ಮ್ಯಾಸೀವ್ ಸ್ಟಾರ್ ರಾಜವರ್ಧನ್ 'ಹಿರಣ್ಯ' ಸಿನಿಮಾದ ಮೆಲೋಡಿ ಹಾಡು ರಿಲೀಸ್

Hiranya Movie melody song: ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ಪದೇ ಪದೇ ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಜೂಡಾ ಸ್ಯಾಂಡ್ ಟ್ಯೂನ್ ಹಾಕಿದ್ದಾರೆ.

Written by - YASHODHA POOJARI | Last Updated : Jun 14, 2024, 01:18 PM IST
  • ಹಿರಣ್ಯ ಸಿನಿಮಾ ಹೊಸ ಹಾಡು ರಿಲೀಸ್‌
  • ಪ್ರಮೋದ್ ಮರವಂತೆ ಸಾಹಿತ್ಯ
  • ಸಂಚಿತ್ ಹೆಗ್ಡೆ ಧ್ವನಿಯಲ್ಲಿ ಮೂಡಿಬಂದ ಹಾಡು
ಮ್ಯಾಸೀವ್ ಸ್ಟಾರ್ ರಾಜವರ್ಧನ್ 'ಹಿರಣ್ಯ' ಸಿನಿಮಾದ ಮೆಲೋಡಿ ಹಾಡು ರಿಲೀಸ್ title=

Hiranya Song: ಬಿಚ್ಚುಗತ್ತಿ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್, ಹಿರಣ್ಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ಪದೇ ಪದೇ ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಜೂಡಾ ಸ್ಯಾಂಡ್ ಟ್ಯೂನ್ ಹಾಕಿದ್ದಾರೆ. 

ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ‘ವೇದಾಸ್ ಇನ್ಫಿನಿಟಿ ಪಿಚ್ಚರ್’ ಬ್ಯಾನರ್ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: "ಶಾರುಖ್ ಖಾನ್ - ಕರಣ್​ ಜೋಹರ್ ಸಲಿಂಗ ಕಾಮಿಗಳು" : ವಿವಾದಕ್ಕೆ ಕಾರಣವಾಯ್ತು ಖ್ಯಾತ ಸಿಂಗರ್‌ ಹೇಳಿಕೆ

ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ರಾಜವರ್ಧನ್‌ಗೆ ಜೋಡಿಯಾಗಿ ನಟಿಸಿದ್ದಾರೆ.

ಹಿರಣ್ಯ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿರುವ ಹಿರಣ್ಯ ಸಿನಿಮಾವನ್ನು ಆದಷ್ಟು ಬೇಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

ಇದನ್ನೂ ಓದಿ: Deepika Padukone: ಎಲ್ಲ ವದಂತಿಗೂ ಬಿತ್ತು ಬ್ರೇಕ್‌..‌ ದೀಪಿಕಾ ಪಡುಕೋಣೆ ಬೇಬಿ ಬಂಪ್ ವಿಡಿಯೋ ವೈರಲ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News