಗರುಡ" ರೆಡಿ: ಹಾಡಿಗೆ ಗಣ್ಯರ ಮೆಚ್ಚುಗೆ..!  title=
Garuda Movie

"ಸಿಪಾಯಿ" ಚಿತ್ರದ ಮೂಲಕ ಜನಮನ ಗೆದ್ದಿದ್ದ, ಸಿದ್ದಾರ್ಥ್ ಮಹೇಶ್ ಅಭಿನಯದ "ಗರುಡ" ಚಿತ್ರದ ಹಾಡು ಬಿಡುಗಡೆ ಹಾಗೂ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ನೆರವೇರಿತು. ಶಾಸಕ ಅರವಿಂದ್ ಲಿಂಬಾವಳಿ, ಸಂಸದ ಪಿ.ಸಿ.ಮೋಹನ್, ನಟ ವಿನೋದ್ ಪ್ರಭಾಕರ್, ನಿರ್ದೇಶಕರಾದ ಮಹೇಶ್ ಬಾಬು, ಮಹೇಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ನೃತ್ಯ ನಿರ್ದೇಶಕನಾಗಿ‌ ಹಲವು ವರ್ಷಗಳಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶನ ಮಾಡುವ ಆಸೆಯಿತ್ತು. ಇದಕ್ಕೆ ಅವಕಾಶ ಮಾಡಿಕೊಟ್ಟ ಸಿದ್ದಾರ್ಥ್ ಮಹೇಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕರಿಸಿದ ಚಿತ್ರತಂಡಕ್ಕೆ ನಿರ್ದೇಶಕ ಧನ ಕುಮಾರ್ ಧನ್ಯವಾದ ಹೇಳಿದರು.

ನಾನು ಹಾಗೂ ಧನು ಮಾಸ್ಟರ್ ಚರ್ಚೆ ಮಾಡಿ ಈ ಚಿತ್ರದ ಕಥೆ ಸಿದ್ಧ ಮಾಡಿಕೊಂಡೆವು. ನಂತರ ನಿರ್ಮಾಪಕರಿಗಾಗಿ ಕಾಯುತ್ತಿದ್ದಾಗ, ನಮ್ಮ ತಂದೆ ರಾಜಾ ರೆಡ್ಡಿ ಅವರು ನಿರ್ಮಾಣ ಮಾಡಲು ಮುಂದಾದರು. ಅವರ ಸಹಾಯ ಮರೆಯಲು ಸಾಧ್ಯವಿಲ್ಲ. ಸಮೀಕ್ಷೆಯ ಪ್ರಕಾರ "ಗರುಡ" ಸಾವಿರಾರು ವರ್ಷ ಬದುಕುವ ಪಕ್ಷಿ. ವಯಸ್ಸಾದ ಮೇಲೂ ತಾನೇ ಮತ್ತೆ ಪುಟ್ಟಿದೇಳುವ ಪಕ್ಷಿ ಕೂಡ. ಹಾಗಾಗಿ ನಮ್ಮ ಸಿನಿಮಾಗೆ ಈ ಹೆಸರು ಸೂಕ್ತ ಅನಿಸಿತು. ಕಥೆ ಮಾಡುವಾಗಲೇ ಈ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಅವರು ಅಭಿನಯಿಸಬೇಕೆಂದು ತೀರ್ಮಾನ‌ ಮಾಡಿಕೊಂಡಿದ್ದೆವು. ಕಿಟ್ಟಪ್ಪ ಅಭಿನಯಿಸಲು ಒಪ್ಪಿದರು. ಐಂದ್ರಿತಾ ರೇ, ಆಶಿಕಾ ರಂಗನಾಥ್, ರಂಗಾಯಣ ರಘು ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ತಂತ್ರಜ್ಞರ ಕೆಲಸವೂ ಉತ್ತಮವಾಗಿದೆ. ಇದೇ ಇಪ್ಪತ್ತರಂದು ಚಿತ್ರ ತೆರೆಗೆ ಬರುತ್ತಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ನಾಯಕ ಸಿದ್ದಾರ್ಥ್ ಮಹೇಶ್.

ಶೀನಗರ ಕಿಟ್ಟಿ, ಆಶಿಕಾ ರಂಗನಾಥ್, ಐಂದ್ರಿತಾ ರೇ, ರಂಗಾಯಣ ರಘು ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿ, ಸಿದ್ದಾರ್ಥ್ ಮಹೇಶ್ ಅವರಿಗೆ ಶುಭ ಕೋರಿದರು. ಜೈ ಆನಂದ್ ಛಾಯಾಗ್ರಹಣದ ಬಗ್ಗೆ ಮಾತನಾಡಿದರು. ಹಾಡಗಳು ಹಾಗೂ ಹಾಡಿದವರ ಬಗ್ಗೆ ತಿಳಿಸಿದ ಸಂಗೀತ ನಿರ್ದೇಶಕ ರಘು ದೀಕ್ಷಿತ್, ತಾವು ಈ ಚಿತ್ರದ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ಹೇಳಿದರು.

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News