ಕನ್ನಡತಿ ನಟಿ ರಶ್ಮಿಕಾ ಸರಳವಾಗಿ ಎಷ್ಟು ಭಾಷೆ ಮಾತಾಡ್ತಾರೆ ಅಂತ ನಿಮ್ಗೆ ಗೊತ್ತಾ..? ಖಂಡಿತ ಶಾಕ್ ಆಗ್ತೀರಾ
Rashmika Mandanna : ಪ್ಯಾನ್ ಇಂಡಿಯಾ ಸ್ಟಾರ್ ನಟಿ ರಶ್ಮಿಕಾ ಮಂದಣ್ಣ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಈ ಚೆಲುವೆ ಅನಿಮಲ್ ಮತ್ತು ಪುಷ್ಪಾ 2 ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗೆ ನಟಿ ಭಾಷೆಯ ಕುರಿತ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Rashmika Mandanna viral video : ಕಿರಿಕ್ ಚಿತ್ರದ ಮೂಲಕ ರಶ್ಮಿಕಾ ಮಂದಣ್ಣ ಬಣ್ಣದ ಲೋಕಕ್ಕೆ ಕಾಲಿಟ್ಟರು. ತೆಲುಗು ಪುಷ್ಪ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚಿದರು. ಅಲ್ಲಿಯವರೆಗೂ ಸೌತ್‌ಗೆ ಸೀಮಿತವಾಗಿದ್ದ ಚೆಲುವೆಗೆ ಸಧ್ಯ ಬಾಲಿವುಡ್ ಭಾರೀ ಬೇಡಿಕೆ ಇದೆ. ಇದೀಗ ರಶ್ಮಿಕಾ ಕುರಿತ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ.
ಹೌದು.. ನಟಿ ರಶ್ಮಿಕಾಗೆ ಅಭಿಮಾನಿಗಳು ಎಷ್ಟು ಭಾಷೆ ಬರುತ್ತವೆ ಅಂತ ಪ್ರಶ್ನೆ ಮಾಡಿದ್ದರು. ಅದಕ್ಕೆ ಉತ್ತರಿಸಿರುವ ನ್ಯಾಷುನಲ್ ಕ್ರಶ್ 6 ಭಾಷೆಗಳನ್ನು ನಿರರ್ಗಳವಾಗಿ ಮಾತನಾಡುವುದಾಗಿ ಹೇಳಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದ ವಿಡಿಯೋ ಒಂದು ವೈರಲ್ ಆಗುತ್ತಿದೆ.
ʼಲಿಯೋʼ ಸಿನಿಮಾ ಪ್ರದರ್ಶನದ ವೇಳೆ ಚಿತ್ರಮಂದಿರದಲ್ಲೇ ನಿಶ್ಚಿತಾರ್ಥ ಮಾಡಿಕೊಂಡ ವಿಜಯ್ ಫ್ಯಾನ್..!
ಭಾರತೀಯ ಸಿನಿ ರಂಗದಲ್ಲಿ ಬಹು ಬೇಡಿಕೆಯ ನಟಿಯರಲ್ಲಿ ರಶ್ಮಿಕಾ ಕೂಡ ಒಬ್ಬರು. ರಶ್ಮಿಕಾ ಮುಂಬರುವ ಬಹುನಿರೀಕ್ಷತ ಸಿನಿಮಾಗಳಲ್ಲಿ ಅನಿಮಲ್ ಚಿತ್ರವೂ ಒಂದು. ರಣಬೀರ್ ಕಪೂರ್ ಅಭಿನಯದ ಈ ಚಿತ್ರ ಡಿಸೆಂಬರ್ 01 ರಂದು ಬಿಡುಗಡೆಯಾಗಲಿದೆ. ಅರ್ಜುನ್ ರೆಡ್ಡಿ ಖ್ಯಾತಿಯ ಸಂದೀಪ್ ರೆಡ್ಡಿ ವಂಗ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮತ್ತೊಂದೆಡೆ ಅಲ್ಲು ಅರ್ಜುನ್ ನಟನೆಯ 'ಪುಷ್ಪ 2' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರ ಮುಂದಿನ ವರ್ಷ ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ.
ಮತ್ತೊಂದೆಡೆ, ರಶ್ಮಿಕಾ ʼಕಾಮನಬಿಲ್ಲುʼ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದ್ವಿಭಾಷಾ ತಯಾರಾಗುತ್ತಿರುವ ಈ ಚಿತ್ರವನ್ನು ಶಾಂತ್ರುಬನ್ ನಿರ್ದೇಶಿಸುತ್ತಿದ್ದು, ಡ್ರೀಮ್ ವಾರಿಯರ್ಸ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಎಸ್‌ಆರ್ ಪ್ರಭು ಮತ್ತು ಎಸ್‌ಆರ್ ಪ್ರಕಾಶ್ ಬಾಬು ನಿರ್ಮಿಸುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಈಗಾಗಲೇ ವೈರಲ್ ಆಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.