Hatya Movie: ಸಸ್ಪೆನ್ಸ್ ಥ್ರಿಲ್ಲರ್ "ಹತ್ಯ" ತೆರೆಗೆ ಬರಲು ಸಿದ್ದ

Hatya Movie: ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ". ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಚಿತ್ರೀಕರಣ ಮುಕ್ತಾಯವಾಗಿದೆ.   

Written by - YASHODHA POOJARI | Last Updated : May 28, 2023, 04:33 PM IST
  • ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ"
  • ಶೀಘ್ರದಲ್ಲೇ ತೆರೆಗೆ ಬರಲಿದೆ "ಹತ್ಯ" ಸಿನಿಮಾ
  • ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣ
Hatya Movie: ಸಸ್ಪೆನ್ಸ್ ಥ್ರಿಲ್ಲರ್ "ಹತ್ಯ" ತೆರೆಗೆ ಬರಲು ಸಿದ್ದ  title=

Hatya Movie: ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ಮರ್ಡರ್ ಮತ್ತು ಅತ್ಯಾಚಾರ, ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟಿದ ಘಟನೆಗಳು ಸೇರಿದಂತೆ ಇಂತಹ ನೈಜ ಘಟನೆಗಳನ್ನು ಆಧರಿಸಿರುವ ಚಿತ್ರವೆ "ಹತ್ಯ". 

ಈ ಚಿತ್ರದ ನಾಯಕಿ ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗುತ್ತದೆ. ಆನಂತರ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ ಇದೇ ಚಿತ್ರದ ಕಥಾಹಂದರ. ಇದೊಂದು ಮಹಿಳಾ ಪ್ರಧಾನ ಚಿತ್ರ  ಎನ್ನುತ್ತಾರೆ ಕಥೆ ಹಾಗೂ ಚಿತ್ರಕಥೆ ಬರೆದಿರುವ ಗಂಗಾಧರ್(ಗಂಗು).

ಇದನ್ನೂ ಓದಿ: ಪವಿತ್ರಾ - ನರೇಶ್‌ ಇಬ್ಬರಲ್ಲಿ ಮೊದಲು ಪ್ರಪೋಸ್‌ ಮಾಡಿದ್ಯಾರು? ತುಂಬಾ ಸ್ಪೆಷಲ್‌ ಆಗಿತ್ತಂತೆ ಆ ಮೊಮೆಂಟ್‌!

ವರುಣ್ ‌.ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ಸಾಗರಂ ವಲ್ಡ್ ಸಿನಿಮಾ ಲಾಂಛನದಲ್ಲಿ ರಾಮಲಿಂಗಂ, ಶ್ಯಾಮ್ ಹಾಗೂ ಗಂಗಾಧರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಅಲೆನ್ ಕ್ರಿಸ್ಟ ಸಂಗೀತ ನಿರ್ದೇಶನ, ಸಂಜೀವ್ ರೆಡ್ಡಿ ಸಂಕಲನ ಹಾಗೂ ಮಾಸ್ ಮಾದ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ವಿಕಾಸ್ ಗೌಡ, ಕಾಮಿಕಾ ಆಂಚಲ್, ಹ್ಯಾರಿ ಜೋಶ್, ಸಂತೋಷ್ ಮೇದಪ್ಪ, ಶ್ಯಾಮ್, ನಾಗೇಶ್ ಮಯ್ಯ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಚಿತ್ರೀಕರಣ ಮುಕ್ತಾಯವಾಗಿದೆ. ಸದ್ಯದಲ್ಲೇ ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.\

ಇದನ್ನೂ ಓದಿ: ರಾಮ್ ಚರಣ್ ನಿರ್ಮಾಣದ ʼದಿ ಇಂಡಿಯನ್ ಹೌಸ್’ ಪವರ್ ಪ್ಯಾಕ್ಡ್ ಮೋಷನ್ ವಿಡಿಯೋ ರಿಲೀಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News