ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ನಟಿ ಹರ್ಷಿಕಾ ಪೂಣಚ್ಚ- ಭುವನ್ ದಂಪತಿ
Harshika Poonachcha meets Prahlad Joshi: ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಹಲ್ಲೆ ಸಂಬಂಧ ಪುಲಿಕೇಶಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದು, ನ್ಯಾಯ ದಕ್ಕಿಸಿಕೊಡುವಂತೆ ಪ್ರಹ್ಲಾದ್ ಜೋಶಿ ಅವರ ಮೊರೆ ಇಟ್ಟರು.
ಇದನ್ನೂ ಓದಿ: Sachin Tendulkar: ಪ್ರತಿ ತಿಂಗಳೂ ಲಕ್ಷಗಟ್ಟಲೇ ಆದಾಯ.. ಸಚಿನ್ ತೆಂಡೂಲ್ಕರ್ ಎಷ್ಟು ಸಾವಿರ ಕೋಟಿ ಆಸ್ತಿಗೆ ಒಡೆಯ ಗೊತ್ತಾ?
ನಮ್ಮ ಮೇಲೆ ಹಲ್ಲೆಗೆ ಯತ್ನಿಸಿ ಗಲಾಟೆ ಮಾಡಿದ ಮೂವರನ್ನು ಗುರುತಿಸಿದ್ದೇವೆ. ಪೊಲೀಸರು ಸಿಸಿಟಿವಿ ಪರಿಶೀಲಿಸಿ ಕೆಲ ವ್ಯಕ್ತಿಗಳನ್ನು ತೋರಿಸಿದ್ದು, ನಮ್ಮ ಮೇಲೆ ಗಲಾಟೆ ಮಾಡಿದವರ ಮುಖಚರ್ಯೆ ಇರುವ ವ್ಯಕ್ತಿಗಳನ್ನು ಗುರುತಿಸಿದ್ದೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ನಮಗೆ ಆದಂತೆ ಬೇರೆ ಯಾರಿಗೂ ಆಗಬಾರದು. ಹಾಗಾಗಿ ಪೊಲೀಸರಿಗೆ ದೂರು ಕೊಟ್ಟಿದ್ದು, ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ಭರವಸೆಯಿದೆ ಎಂದು ಹರ್ಷಿಕಾ ಪೂಣಚ್ಚ ಈ ವೇಳೆ ಮಾದ್ಯಮಗಳಿಗೆ ತಿಳಿಸಿದರು.
ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ನಟ ಭುವನ್ ಪೊನ್ನಣ್ಣ ಇದ್ದ ಕಾರಿನ ಮೇಲೆ ಹಲ್ಲೆ ಮಾಡಲಾಗಿತ್ತು. ಕುಟುಂಬ ಸಮೇತ ಆಚೆ ತೆರಳಿದಾಗ ನಡೆದ ಕಹಿ ಅನುಭವವನ್ನು ನಟಿ ಹರ್ಷಿಕಾ ಪೂಣಚ್ಚ ಬಿಚ್ಚಿಟ್ಟಿದ್ದರು. ಘಟನೆಯಲ್ಲಿ ನಟ ಭುವನ್ ಪೊನ್ನಣ್ಣ ಗಾಯಗೊಂಡಿದ್ದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.