ʼಹಾಸ್ಟೆಲ್‌ ಹುಡುಗರಿಗೆʼ ಡಿಮ್ಯಾಂಡ್‌..! ತೆಲುಗು ರಾಜ್ಯಗಳಲ್ಲಿ ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಸಿನಿಮಾ ರಿಲೀಸ್‌

Boys hostel telugu movie : ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವೀಗ ತೆಲುಗಿನತ್ತ ಹೆಜ್ಜೆ ಇಟ್ಟಿದೆ. ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ಈ ಚಿತ್ರವನ್ನು ʼಬಾಯ್ಸ್ ಹಾಸ್ಟೆಲ್ʼ ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ.

Written by - YASHODHA POOJARI | Edited by - Krishna N K | Last Updated : Aug 13, 2023, 01:44 PM IST
  • ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವೀಗ ತೆಲುಗಿನತ್ತ ಹೆಜ್ಜೆ ಇಟ್ಟಿದೆ.
  • ʼಬಾಯ್ಸ್ ಹಾಸ್ಟೆಲ್ʼ ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ.
  • ಇದೇ ತಿಂಗಳ‌ 26ಕ್ಕೆ ಸಿನಿಮಾ ತೆಲುಗು ಪ್ರೇಕ್ಷಕರ ಎದುರು ಸಿನಿಮಾ ಹಾಜರಾಗಲಿದೆ.
ʼಹಾಸ್ಟೆಲ್‌ ಹುಡುಗರಿಗೆʼ ಡಿಮ್ಯಾಂಡ್‌..! ತೆಲುಗು ರಾಜ್ಯಗಳಲ್ಲಿ ʼಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಸಿನಿಮಾ ರಿಲೀಸ್‌ title=

Hostel hudugaru bekagiddare : ಕನ್ನಡ ಚಿತ್ರರಂಗಕ್ಕೆ ಹೊಸ ಹುರುಪು ನೀಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವೀಗ ತೆಲುಗಿನತ್ತ ಹೆಜ್ಜೆ ಇಟ್ಟಿದೆ. ಕನ್ನಡ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆ ಪಡೆದಿಕೊಂಡಿರುವ ಈ ಚಿತ್ರವನ್ನು ʼಬಾಯ್ಸ್ ಹಾಸ್ಟೆಲ್ʼ ಹೆಸರಿನಡಿ ತೆಲುಗಿಗೆ ಡಬ್ ಮಾಡಲಾಗ್ತಿದೆ. ಇದೇ ತಿಂಗಳ‌ 26ಕ್ಕೆ ಸಿನಿಮಾ ತೆಲುಗು ಪ್ರೇಕ್ಷಕರ ಎದುರು ಸಿನಿಮಾ ಹಾಜರಾಗಲಿದೆ. 

ನಿತಿನ್ ಕೃಷ್ಣಮೂರ್ತಿ ಚೊಚ್ಚಲ ಪ್ರಯತ್ನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ರಾಜ್ಯ ಮಾತ್ರವಲ್ಲದೇ ಅಕ್ಕ ಪಕ್ಕದ ರಾಜ್ಯ ಹಾಗೂ ವಿದೇಶದಲ್ಲಿಯೂ ಬಿಡುಗಡೆಯಾಗಿ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿತ್ತು. ತುಂಗಾ ಬಾಯ್ಸ್ ಹಾಸ್ಟೆಲ್ ಹುಡುಗರ ಕಾಮಿಡಿ ಕ್ವಾಟ್ಲೆ ಪ್ರೇಕ್ಷಕರಿಗೆ ನಗುವಿನ ಕಚಗುಳಿ ಇಟ್ಟಿತ್ತು. ಇದೀಗ ಆಂಧ್ರ ಹಾಗೂ ತೆಲಂಗಾಣ ರಾಜ್ಯದಲ್ಲಿ ಬಾಯ್ಸ್ ಹಾಸ್ಟೆಲ್ ಟೈಲಟ್ ನಡಿ ತೆಲುಗು ಭಾಷೆಗೆ ಡಬ್ ಆಗ್ತಿರೋದು ಖುಷಿ ವಿಚಾರ.

ಇದನ್ನೂ ಓದಿ: ಆಲಿಯಾ ಭಟ್‌ ಮೊದಲ ಸಿನಿಮಾ ಯಾವುದು ಗೊತ್ತೇ? ಸ್ಟೂಡೆಂಟ್‌ ಆಫ್‌ ದಿ ಇಯರ್‌ ಅಲ್ಲವೇ ಅಲ್ಲ!

ಚಾಯ್ ಬಿಸ್ಕೆಟ್ ಫಿಲ್ಮ್ಸ್ ಮತ್ತು ಅನ್ನಪೂರ್ಣ ಸ್ಟುಡಿಯೋಸ್ ಜಂಟಿಯಾಗಿ ತೆಲುಗಿನಲ್ಲಿ ’ಬಾಯ್ಸ್ ಹಾಸ್ಟೆಲ್’ ಶೀರ್ಷಿಕೆಯಲ್ಲಿ ಈ ಚಿತ್ರವನ್ನು ಆಗಸ್ಟ್ 26ರಂದು ಬಿಡುಗಡೆ ಮಾಡುತ್ತಿವೆ. ಕನ್ನಡದಲ್ಲಿ ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಪರವಃ ಪಿಕ್ಚರ್ಸ್ ಬ್ಯಾನರ್‌ ಅಡಿ ಪ್ರೆಸೆಂಟ್ ಮಾಡಿದ್ದಾರೆ. ರಂಗಭೂಮಿ ಹಿನ್ನೆಲೆ ಹೊಂದಿರುವ ಪ್ರತಿಭಾನ್ವಿತ ತಂಡಕ್ಕೆ ರಿಷಬ್ ಶೆಟ್ಟಿ, ರಮ್ಯಾ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ಇನ್ನಿತರರು ಸಾಥ್ ಕೊಟ್ಟಿದ್ದಾರೆ. ಗುಲ್ಮೊಹರ್ ಫಿಲ್ಮ್ಸ್ ಮತ್ತು ವರುಣ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News