ರಾಜವರ್ಧನ್ 'ಹಿರಣ್ಯ' ಸಿನಿಮಾದ ಡ್ಯಾನ್ಸಿಂಗ್ ನಂಬರ್ ರಿಲೀಸ್...ಬೈಲಾ ಬೈಲಾ ಅಂತಾ ಹೆಜ್ಜೆ ಹಾಕಿದ ದಿವ್ಯಾ ಸುರೇಶ್

ರಾಜವರ್ಧನ್‌ ನಾಯಕರಾಗಿರುವ “ಹಿರಣ್ಯ’ ಚಿತ್ರ ಜುಲೈ 19ಕ್ಕೆ ತೆರೆಕಾಣುತ್ತಿದೆ. ಈಗ ಚಿತ್ರದ ಡ್ಯಾನ್ಸಿಂಗ್ ನಂಬರ್ ಅನಾವರಣಗೊಂಡಿದೆ. ಬೈಲಾ ಬೈಲಾ  ಎಂಬ ಹಾಡಿಗೆ ದಿವ್ಯಾ ಸುರೇಶ್ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್  ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, 

Written by - YASHODHA POOJARI | Edited by - Manjunath N | Last Updated : Jul 17, 2024, 10:45 PM IST
  • ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ “ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ.
  • “ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ರಿಹಾನಾ ಜೋಡಿಯಾಗಿದ್ದು, ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.
 ರಾಜವರ್ಧನ್ 'ಹಿರಣ್ಯ' ಸಿನಿಮಾದ ಡ್ಯಾನ್ಸಿಂಗ್ ನಂಬರ್ ರಿಲೀಸ್...ಬೈಲಾ ಬೈಲಾ ಅಂತಾ ಹೆಜ್ಜೆ ಹಾಕಿದ ದಿವ್ಯಾ ಸುರೇಶ್ title=

ಬೆಂಗಳೂರು: ರಾಜವರ್ಧನ್‌ ನಾಯಕರಾಗಿರುವ “ಹಿರಣ್ಯ’ ಚಿತ್ರ ಜುಲೈ 19ಕ್ಕೆ ತೆರೆಕಾಣುತ್ತಿದೆ. ಈಗ ಚಿತ್ರದ ಡ್ಯಾನ್ಸಿಂಗ್ ನಂಬರ್ ಅನಾವರಣಗೊಂಡಿದೆ. ಬೈಲಾ ಬೈಲಾ  ಎಂಬ ಹಾಡಿಗೆ ದಿವ್ಯಾ ಸುರೇಶ್ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್  ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, 
ಜೂಡಾ ಸ್ಯಾಂಡಿ ಸಂಗೀತ ಒದಗಿಸಿದ್ದಾರೆ.

ಇದನ್ನೂ ಓದಿ: HD Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ!

ಈಗಾಗಲೇ ಹಲವು ಶಾರ್ಟ್‌ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ “ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್‌ ವುಡ್‌ಗೆ ಪರಿಚಯವಾಗುತ್ತಿದ್ದಾರೆ. “ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ಗೆ ನಾಯಕಿಯಾಗಿ ರಿಹಾನಾ ಜೋಡಿಯಾಗಿದ್ದು, ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

ಇದನ್ನೂ ಓದಿ: ಶ್ರೀಲಂಕಾದ ಮಾಜಿ ಕ್ರಿಕೆಟಿಗನ ಹತ್ಯೆ..! ಭಾರತ ಪ್ರವಾಸಕ್ಕೂ ಮುನ್ನವೇ ಶ್ರೀಲಂಕಾದಲ್ಲಿ ಆತಂಕದ ವಾತಾವರಣ...

ಆ್ಯಕ್ಷನ್‌-ಥ್ರಿಲ್ಲರ್‌ ಜೊತೆಗೆ ತಾಯಿ ಸೆಂಟಿಮೆಂಟ್‌ ಕಥಾಹಂದರ ಹೊಂದಿರುವ “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಹಿರಣ್ಯ’ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News