ಬೆಂಗಳೂರು: ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್ , ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ ಎಸ್ ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದು ಆರ್ ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. 


COMMERCIAL BREAK
SCROLL TO CONTINUE READING

ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ. ಆರ್ ಸಿ ಸ್ಟುಡಿಯೋಸ್ ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್ ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ. 


ಆರ್ ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ.ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್ ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸ್ ಪೆಕ್ ಟೆಡ್ ಚಿತ್ರವಾಗಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.