ನ.11ರಂದು ತೆರೆಗೆ ಬರಲಿದೆ “ಹುಬ್ಬಳ್ಳಿ ಡಾಬಾ”: ದ್ವಿಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್

ಕೊರೊನಾ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿ, ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ತೆಲುಗಿನ ನವೀನ್ ಚಂದ್ರ ಈ ಚಿತ್ರದ ನಾಯಕ. ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ

Written by - Bhavishya Shetty | Last Updated : Nov 7, 2022, 01:15 PM IST
    • ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹುಬ್ಬಳ್ಳಿ ಡಾಬಾ
    • ಕೊರೊನಾ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು
    • ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ
ನ.11ರಂದು ತೆರೆಗೆ ಬರಲಿದೆ “ಹುಬ್ಬಳ್ಳಿ ಡಾಬಾ”: ದ್ವಿಭಾಷೆಯಲ್ಲಿ ಏಕಕಾಲಕ್ಕೆ ರಿಲೀಸ್ title=
Hubli Daba

ನನ್ನವನು, ಕೋಟೆ, ದಂಡುಪಾಳ್ಯ, ಶಿವ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ ಅನುಭವ ಇರುವ ಶ್ರೀನಿವಾಸರಾಜು ಇದೀಗ "ಹುಬ್ಬಳ್ಳಿ ಡಾಬಾ" ಎಂಬ ಚಿತ್ರವನ್ನೂ ನಿರ್ದೇಶಿಸಿದ್ದಾರೆ. ಈ ಸಿನಿಮಾ ನವೆಂಬರ್ 11 ರಂದು ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: 'ಸ್ಪೂಕಿ ಕಾಲೇಜಿ'ನಲ್ಲಿರೋ ದೆವ್ವದ ಕಥೆ ನೋಡಲು ನವೆಂಬರ್ 25ಕ್ಕೆ ತನಕ ಕಾಯಿರಿ...!

ಕೊರೊನಾ ಎರಡನೇ ಅಲೆ ಸಮಯದಲ್ಲಿ ಆರಂಭವಾದ ಸಿನಿಮಾವಿದು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿ, ನವೆಂಬರ್ 11 ರಂದು ಬಿಡುಗಡೆಯಾಗುತ್ತಿದೆ. ತೆಲುಗಿನ ನವೀನ್ ಚಂದ್ರ ಈ ಚಿತ್ರದ ನಾಯಕ. ದಿವ್ಯ ಪಿಳ್ಳೈ, ಅನನ್ಯ ಸೇನ್ ಗುಪ್ತ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಇನ್ನು ‌ರವಿಶಂಕರ್, ರಾಜಾ ರವೀಂದ್ರ, ನಾಗಬಾಬು, ಅಯ್ಯಪ್ಪ ಶರ್ಮ, ಪೂಜಾ ಗಾಂಧಿ, ರವಿಕಾಳೆ, ಮಕರಂದ ದೇಶಪಾಂಡೆ ಮುಂತಾದವರ ತಾರಾ ಬಳಗವಿದೆ

ಚಿತ್ರದ ವಿಶೇಷ ಸಂದರ್ಭದಲ್ಲಿ "ದಂಡುಪಾಳ್ಯ" ಗ್ಯಾಂಗ್ ನವರ ಸನ್ನಿವೇಶಗಳು ಸಹ ಬರುತ್ತದೆ. ಹಾಗಾಗಿ ಆ ಚಿತ್ರದಲ್ಲಿ ಅಭಿನಯಿಸಿದ್ದ ಕಲಾವಿದರು ಈ ಚಿತ್ರದಲ್ಲೂ ಅಭಿನಯಿಸಿದ್ದಾರೆ. ‌ಮೂರು ಹಾಡುಗಳನ್ನು ನಾಗೇಂದ್ರ ಪ್ರಸಾದ್ ಬರೆದಿದ್ದಾರೆ. ಚರಣ್ ಅರ್ಜುನ್ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಈ ಚಿತ್ರದ ಛಾಯಾಗ್ರಹಕರಾಗಿ ಕೆಲಸ ಮಾಡಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಚಿತ್ರದ ಬಗ್ಗೆ ವಿವರಣೆ ನೀಡಿದ್ದ ನಿರ್ದೇಶಕ ಶ್ರೀನಿವಾಸರಾಜು, ಚಿತ್ರಕ್ಕೆ ಎಲ್ಲರ ಪ್ರೋತ್ಸಾಹವಿರಲಿ ಎಂದರು.

ಇದನ್ನೂ ಓದಿ: ‘ರೇಮೊ’ಟ್ರೇಲರ್ ರಿಲೀಸ್ ಮಾಡಿ ಶುಭ ಹಾರೈಸಿದ ಶಿವಣ್ಣ

“ನನಗೆ ಶ್ರೀನಿವಾಸರಾಜು ಕೋಟೆ ಚಿತ್ರದಲ್ಲಿ ಅವಕಾಶ ನೀಡಿದ್ದರು. ದಂಡುಪಾಳ್ಯ ಚಿತ್ರದಲ್ಲೂ ನಟಿಸಿದ್ದೆ. ಈ ಚಿತ್ರದಲ್ಲಿ ನಾನು ಚಲಪತಿ ಹೆಸರಿನ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ಚಿತ್ರದ ಕುರಿತು ಇನ್ನೊಂದು ಹೆಮ್ಮೆಯ ವಿಷಯವೆಂದರೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಎಂಭತ್ತರ ದಶಕದಲ್ಲಿ ಸಂಗೀತ ನೀಡಿದ್ದ, ಜನಪ್ರಿಯ ತಮಿಳು ಚಿತ್ರದ ಗೀತೆಯೊಂದರ ಟ್ಯೂನ್ ಬಳಸಿಕೊಳ್ಳಲು ಶ್ರೀನಿವಾಸರಾಜು ಅವರಿಗೆ ಅವಕಾಶ ನೀಡಿದ್ದಾರೆ. ಈ ಹಾಡು ಇಳಯರಾಜ ಅವರ ಅಭಿಮಾನಿಯಾಗಿರುವ ನನ್ನ ಇಷ್ಟದ ಗೀತೆಯೂ ಹೌದು” ಎಂದು ನಟ ರವಿಶಂಕರ್ ತಿಳಿಸಿದರು. ಕ್ಲೈಮ್ಯಾಕ್ಸ್  ಸಾಹಸ ಸನ್ನಿವೇಶವನ್ನು ಹನ್ನೆರಡು ದಿನಗಳ ಕಾಲ ಚಿತ್ರಿಸಿರುವುದು ಚಿತ್ರದ ವಿಶೇಷಗಳಲ್ಲೊಂದು ಎಂದರು ರವಿಶಂಕರ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News