‘ಹೊಂದಿಸಿ ಬರೆಯಿರಿ’ ಟೀಸರ್ ರಿಲೀಸ್! ನಿಮ್ಮ ವಿದ್ಯಾರ್ಥಿ ಜೀವನ ನೆನಪಿಸುತ್ತೆ ಈ ಕತೆ
ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ..ಟಗರು ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.
ಇಂಜಿನಿಯರಿಂಗ್ ಕಾಲೇಜ್ ಫ್ರೊಫೆಸರ್ ಆಗಿದ್ದ ರಾಮೇನಹಳ್ಳಿ ಜಗನ್ನಾಥ್ (Ramanahalli Jagannath) ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ನಿರ್ದೇಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ರಾಕ್ ಲೈನ್ ಪ್ರೊಡಕ್ಷನ್ ಹೌಸ್ ನಲ್ಲಿ (Rockline Production House) ಡೈರೆಕ್ಷನ್ ವಿಭಾಗದಲ್ಲಿ ಕೆಲಸ ಮಾಡಿರುವ ಅನುಭವವಿರುವ ಜಗನ್ನಾಥ್ ಈ ಸಿನಿಮಾ ಮೂಲಕ ಪೂರ್ಣಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಈಗಾಗಲೇ ಹೊಂದಿಸಿ ಬರೆಯಿರಿ (Hondisi Bareyiri) ಸಿನಿಮಾದ ಫಸ್ಟ್ ಲುಕ್ ರಿಲೀಸ್ ಸಖತ್ ಸೌಂಡ್ ಮಾಡಿತ್ತು. ಈಗ ಬಿಡುಗಡೆಯಾಗಿರುವ ಟೀಸರ್ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಇದನ್ನೂ ಓದಿ: Alia Bhatt:ಫೋನ್ ಮೂಲಕ ರಣಬೀರ್ ಕಪೂರ್‌ಗೆ ಆಲಿಯಾ ಭಟ್ ಆರ್ಡರ್ ಮಾಡಿದ್ದೇನು?
ವಿದ್ಯಾರ್ಥಿ ಜೀವನದ ಅನುಭವ ಅನಾವರಣ: ನೆನಪು, ಕನಸು ಹಾಗೂ ವಾಸ್ತವ..ಈ ಮೂರು ಪರಿಕಲ್ಪನೆಗಳ ಮೇಲೆ ಅನಾವರಣವಾಗುವ ಸಿನಿಮಾವೇ ಹೊಂದಿಸಿ ಬರೆಯಿರಿ. ಅದರಂತೆ ಟೀಸರ್ ನಲ್ಲಿ ಕಾಲೇಜ್ ನೆನಪುಗಳ ಕಟ್ಟಿಕೊಡಲಾಗಿದೆ. ವಿದ್ಯಾರ್ಥಿ ಜೀವನದ ಏರಿಳಿತಗಳನ್ನು ತೋರಿಸಲಾಗಿದೆ. ಸಖತ್ ಪ್ರಾಮೀಸ್ ಆಗಿ ಮೂಡಿ ಬಂದಿರುವ ಟೀಸರ್ ನಲ್ಲಿ ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಗುಳ್ಟು (Gultu) ಖ್ಯಾತಿಯ ನವೀನ್, ವಾಸ್ತುಪ್ರಕಾರದಿಂದ ಪರಿಚಿತರಾದ ಐಶಾನಿ ಶೆಟ್ಟಿ, ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಗೆ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್, ಸಂಯುಕ್ತ ಹೊರನಾಡು, ಇಷ್ಟದೇವತೆ ಧಾರಾವಾಹಿಯ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಮಿಂಚಿದ್ದಾರೆ.
ಇದನ್ನೂ ಓದಿ: John Zaritsky: ಆಸ್ಕರ್ ಪ್ರಶಸ್ತಿ ವಿಜೇತ ಜಾನ್ ಜರಿಟ್ಸ್ಕಿ ನಿಧನ
ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು (Tagaru) ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. 'ಗುಳ್ಟು' ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.
ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ ಹೊಂದಿಸಿ ಬರೆಯಿರಿ ಸಿನಿಮಾವನ್ನು "ಸಂಡೇ ಸಿನಿಮಾಸ್ "ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.