ಗುರುದೇವ್ ಹೊಯ್ಸಳ-ನಾಳೆ ಬಿಡುಗಡೆಯಾಗಲಿದೆ ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ

Gurudev Hoysala: ಕಳೆದ ವಾರ ಕಿಚ್ಚ ಸುದೀಪ್ ಅವರು ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ 'ಗುರುದೇವ್ ಹೊಯ್ಸಳ' ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಸಾಕಷ್ಟು ಹೆಚ್ಚಿದೆ.

Written by - Yashaswini V | Last Updated : Mar 29, 2023, 05:18 PM IST
  • ಈ ಚಿತ್ರದಲ್ಲಿ ಧನಂಜಯ್ ಅವರಿಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ.
  • ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ, ನಾಗಭೂಷಣ್, ರಘು ಶಿವಮೊಗ್ಗ, ಅನಿರುದ್ಧ್ ಭಟ್, ಮಯೂರಿ ನಟರಾಜ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
ಗುರುದೇವ್ ಹೊಯ್ಸಳ-ನಾಳೆ ಬಿಡುಗಡೆಯಾಗಲಿದೆ ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ   title=
Dolly Dhananjay's 25th film

Dolly Dhananjay's 25th film: ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ 'ಗುರುದೇವ್ ಹೊಯ್ಸಳ' ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 'ಗುರುದೇವ್ ಹೊಯ್ಸಳ' ಒಂದು ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಧನಂಜಯ ಗುರುದೇವ್ ಹೊಯ್ಸಳ ಎಂಬ ರಫ್ ಅಂಡ್ ಟಫ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. 

ಕಳೆದ ವಾರ ಕಿಚ್ಚ ಸುದೀಪ್ ಅವರು ಡಾಲಿ ಧನಂಜಯ್ ಅಭಿನಯದ 25ನೇ ಚಿತ್ರ 'ಗುರುದೇವ್ ಹೊಯ್ಸಳ' ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುವುದರ ಜೊತೆಗೆ, ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಸಾಕಷ್ಟು ಹೆಚ್ಚಿದೆ. ಇದೊಂದು ಉತ್ತರ ಕರ್ನಾಟಕ ಭಾಷೆಯ ಸೊಗಡಿನ ಚಿತ್ರವಾಗಿದ್ದು, ಬಹುತೇಕ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ಆಗಿದೆ.

ಇದನ್ನೂ ಓದಿ- Viral Video: ಪಬ್ಲಿಕ್’ನಲ್ಲಿಯೇ ಲಿಪ್’ಲಾಕ್ ಮಾಡಿಕೊಂಡ ಸ್ಟಾರ್ ನಟ-ನಟಿ: ಇವರ ‘ಪ್ರೇಮ್ ಕಹಾನಿ’ಯ ವಿಡಿಯೋ ನೋಡಿ

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್‌ನಲ್ಲಿ  ಕಾರ್ತಿಕ್ ಗೌಡ ಹಾಗೂ ಯೋಗಿ ಜಿ ರಾಜ್ ನಿರ್ಮಿಸಿರುವ ‘ಗುರುದೇವ್ ಹೊಯ್ಸಳ’ ಚಿತ್ರವನ್ನು ವಿಜಯ್ ಎನ್ ನಿರ್ದೇಶಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.  ಕಾರ್ತಿಕ್ ಛಾಯಾಗ್ರಹಣ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಮಾಸ್ತಿ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ- ವಜ್ರಮುನಿ ಮೊಮ್ಮಗ ಚಿತ್ರರಂಗಕ್ಕೆ ಗ್ರ್ಯಾಂಡ್ ಎಂಟ್ರಿ..!

ಧನಂಜಯ್ ಅವರಿಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ನಟಿಸಿದ್ದಾರೆ. ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ಪ್ರತಾಪ್ ನಾರಾಯಣ್, ರಾಜೇಶ್ ನಟರಂಗ,  ನಾಗಭೂಷಣ್, ರಘು ಶಿವಮೊಗ್ಗ, ಅನಿರುದ್ಧ್ ಭಟ್, ಮಯೂರಿ ನಟರಾಜ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News