Salar: ಸಲಾರ್ ಪ್ರಭಾಸ್ ಅಭಿನಯದ ಮತ್ತೊಂದು ಅದ್ಧೂರಿ ಆಕ್ಷನ್ ಚಿತ್ರ. ಈ ಚಿತ್ರವನ್ನು ಕೆಜಿಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಭಾರೀ ನಿರೀಕ್ಷೆಗಳ ನಡುವೆ ಬರುತ್ತಿರುವ ಈ ಸಿನಿಮಾದ ಚಿತ್ರೀಕರಣ ಮುಗಿದಿದೆ. ಸದ್ಯ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದೆ. ಈ ಆಕ್ಷನ್ ಡ್ರಾಮಾ ಚಿತ್ರ ಡಿಸೆಂಬರ್ 22 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.


COMMERCIAL BREAK
SCROLL TO CONTINUE READING

ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಈ ಚಿತ್ರವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲು ತಯಾರಕರು ತಯಾರಿ ನಡೆಸುತ್ತಿದ್ದಾರೆ. ಇದು ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ಮಾತ್ರವಲ್ಲದೆ ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿಯೂ ಬಿಡುಗಡೆಯಾಗಲಿದೆ.


ಇದನ್ನೂ ಓದಿ-ರಕ್ಷಕ್‌ ಬುಲೆಟ್‌ ಬಿಗ್‌ ಬಾಸ್ ಮನೆಯಿಂದ ಹೊರ ಬೀಳಲು ಅಸಲಿ ಕಾರಣ ಇದೇನಾ?


ಈ ಸಿನಿಮಾದ ಟ್ರೇಲರ್ ರಿಲೀಸ್ ಆಗುವ ಬಗ್ಗೆ ಇತ್ತೀಚಿನ ಸುದ್ದಿಯೊಂದು ವೈರಲ್ ಆಗಿದೆ. ಈ ಸಿನಿಮಾದ ಟ್ರೇಲರ್ ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆಯಂತೆ. ಈ ಕುರಿತು ಶೀಘ್ರದಲ್ಲೇ ಅಧಿಕೃತ ಸ್ಪಷ್ಟತೆ ಸಿಗಲಿದೆ..


ಇದನ್ನೂ ಓದಿ-ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ "ಇದು ನಮ್ ಶಾಲೆ"


ಪ್ರಭಾಸ್ ಅಭಿಮಾನಿಗಳು ಈಗ ಸಲಾರ್ ಚಿತ್ರದ ಸೆನ್ಸೇಷನಲ್ ಟ್ರೈಲರ್ ಕಟ್‌ಗಾಗಿ ಕಾಯುತ್ತಿದ್ದಾರೆ. ಮತ್ತು ಈ ನಿರೀಕ್ಷಿತ ಟ್ರೇಲರ್ ಯಾವಾಗ ಬಿಡುಗಡೆಯಾಗುತ್ತದೆ ಎಂದು ನಿರೀಕ್ಷಿಸುತ್ತಿದ್ದಾರೆ..


 ಈ ಚಿತ್ರದಲ್ಲಿ ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮತ್ತು ಪೃಥ್ವಿರಾಜ್ ಸುಕುಮಾರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿದ್ದು, ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಸಿನಿಮಾ ಎರಡು ಭಾಗಗಳಲ್ಲಿ ತಯಾರಾಗುತ್ತಿದೆ. ಇದು ಭಾರತೀಯ ಭಾಷೆಗಳಲ್ಲಿ ಮಾತ್ರವಲ್ಲದೆ ಹಲವು ಅಂತಾರಾಷ್ಟ್ರೀಯ ಭಾಷೆಗಳಲ್ಲಿಯೂ ಬಿಡುಗಡೆಯಾಗುತ್ತಿದೆ.. 
 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ