ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಕನ್ನಡದ ನೂರಾರು ಸಿನಿಮಾಗಳಲ್ಲಿ ನಟಿಸಿರುವ ನಟಿ ಹೇಮಾ ಚೌಧರಿ ಅವರಿಗೆ ಬ್ರೇನ್ ಹ್ಯಾಮರೇಜ್ ಆಗಿದೆ ಎಂದು ತಿಳಿದು ಬಂದಿದೆ.


COMMERCIAL BREAK
SCROLL TO CONTINUE READING

ಹೇಮಾ ಚೌಧರಿ ಅವರು ಬೇಗ ಗುಣಮುಖರಾಗಲಿ ಎಂದು ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿಯೂ ಸಹ ನಟಿಯ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. 2 ದಿನಗಳ ಹಿಂದಷ್ಟೇ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್‌ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಇದನ್ನೂ ಓದಿ: “ಐಶ್ವರ್ಯಾನ ಈ ವರ್ತನೆ ನನಗೆ ಇಷ್ಟವಾಗಲ್ಲ”- ಡಿವೋರ್ಸ್ ಸುದ್ದಿ ಮಧ್ಯೆ ನಾದಿನಿಯನ್ನು ದ್ವೇಷಿಸಲು ಕಾರಣ ತಿಳಿಸಿದ ಶ್ವೇತಾ ಬಚ್ಚನ್


ತೀವ್ರ ನಿಗಾ ಘಟಕದಲ್ಲಿ ನಟಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಪುತ್ರ ಐರ್ಲೆಂಡ್​ನಲ್ಲಿ ಇದ್ದು, ಅವರ ಆಗಮನಕ್ಕಾಗಿ ನಟಿ ಕಾಯುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲವೆಂದು ತಿಳಿದು ಬಂದಿದೆ. ಹಿರಿಯ ನಟಿ ಬೇಗ ಗುಣಮುಖರಾಗಲಿ ಅಂತಾ ಕನ್ನಡ ಚಿತ್ರರಂಗದ ನಿರ್ದೇಶಕರು-ನಿರ್ಮಾಪಕರು ಮತ್ತು ನಟ-ನಟಿಯರು ಸೇರಿದತೆ ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.


ಇತ್ತೀಚೆಗಷ್ಟೇ ಹಿರಿಯ ನಟಿ ಲೀಲಾವತಿ ಅವರು ನಿಧನ ಹೊಂದಿದರು. ಲೀಲಾವತಿಯವರ 11ನೇ ದಿನದ ಕಾರ್ಯಕ್ಕೆ ಆಗಮಿಸಿದ್ದ ಹೇಮಾ ಚೌಧರಿ ಅವರು,  ವಿನೋದ್​ ರಾಜ್​ಗೆ ಸಾಂತ್ವನ ಹೇಳಿದ್ದರು. ಆದರೆ ಇದೀಗ ಅವರಿಗೆ ಹಠಾತ್ ಆರೋಗ್ಯ ಸಮಸ್ಯೆ ಎದುರಾಗಿದೆ. 70ರ ದಶಕದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಹೇಮಾ ಚೌಧರಿಯವರು ನೂರಾರು ಸಿನಿಮಾಗಳಲ್ಲಿ ನಟಿಸಿದರು. ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿದ್ದಾರೆ. ಕೆಲವು ಧಾರಾವಾಹಿಗಳಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ನಟಿ ಹೇಮಾ ಅವರಿಗೆ ಅನಾರೋಗ್ಯ ಸಮಸ್ಯೆಯಾಗಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.


ಇದನ್ನೂ ಓದಿ: ಮಾಡಿದ್ದು ಬರೀ ಎರಡೇ ಸಿನಿಮಾ.. ಆದ್ರೆ ನಟಿ ಮೃಣಾಲ್ ಸಂಭಾವನೆ ಎಷ್ಟು ಗೊತ್ತೆ..?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.