ಸಾಹಸಿ ಸಿಂಹ ಡಾ.ವಿಷ್ಣುವರ್ಧನ್ 72ನೇ ಜಯಂತೋತ್ಸವಕ್ಕೆ ದಾದಾ ಅಭಿಮಾನಿಗಳು ಸಜ್ಜಾಗುತ್ತಿದ್ದಾರೆ. ಇದೇ ಸೆಪ್ಟಂಬರ್ 18ರಂದು ವಿಷ್ಣುವರ್ಧನ್ ಹುಟ್ಟುಹಬ್ಬ ಹಿನ್ನೆಲೆ ಅರ್ಥಪೂರ್ಣ ಕಾರ್ಯಕ್ರಮಗಳು ನಡೆಯಲಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Amala Paul : ಅಮಲಾ ಪೌಲ್‌ 2ನೇ ಮದುವೆ? ಲಿಪ್‌ಲಾಕ್‌ ಫೋಟೋ ವೈರಲ್‌!


ಅದೇ ರೀತಿ ಬರುವ ಡಿಸೆಂಬರ್ 29ಕ್ಕೆ ವಿಷ್ಣು ಚಿತ್ರರಂಗಕ್ಕೆ ಬಂದು 50 ವರ್ಷಗಳು ಪೂರೈಸಲಿವೆ. ಈ ಹಿನ್ನೆಲೆಯಲ್ಲಿ ಡಾ.ವಿಷ್ಣುವರ್ಧನ್ ಸೇನಾ ಸಮಿತಿ ವಿಷ್ಣು ಪುಣ್ಯಭೂಮಿಯಲ್ಲಿ ದಾದಾನ ಪ್ರಮುಖ ಸಿನಿಮಾಗಳ ಐವತ್ತು ಕಟೌಟ್ ನಿಲ್ಲಿಸಿ ದಾಖಲೆ ಬರೆಯಲು ಸಜ್ಜಾಗಿದೆ. ಈ ಬಗ್ಗೆ ವಿಷ್ಣು ಸೇನಾ ಸಮಿತಿ ಸದಸ್ಯರು ಮಾಹಿತಿ ಹಂಚಿಕೊಂಡರು.


ವಿಷ್ಣುಸೇನಾ ಸಮಿತಿ ಆನಂದ್ ಮಾತನಾಡಿ, ಇದೇ ಡಿಸೆಂಬರ್ 29ಕ್ಕೆ ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಬಂದು 50 ವರ್ಷಗಳು ಕಂಪ್ಲೀಟ್ ಆಗುತ್ತದೆ. ಈ ವಿಶೇಷ ಇಟ್ಟುಕೊಂಡು ವಿಷ್ಣು ಪುಣ್ಯಭೂಮಿಯಲ್ಲಿ ವಿಷ್ಣುವರ್ಧನ್ ಸೇನಾನಿ ಮತ್ತು ಹಲವು ಸಂಘ ಸಂಸ್ಥೆಗಳು ಅಧ್ಯಕ್ಷರು ಸೇರಿ ಒಂದೇ ಜಾಗದಲ್ಲಿ ಐವತ್ತು ಕಟೌಟ್ ಹಾಕುತ್ತೇವೆ ಎಂದರು. 


ಇದನ್ನೂ ಓದಿ: ಅನುಪಮ್ ಖೇರ್ ರ 519ನೇ ಚಿತ್ರ ಶಿವ ಶಾಸ್ತ್ರಿ ಬಲ್ಬೋವಾದ ಫಸ್ಟ್ ಲುಕ್ ರಿಲೀಸ್


ವಿಷ್ಣುವರ್ಧನ್ ಅವರ ಯಶಸ್ಸಿ ಚಿತ್ರಗಳ ಕಟೌಟ್ ನಿಲ್ಲಿಸಿ ದಾಖಲೆ ಬರೆಯಲು ಮುಂದಾಗಿದ್ದೇವೆ. ಒಂದು ಕಟೌಟ್ 40 ಅಡಿ ಇರಲಿದೆ. ಇಲ್ಲಿವರೆಗೆ ಭಾರತೀಯ ಚಿತ್ರರಂಗದಲ್ಲಿ ಏಕಸ್ಥಳದಲ್ಲಿ ಯಾವುದೇ ಸ್ಟಾರ್ ಗೆ ಈ ರೀತಿ ಕಟೌಟ್ ನಿಲ್ಲಿಸಿಲ್ಲ ಎಂದು ಮಾಹಿತಿ ಹಂಚಿಕೊಂಡರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.