ತೆರೆಗೆ ಬರುತ್ತಿದೆ ಕಡಲತಡಿಯ ಕಥೆ :ಕುಡುಬಿ ಜನಜೀವನ ‘ಗುಂಮ್ಟಿ’ ಸಿನೆಮಾ ಮೂಲಕ ಅನಾವರಣ
‘ಗುಂಮ್ಟಿ’ ಸಿನೆಮಾದ ಹಾಡಿಗೆ ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ.
ಬೆಂಗಳೂರು : ಈಗಾಗಲೇ ತನ್ನ ಶೀರ್ಷಿಕೆ, ಕಥಾಹಂದರದ ಮತ್ತು ಟ್ರೇಲರ್ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ಈ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ.
‘ತಸ್ಮೈ ಪ್ರೊಡಕ್ಷನ್ಸ್’ ಮತ್ತು ‘ಜ್ಯೋತಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಜಂಟಿಯಾಗಿ ನಿರ್ಮಾಣವಾಗುತ್ತಿರುವ ಸ್ನಿಮಾ ಇದು. ಈ ಚಿತ್ರವನ್ನು ವಿಕಾಸ್ ಎಸ್. ಶೆಟ್ಟಿ ನಿರ್ಮಾಣ ಮಾಡಿದ್ದಾರೆ. ‘ಗುಂಮ್ಟಿ’ ಚಿತ್ರಕ್ಕೆ ಅನೀಶ್ ಡಿಸೋಜಾ ಛಾಯಾಗ್ರಹಣ, ಶಿವರಾಜ ಮೇಹು ಸಂಕಲನವಿದೆ. ‘ಗುಂಮ್ಟಿ’ ಸಿನೆಮಾದ ಹಾಡಿಗೆ ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ.
ಇದನ್ನೂ ಓದಿ : ಸುನಾಮಿ ಕಿಟ್ಟಿ ಅಭಿನಯದ "ಕೋರ" ಸಿನಿಮಾದ "ಒಪ್ಪಿಕೊಂಡಳು" ಹಾಡು ಬಿಡುಗಡೆ..!
ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ‘ಕತ್ತಲೆ ಕೋಣೆ’ ಮತ್ತು ‘ಇನಾಮ್ದಾರ್’ ಸಿನೆಮಾಗಳನ್ನು ನಿರ್ದೇಶಿಸಿ ಕಂಟೆಂಟ್ ಸಿನೆಮಾ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ಸಂದೇಶ ಶೆಟ್ಟಿ ಆಜ್ರಿ, ‘ಗುಂಮ್ಟಿ’ ಸಿನೆಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ. ಜೊತೆಗೆ ತೆರೆಮೇಲೆ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ.
‘ಗುಂಮ್ಟಿ’ ಸಿನೆಮಾದಲ್ಲಿ ವೈಷ್ಣವಿ ನಾಡಿಗ್ ನಾಯಕಿಯಾಗಿ ಮಲ್ಲಿ ಎಂಬ ಹೆಸರಿನ ಕುಡುಬಿ ಸಮುದಾಯದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ, ನೂರ್ ಅಹ್ಮದ್, ಸ್ವರಾಜ್ ಲಕ್ಷ್ಮಿ ಮತ್ತಿತರರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
‘ಕರ್ನಾಟಕದ ಕರಾವಳಿ ಪ್ರದೇಶವಾದ ಕುಂದಾಪುರದ ಸುತ್ತಮುತ್ತ ಕಂಡುಬರುವ ಜಾನಪದ ಕಲೆಯೊಂದನ್ನು ಈ ಸಿನೆಮಾದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಲಾಗಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
‘ಇದೊಂದು ಕಲಾತ್ಮಕ ಸಿನೆಮಾವಾಗಿದ್ದು, ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ತೆರೆಮೇಲೆ ಹೇಳಲು ಹೊರಟಿದೆ ಚಿತ್ರ ತಂಡ.
ಸಿನೆಮಾ ಬಿಡುಗಡೆಗೂ ಮೊದಲೇ ಎಲ್ಲ ಕಡೆಗಳಿಂದ ‘ಗುಂಮ್ಟಿ’ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಸುತ್ತಮುತ್ತಲ ಪ್ರದೇಶ ಸುಮಾರು 50ಕ್ಕೂ ಹೆಚ್ಚು ಪ್ರದರ್ಶನಗಳು ಮುಂಗಡವಾಗಿ ಬುಕ್ಕಿಂಗ್ ಆಗಿದೆ. ರಾಜ್ಯದಾದ್ಯಂತ ಸುಮಾರು 25ಕ್ಕೂ ಹೆಚ್ಚಿನ ಕಡೆಗಳಲ್ಲಿ ‘ಗುಂಮ್ಟಿ’ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.