ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ: ನಟಿ ಹರಿಪ್ರಿಯಾ
ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ಆಗ್ರಹಿಸಿದ್ದಾರೆ.
ಬೆಂಗಳೂರು: ಎಂಇಎಸ್ ಪುಂಡರ ಪುಂಟಾಡಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಾಪಕ ವ್ಯಕ್ತವಾಗಿದೆ. ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ(Kannada Flag)ಕ್ಕೆ ಬೆಂಕಿ ಇಟ್ಟಿರುವುದು, ಬೆಳಗಾವಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಪ್ರತಿಮೆ ಧ್ವಂಸ ಮಾಡಿರುವ ಕಿಡಗೇಡಿಗಳ ಕೃತ್ಯಕ್ಕೆ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ(Haripriya) ಕೂಡ ಅಸಮಾಧಾವ ವ್ಯಕ್ತಪಡಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ. ತಮ್ಮ ಪೋಸ್ಟ್ ಜೊತೆಗೆ ಅವರು ಕನ್ನಡ ಬಾವುಟದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
WATCH: ರಣವೀರ್ ಸಿಂಗ್, ಕ್ರಿಕೆಟರ್ ಶ್ರೀಕಾಂತ್ಗೆ ಕನ್ನಡ ಡೈಲಾಗ್ ಹೇಳಿಕೊಟ್ಟ ಕಿಚ್ಚ ಸುದೀಪ್
ಎಂಇಎಸ್ ನಿಷೇಧಿಸುವಂತೆ ನಟ ಪ್ರೇಮ್ ಆಗ್ರಹ
ಎಂಇಎಸ್ ಕಾರ್ಯಕರ್ತರ ಪುಂಡಾಟ ಹೀಗೆ ಮುಂದುವರಿದರೆ ರಾಜ್ಯದಲ್ಲಿ ಅದನ್ನು ನಿಷೇಧಿಸುವ(MES Maharastra)ಕುರಿತು ಸರ್ಕಾರ ಚಿಂತಿಸಬೇಕೆಂದು ಚಿತ್ರ ನಟ ‘ನೆನಪಿರಲಿ’ ಪ್ರೇಮ್ ಒತ್ತಾಯಿಸಿದ್ದಾರೆ. ಸುದ್ದಿಗಾರದೊಂದಿಗೆ ಭಾನುವಾರ ಮಾತನಾಡಿರುವ ಅವರು, ‘ಯಾವುದೇ ಸಂಘಟನೆಗಳಿರಲಿ ದೇಶದ ಶಾಂತಿ ಕಾಪಾಡಬೇಕು. ಯಾವುದಾದರೂ ಸಂಘಟನೆಯಿಂದ ಪದೇ ಪದೇ ಶಾಂತಿ ಕದಡುತ್ತದೆ ಎಂದಾದರೆ ಅದನ್ನು ನಿಷೇಧಿಸಲು ಸರ್ಕಾರ ಮುಂದಾಗಬೇಕು. ಕನ್ನಡ ಬಾವುಟ ಸುಟ್ಟವರಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.
‘ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಇದನ್ನು ಹಾಳುವ ಮಾಡುವ ಕೆಲಸಕ್ಕೆ ಎಂಇಎಸ್ ಸಂಘಟನೆ ಕೈಹಾಕಬಾರದು. ಇನ್ನಾದರೂ ಈ ಬಗ್ಗೆ ಅರ್ಥಮಾಡಿಕೊಂಡು ಗೌರವದಿಂದ ನಡೆದುಕೊಳ್ಳಬೇಕು’ ಎಂದು ಪ್ರೇಮ್ ಹೇಳಿದ್ದಾರೆ.
ಇದನ್ನೂ ಓದಿ: Pushpa Box Office Collection:ಕೇವಲ ಎರಡೇ ದಿನಗಳಲ್ಲಿ 100 ಕೋಟಿ ಕ್ಲಬ್ ಗೆ ಶಾಮೀಲಾದ 'ಪುಷ್ಪಾ'
Darshan Thoogudeepa) ಕೂಡ ಕನ್ನಡ ಬಾವುಟ ಸುಟ್ಟಿದಕ್ಕೆ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸಗೊಳಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು. ‘ನಮ್ಮ ಕರುನಾಡ ಧ್ವಜ ಸುಟ್ಟ ಹೇಡಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು. ನಿಜವಾಗಿ ಕನ್ನಡ ಪರ ಹೋರಾಟ ಮಾಡುವವರನ್ನು ಬಿಡುಗಡೆಗೊಳಿಸಿ. ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು. ದಯಮಾಡಿ ತಕ್ಕ ಕ್ರಮ ಕೈಗೊಳ್ಳಬೇಕೆಂದು’ ಅವರು ವಿನಂತಿಸಿಕೊಂಡಿದ್ದರು.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.