ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವಣ್ಣನ ಮತ್ತೊಂದು ಅವತಾರ ನೋಡಲು ನೀವು ರೆಡಿನಾ..?
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ `ಘೋಸ್ಟ್` ಚಿತ್ರದ ಮೋಷನ್ ಪೋಸ್ಟರ್ ನೂತನ ವರ್ಷದ ಮೊದಲ ದಿನ ಬಿಡುಗಡೆಯಾಗಿದೆ.
ಶಿವಣ್ಣ ಇತ್ತೀಚಿಗೆ ಮುಟ್ಟಿದೆಲ್ಲ ಚಿನ್ನ ಅನ್ನೋ ಹಾಗೇ ಆಗಿದೆ. ಯಾಕಂದ್ರೆ ಅಭಿಮಾನಿಗಳಿಗೆ ಇಷ್ಟವಾಗೋ ಸಿನಿಮಾಗಳನ್ನೇ ಮಾಡೋ ಮೂಲಕ ಭರ್ಜರಿ ಮನರಂಜನೆ ನೀಡುತ್ತಿದ್ದಾರೆ. ಇತ್ತೀಚಿಗೆ ತೆರೆಕಂಡ 'ವೇದ' ಅಂತೂ ಸೂಪರ್ ಡೂಪರ್ ಹಿಟ್ ಆಯ್ತು. ಇದೀಗ ಸಿನಿ ಪ್ರೇಮಿಗಳಿಗೆ ಶಿವಣ್ಣನ ಮತ್ತೊಂದು ಅವತಾರ ದರ್ಶನವಾಗಲಿದೆ.
ಹೊಸ ವರ್ಷಕ್ಕೆ ಶಿವಣ್ಣನ "ಘೋಸ್ಟ್" ಚಿತ್ರದ ಮೋಷನ್ ಪೋಸ್ಟರ್ ರಿಲೀಸ್ ಆಗಿದ್ದು ಫ್ಯಾನ್ಸ್ ಅಂತೂ ವಾವ್ ಅನ್ನೋ ಲೆವೆಲ್ಲಿಗೆ ಲುಕ್ ಕಿಕ್ ಕೊಟ್ಟಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಈ ಚಿತ್ರಕ್ಕೆ ದ್ವಿತೀಯ ಹಂತದ ಚಿತ್ರೀಕರಣ ಕೂಡ ಪೂರ್ಣಗೊಂಡಿದೆ.
ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ "ಘೋಸ್ಟ್" ಚಿತ್ರದ ಮೋಷನ್ ಪೋಸ್ಟರ್ ನೂತನ ವರ್ಷದ ಮೊದಲ ದಿನ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ಬಾರಿ ಕುತೂಹಲ ಹುಟ್ಟಿಸಿದೆ.
ಜನವರಿ 8 ಕ್ಕೆ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ಕೊಡೋದು ಕನ್ಫರ್ಮ್!
ಬಹು ನಿರೀಕ್ಷಿತ ಈ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿದೆ. ಮೈಸೂರಿನಲ್ಲಿ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮೂರನೇ ಹಂತದ ಚಿತ್ರೀಕರಣ ಫೆಬ್ರವರಿಯಲ್ಲಿ ಆರಂಭವಾಗಲಿದೆ. ನಾಯಕ ಶಿವರಾಜಕುಮಾರ್ ಸೇರಿದಂತೆ ಅನೇಕ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ- ಶಿವರಾಜ್ ಸಕ್ರೆ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ಸಾಥ್: ಷಡಕ್ಷರಿ ಸನ್ ಆಫ್ ಪಂಚಾಕ್ಷರಿ ಟೈಟಲ್ ಲಾಂಚ್
ನಿರ್ದೇಶಕ ಶ್ರೀನಿ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ "ಘೋಸ್ಟ್ " ಚಿತ್ರಕ್ಕಿದೆ. ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಶಿವಣ್ಣನ ಘೋಸ್ಟ್ ಸಿನಿಮಾ ಮಾತ್ರ ಯಾಕೋ ನಮ್ಮನ್ನ ಬೇರೆಯದ್ದೇ ಲೋಕಕ್ಕೆ ಕರ್ಕೊಂಡು ಹೋಗೋ ಲಕ್ಷಣ ಎದ್ದು ಕಾಣುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...